Kangana Ranaut Twitter: ಟ್ವಿಟರ್​ಗೆ ಮರಳಿದ ಕಂಗನಾ ರಣಾವತ್​; ಖಾತೆ ಪುನಃ ಸಿಕ್ಕ ಬಳಿಕ ಖುಷಿ ಹಂಚಿಕೊಂಡ ನಟಿ

Kangana Ranaut Twitter Account: ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆ ಮತ್ತೆ ಸಕ್ರಿಯವಾಗಿದೆ. 20 ತಿಂಗಳ ಬಳಿಕ ಅವರು ಟ್ವೀಟ್​ ಮಾಡಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

Kangana Ranaut Twitter: ಟ್ವಿಟರ್​ಗೆ ಮರಳಿದ ಕಂಗನಾ ರಣಾವತ್​; ಖಾತೆ ಪುನಃ ಸಿಕ್ಕ ಬಳಿಕ ಖುಷಿ ಹಂಚಿಕೊಂಡ ನಟಿ
ಕಂಗನಾ ರಣಾವತ್ ಟ್ವಿಟರ್
Follow us
ಮದನ್​ ಕುಮಾರ್​
|

Updated on:Jan 24, 2023 | 6:41 PM

ನಟಿ ಕಂಗನಾ ರಣಾವತ್​ (Kangana Ranaut) ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. ಸದಾ ವಿವಾದಗಳಿಂದಲೇ ಸದ್ದು ಮಾಡುವ ಕಂಗನಾ ಅವರು ಟ್ವಿಟರ್​ಗೆ ಮರಳಿದ್ದಾರೆ. ಈ ಕುರಿತು ಮಂಗಳವಾರ (ಜ.24) ಅವರು ಬ್ರೇಕಿಂಗ್​ ನ್ಯೂಸ್​ ನೀಡಿದ್ದಾರೆ. ಕಂಗನಾ ರಣಾವತ್​ ಅವರ ಟ್ವಿಟರ್​ ಖಾತೆ (Kangana Ranaut Twitter) ಮತ್ತೆ ಆ್ಯಕ್ಟೀವ್ ಆಗಿದೆ. ಆಕ್ಷೇಪಾರ್ಹ ಟ್ವೀಟ್​ ಮಾಡಿದ ಕಾರಣಕ್ಕೆ 20 ತಿಂಗಳ ಹಿಂದೆ ಅವರ ಖಾತೆಯನ್ನು ಸಸ್ಪೆಂಡ್​ ಮಾಡಲಾಗಿತ್ತು. ಆದರೆ ಈಗ ಅವರು ಪುನಃ ಟ್ವಿಟರ್​ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಈ ಕುರಿತು ಅವರು ಸಂತಸ ಹಂಚಿಕೊಂಡಿದ್ದು, ‘ಮರಳಿ ಇಲ್ಲಿಗೆ ಬಂದಿದ್ದಕ್ಕೆ ಖುಷಿ ಆಗುತ್ತಿದೆ’ ಎಂದು ಟ್ವೀಟ್​ (Kangana Ranaut Tweet)​ ಮಾಡಿದ್ದಾರೆ. ಅಭಿಮಾನಿಗಳು ಕಮೆಂಟ್​ಗಳ ಮೂಲಕ ನೆಚ್ಚಿನ ನಟಿಗೆ ಸ್ವಾಗತ ಕೋರುತ್ತಿದ್ದಾರೆ.

ಟ್ವಿಟರ್​ಗೆ ಮರಳಿ ಬಂದಿರುವ ಕಂಗನಾ ರಣಾವತ್​ ಅವರು ತಮ್ಮ ಮುಂಬರುವ ಸಿನಿಮಾ ‘ಎಮರ್ಜೆನ್ಸಿ’ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್​ ಮುಗಿದಿದೆ ಎಂದು ಅವರು ಹೇಳಿದ್ದಾರೆ. ನಟಿಯ ಟ್ವಿಟರ್​ ಖಾತೆ ಮರಳಿ ಸಿಕ್ಕಿದ್ದಕ್ಕೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಗ್ಗೆ ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಕಂಗನಾ ರಣಾವತ್​ ಅವರು ಸಕ್ರಿಯರಾಗಿರುತ್ತಾರೆ. ಟ್ವಿಟರ್​ನಲ್ಲಿ ಅವರು ಹತ್ತು ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಟ್ವಿಟರ್​ ಖಾತೆ ಸಸ್ಪೆಂಡ್​ ಆದ ಬಳಿಕ ಇನ್​ಸ್ಟಾಗ್ರಾಮ್​ನಲ್ಲಿ ಕಂಗನಾ ಹೆಚ್ಚು ಆ್ಯಕ್ಟೀವ್​ ಆಗಿದ್ದರು. ಈಗ ತಾವು ಟ್ವಿಟರ್​ಗೆ ಮರಳಿರುವ ಸುದ್ದಿಯನ್ನು ಇನ್​ಸ್ಟಾಗ್ರಾಮ್​ನಲ್ಲಿಯೂ ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Emergency: ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡಲು ಆಸ್ತಿ ಅಡವಿಟ್ಟ ಕಂಗನಾ ರಣಾವತ್​

ಈವರೆಗೆ (24 ಜನವರಿ 2023) ಕಂಗನಾ ರಣಾವತ್​ ಅವರನ್ನು ಟ್ವಿಟರ್​ನಲ್ಲಿ ಬರೋಬ್ಬರಿ 29 ಲಕ್ಷಕ್ಕೂ ಹೆಚ್ಚು ಜನರು ಫಾಲೋ ಮಾಡುತ್ತಿದ್ದಾರೆ. ಈಗ ಅವರ ಫಾಲೋವರ್ಸ್​ ಸಂಖ್ಯೆ ಹೆಚ್ಚುತ್ತಿದೆ. ಸಿನಿಮಾ ಮಾತ್ರವಲ್ಲದೇ ರಾಜಕೀಯದ ವಿಚಾರಗಳ ಬಗ್ಗೆಯೂ ಕಂಗನಾ ಟ್ವೀಟ್​​ ಮಾಡಿದ್ದುಂಟು. ಹಾಗಾಗಿ ಅವರನ್ನು ಹಲವು ಕ್ಷೇತ್ರಗಳ ಜನರು ಫಾಲೋ ಮಾಡುತ್ತಾರೆ.

ಇದನ್ನೂ ಓದಿ: ಎಲ್ಲಾ ಬಿಟ್ಟು ಇನ್​ಸ್ಟಾಗ್ರಾಮ್​ ಬಗ್ಗೆ ಕೆಂಡಕಾರಿದ ನಟಿ ಕಂಗನಾ ರಣಾವತ್

ಸಿನಿಮಾ ವಿಚಾರಕ್ಕೆ ಬರೋದಾದರೆ, ನೈಜ ಘಟನೆಗಳನ್ನು ಆಧರಿಸಿದ ‘ಎಮರ್ಜೆನ್ಸಿ’ ಚಿತ್ರದ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಕಂಗನಾ ರಣಾವತ್​ ಬ್ಯುಸಿ ಆಗಿದ್ದಾರೆ. ಇದರಲ್ಲಿ ಅವರು ಇಂದಿರಾ ಗಾಂಧಿ ಪಾತ್ರವನ್ನು ಮಾಡುತ್ತಿದ್ದಾರೆ. ಇರುವ ಆಸ್ತಿಯನ್ನೆಲ್ಲ ಅಡಿವಿಟ್ಟು, ಅದರಿಂದ ತಂದ ಸಾಲದಲ್ಲಿ ತಾವು ಈ ಚಿತ್ರದ ಶೂಟಿಂಗ್​ ಮುಗಿಸಿರುವುದಾಗಿ ಅವರು ಇತ್ತೀಚೆಗೆ ಮಾಹಿತಿ ನೀಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:26 pm, Tue, 24 January 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ