Kangana Ranaut: ‘ಬಾಲಿವುಡ್ ಮಾಫಿಯಾ’ಗೆ ಮತ್ತೆ ಟಾಂಗ್ ನೀಡಿದ ಕಂಗನಾ; ಕಾರಣವೇನು?

Thalaivii: ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತೊಮ್ಮೆ ‘ಬಾಲಿವುಡ್ ಮಾಫಿಯಾ’ಕ್ಕೆ ಟಾಂಗ್ ನೀಡಿದ್ದಾರೆ. ತಲೈವಿ ಚಿತ್ರದ ಒಟಿಟಿ ಬಿಡುಗಡೆಯ ಸಿದ್ಧತೆಯಲ್ಲಿರುವ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ.

Kangana Ranaut: ‘ಬಾಲಿವುಡ್ ಮಾಫಿಯಾ’ಗೆ ಮತ್ತೆ ಟಾಂಗ್ ನೀಡಿದ ಕಂಗನಾ; ಕಾರಣವೇನು?
ಕಂಗನಾ ರಣಾವತ್
Follow us
TV9 Web
| Updated By: shivaprasad.hs

Updated on:Sep 29, 2021 | 3:39 PM

ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ಒಂದಿಲ್ಲೊಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ಅವರ ಅಭಿನಯದ ‘ತಲೈವಿ’ ಚಿತ್ರ ವೀಕ್ಷಕರಿಂದ ಮೆಚ್ಚುಗೆಯನ್ನೂ ಪಡೆದಿತ್ತು. ಇದೀಗ ‘ತಲೈವಿ’ ಒಟಿಟಿಯಲ್ಲಿ ಬಿಡುಗಡೆಯಾಗಲು ಸಿದ್ಧತೆ ನಡೆಸಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಈ ಚಿತ್ರವು ಬಿಡುಗಡೆಯಾಗುತ್ತಿದ್ದು, ಈ ಕುರಿತು ಕಂಗನಾ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. “ಒಂದು ಚಿತ್ರವು ಉತ್ಸಾಹದಿಂದ ಮತ್ತು ಎಲ್ಲರಿಂದ ಪ್ರೀತಿಸಲ್ಪಡುವುದು ಅಪರೂಪ. ತಲೈವಿ ಅಂತಹ ಒಂದು ಚಿತ್ರವಾಗಿದೆ. ಜನರಿಗೆ ತಲೈವಿ ಡಾ.ಜೆ ಜಯಲಲಿತಾ ಅವರ ಕತೆ ಹಿಡಿಸಿದೆ. ನನ್ನ ವೃತ್ತಿ ಜೀವನದಲ್ಲಿ ಇದೊಂದು ಮರೆಯಲಾಗದ ಪ್ರಮುಖ ಚಿತ್ರವಾಗಿ ರೂಪುಗೊಳ್ಳುವಂತೆ ಮಾಡಿದ ಚಿತ್ರತಂಡಕ್ಕೆ ಧನ್ಯವಾದಗಳು’ ಎಂದು ಅವರು ಬರೆದುಕೊಂಡಿದ್ದಾರೆ.

‘ತಲೈವಿ’ ಚಿತ್ರವು ಮಾಜಿ ನಟಿ ಮತ್ತು ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರ ಜೀವನವನ್ನು ಆಧರಿಸಿದೆ. ಈ ಚಿತ್ರದಲ್ಲಿ ಕಂಗನಾ ಜಯಲಲಿತಾ ಪಾತ್ರವನ್ನು ಮತ್ತು ನಟ ಅರವಿಂದ ಸ್ವಾಮಿ ಎಮ್​.ಜಿ.ರಾಮಚಂದ್ರನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಲನಚಿತ್ರವು ಅಕ್ಟೋಬರ್ 10 ರಂದು ದೇಶದ ಹಲವು ಭಾಗಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದರೂ ಕೂಡ ಮುಂಬೈನಲ್ಲಿ ಬಿಡುಗಡೆಯಾಗಿರಲಿಲ್ಲ. ಪ್ರಸ್ತುತ ನೆಟ್​ಫ್ಲಿಕ್ಸ್​ನಲ್ಲಿ ತೆರೆಗೆ ಬರುತ್ತಿರುವುದರಿಂದ ಹೆಚ್ಚು ಜನರನ್ನು ತಲುಪುವ ಅವಕಾಶವಿದೆ.

ಕಂಗನಾ, ಬಾಲಿವುಡ್​​ನ ಕೆಲವು ತಾರೆಯರನ್ನು ಟೀಕಿಸುವ ಯಾವ ಅವಕಾಶವನ್ನೂ ತಪ್ಪಿಸುವುದಿಲ್ಲ. ‘ತಲೈವಿ’ ಚಿತ್ರವನ್ನು ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಿಸಿ ಎಂದು ಅವರು ಕೇಳಿಕೊಳ್ಳುವಾಗಲೂ, ‘ಬಾಲಿವುಡ್ ಮಾಫಿಯಾ’ಕ್ಕೆ ಟಾಂಗ್ ನೀಡಿದ್ದಾರೆ. ‘ಬಾಲಿವುಡ್ ಮಾಫಿಯಾ ಕೂಡ ತಮ್ಮ ಸಿದ್ಧಾಂತ, ಜಗಳಗಳನ್ನು ಬದಿಗಿಟ್ಟು ಕಲೆಯ ಉಳಿವಿಗಾಗಿ ಈ ಚಿತ್ರವನ್ನು ಬೆಂಬಲಿಸುತ್ತಾರೆ ಎಂದು ನಂಬಿದ್ದೇನೆ. ನಾನು ಕೂಡ ಅವರ ಉತ್ತಮ ಚಿತ್ರಗಳನ್ನು ಪ್ರೋತ್ಸಾಹಿಸಿದ್ದೆ. ಅದರಂತೆಯೇ ಅವರೂ ಕೂಡ ಮಾನವ ಸಹಜ ಗುಣಗಳನ್ನು ಬಿಟ್ಟು ಕಲೆಯ ಗೆಲುವಿಗಾಗಿ ಜೊತೆಯಾಗಲಿ. ಕಲೆ ಗೆಲ್ಲಲಿ’ ಎಂದು ಅವರು ಬರೆದುಕೊಂಡಿದ್ದಾರೆ.

Kangana Ranaut instagram story on Bollywood mafia

ಕಂಗನಾ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದ ಸ್ಟೋರಿ

ತಲೈವಿ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದು, ವಿಜಯೇಂದ್ರ ಪ್ರಸಾದ್ ಕತೆ ಬರೆದಿದ್ದಾರೆ. ಚಿತ್ರದಲ್ಲಿ ನಾಸರ್, ಭಾಗ್ಯಶ್ರೀ, ರಾಜ್ ಅರ್ಜುನ್, ಮಧೂ, ಜಿಸ್ಶು ಸೇನ್‌ಗುಪ್ತಾ, ತಂಬಿ ರಾಮಯ್ಯ, ಶಮ್ನಾ ಕಾಸಿಂ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ:

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಮಾಡಲು ಕಿಡಿಗೇಡಿಗಳ ಪ್ಲ್ಯಾನ್​; ಇಲ್ಲಿದೆ ಸಾಕ್ಷಿ

ಡ್ರಗ್ ಪೆಡ್ಲಿಂಗ್ ಮಾಡ್ತಿದ್ದ ನೈಜೀರಿಯಾ ನಟನ ಬಂಧನ; ಈತ ಅಣ್ಣಾಬಾಂಡ್, ಪರಮಾತ್ಮ ಸಿನಿಮಾಗಳಲ್ಲೂ ನಟಿಸಿದ್ದ!

ವದಂತಿ ವಿಚಾರದಲ್ಲಿ ಮೌನ ಮುರಿದ ಸಮಂತಾ ಅಕ್ಕಿನೇನಿ; ಅಭಿಮಾನಿಗಳಿಗೆ ಎಲ್ಲವನ್ನೂ ಸ್ಪಷ್ಟಪಡಿಸಿದ ನಟಿ

Published On - 3:33 pm, Wed, 29 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ