AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ತ ಕುಡೀತಾಳೆ, ಮಾಟ ಮಾಡ್ತಾಳೆ’: ಕಂಗನಾ ಮೇಲೆ ಬಂದಿತ್ತು ಏನೇನೋ ಆರೋಪ

Kangana Ranaut: ಸಂಸದೆಯೂ ಆಗಿರುವ ಕಂಗನಾ ರನೌತ್, ಹಲವು ವರ್ಷಗಳಿಂದಲೂ ಬಾಲಿವುಡ್​ ಮಂದಿಯನ್ನು, ಬಾಲಿವುಡ್​​ನ ಪದ್ಧತಿಗಳನ್ನು ಟೀಕಿಸುತ್ತಲೇ ಬಂದಿದ್ದಾರೆ. ಅದರಲ್ಲೂ ಕರಣ್ ಜೋಹರ್, ಮಹೇಶ್ ಭಟ್ ಇನ್ನೂ ಕೆಲವು ‘ದೊಡ್ಡವರ’ ಬಗ್ಗೆ ಬಹಿರಂಗ ಟೀಕೆಗಳನ್ನು ಮಾಡಿದ್ದಾರೆ. ಇದೀಗ ಕಂಗನಾ, ಸಂದರ್ಶನವೊಂದರಲ್ಲಿ ತಮ್ಮ ಮೇಲೆ ಬಾಲಿವುಡ್​ನ ಕೆಲವರು ಮಾಡಿದ್ದ ನೀಚ ಆರೋಪಗಳ ಬಗ್ಗೆ ಮಾತನಾಡಿದ್ದಾರೆ.

‘ರಕ್ತ ಕುಡೀತಾಳೆ, ಮಾಟ ಮಾಡ್ತಾಳೆ’: ಕಂಗನಾ ಮೇಲೆ ಬಂದಿತ್ತು ಏನೇನೋ ಆರೋಪ
Kangana1
ಮಂಜುನಾಥ ಸಿ.
|

Updated on:Apr 17, 2026 | 1:27 PM

Share

ಕಂಗನಾ ರನೌತ್ (Kangana Ranaut), ಬಾಲಿವುಡ್​​ನಲ್ಲಿದ್ದರೂ ಬಾಲಿವುಡ್​​ನವರಲ್ಲ ಸ್ಟಾರ್ ನಟಿ. ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟಿಯರಲ್ಲಿ ಪ್ರಮುಖರಾಗಿರುವ ಕಂಗನಾ ರನೌತ್ ನಟನೆಗೆ ಮೂರು ರಾಷ್ಟ್ರಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಇದೀಗ ಸಂಸದೆಯೂ ಆಗಿರುವ ಕಂಗನಾ ರನೌತ್, ಹಲವು ವರ್ಷಗಳಿಂದಲೂ ಬಾಲಿವುಡ್​ ಮಂದಿಯನ್ನು, ಬಾಲಿವುಡ್​​ನ ಪದ್ಧತಿಗಳನ್ನು ಟೀಕಿಸುತ್ತಲೇ ಬಂದಿದ್ದಾರೆ. ಅದರಲ್ಲೂ ಕರಣ್ ಜೋಹರ್, ಮಹೇಶ್ ಭಟ್ ಇನ್ನೂ ಕೆಲವು ‘ದೊಡ್ಡವರ’ ಬಗ್ಗೆ ಬಹಿರಂಗ ಟೀಕೆಗಳನ್ನು ಮಾಡಿದ್ದಾರೆ. ಇದೀಗ ಕಂಗನಾ, ಸಂದರ್ಶನವೊಂದರಲ್ಲಿ ತಮ್ಮ ಮೇಲೆ ಬಾಲಿವುಡ್​ನ ಕೆಲವರು ಮಾಡಿದ್ದ ನೀಚ ಆರೋಪಗಳ ಬಗ್ಗೆ ಮಾತನಾಡಿದ್ದಾರೆ.

ಹಿಂದೊಮ್ಮೆ ಕಂಗನಾ ರನೌತ್ ಅವರು ನಟ ಅಧ್ಯಯನ್ ಸುಮನ್ ಅವರೊಟ್ಟಿಗೆ ಪ್ರೀತಿಯಲ್ಲಿದ್ದರು. ಇಬ್ಬರೂ ಒಟ್ಟಿಗೆ ‘ರಾಜ್ 2’ ಸಿನಿಮಾನಲ್ಲಿ ನಟಿಸಿದ್ದರು. ಆಗ ಪರಸ್ಪರ ರಿಲೇಷನ್​​ನಲ್ಲಿದ್ದರು. ಆದರೆ ಒಂದೇ ವರ್ಷಕ್ಕೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿತು. ಆ ಸಮಯದಲ್ಲಿ ಕಂಗನಾ ರನೌತ್ ವಿರುದ್ಧ ಅಧ್ಯಯನ್, ದೈಹಿಕ ಮತ್ತು ಮಾನಸಿಕ ಹಲ್ಲೆಯ ಆರೋಪ ಮಾಡಿ ದೂರು ಸಹ ದಾಖಲಿಸಿದ್ದರು. ಈ ವಿಷಯವನ್ನು ಸಂದರ್ಶನದಲ್ಲಿ ನಟಿ ಕಂಗನಾ ರನೌತ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಕಂಗನಾ ರನೌತ್ ಮುಂದಿನ ಸಿನಿಮಾಕ್ಕೆ ಆ ಕರಾಳ ಘಟನೆ ಸ್ಪೂರ್ತಿ

‘ನನ್ನ ವಿರುದ್ಧ ಆಗ ಏನೇನೋ ಆರೋಪಗಳನ್ನು ಮಾಡಲಾಗಿತ್ತು. ಇವಳು ಮಾಟಗಾತಿ, ರಾಕ್ಷಸಿ, ರಕ್ತ ಕುಡಿಯುತ್ತಾಳೆ. ಕಪ್ಪು ಬಟ್ಟೆ ಇರಿಸಿಕೊಂಡು, ಕತ್ತಲೆ ಕೋಣೆಯಲ್ಲಿ ಕುಳಿತು, ‘ಕಾಲಾ ಜಾದೂ’ (ಮಾಟ) ಮಾಡುತ್ತಾಳೆ ಎಂದೆಲ್ಲ ಸುದ್ದಿ ಹಬ್ಬಿಸಿದ್ದರು. ನನ್ನ ಕರಿಯರ್ ಅನ್ನು ಮುಗಿಸಿಯೇ ಬಿಡಬೇಕು ಎಂದುಕೊಂಡು ಅವರು ಹೀಗೆಲ್ಲ ಸುದ್ದಿಗಳನ್ನು ಹಬ್ಬಿಸಿದ್ದರು’ ಎಂದು ಕಂಗನಾ ರನೌತ್ ಹೇಳಿದ್ದಾರೆ. ‘ಅವರು (ಬಾಲಿವುಡ್​ನ ಕೆಲ ಮಂದಿ) ನನ್ನ ವಿರುದ್ಧ ಇಷ್ಟೆಲ್ಲ ಮಾಡುವಾಗ ನಾನು ಏಕೆ ಅವರನ್ನು ಸುಮ್ಮನೆ ಬಿಡಬೇಕು ಎಂದು ನನಗೆ ಅನಿಸಿತು. ಹಾಗಾಗಿ ನಾನು ಅಂಥಹವರ ವಿರುದ್ಧ ನೇರವಾಗಿ ಮಾತನಾಡಲು ಆರಂಭಿಸಿದೆ’ ಎಂದಿದ್ದಾರೆ ನಟಿ ಕಂಗನಾ ರನೌತ್.

ಕಂಗನಾ ರನೌತ್, ಬಾಲಿವುಡ್​ನ ಪ್ರತಿಭಾವಂತ ನಟಿ. ದಕ್ಷಿಣದ ಕೆಲವು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಹಲವು ವರ್ಷಗಳಿಂದಲೂ ಅವರು ಬಾಲಿವುಡ್ ವಿರುದ್ಧ ಮಾತನಾಡುತ್ತಲೇ ಇದ್ದಾರೆ. ಇದೀಗ ಅವರು ಬಿಜೆಪಿ ಪಕ್ಷದ ಸದಸ್ಯೆ ಆಗಿದ್ದು, ಮಂಡಿ ಕ್ಷೇತ್ರದಿಂದ ಲೋಕಸಭೆ ಚುನಾವಣೆ ಸ್ಪರ್ಧಿಸಿ ಗೆದ್ದು ಸಂಸದೆ ಸಹ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Fri, 17 April 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು