AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಸಿನಿಮಾ ಕಥೆ ನನ್ನದು’; ಕನ್ನಡದಲ್ಲಿ ಇತ್ತೀಚೆಗೆ ರಿಲೀಸ್ ಆದ ಹಿಟ್ ಚಿತ್ರದ ಬಗ್ಗೆ ಕೃತಿಚೌರ್ಯ ಆರೋಪ

ಇತ್ತೀಚೆಗೆ ತೆರೆಕಂಡ ಹಿಟ್ ಕನ್ನಡ ಸಿನಿಮಾದ ವಿರುದ್ಧ ಕೃತಿಚೌರ್ಯದ ಆರೋಪ ಕೇಳಿಬಂದಿದೆ. ನಿರ್ದೇಶಕ ರಾಘವೇಂದ್ರ ನಾಯಕ್ ಅವರು ತಮ್ಮ ಕಥೆಯ ದ್ವಿತೀಯಾರ್ಧವನ್ನು ಬಳಸಲಾಗಿದೆ ಎಂದು ದೀರ್ಘ ಪೋಸ್ಟ್ ಮೂಲಕ ಆರೋಪಿಸಿದ್ದಾರೆ. ಭವಿಷ್ಯದ ಚಿತ್ರಕಥೆಗಾರರು ತಮ್ಮ ಕಥೆಗಳನ್ನು SWA ನಲ್ಲಿ ನೋಂದಾಯಿಸುವ, ಇಮೇಲ್ ಮೂಲಕ ದಾಖಲೆಗಳನ್ನು ಸುರಕ್ಷಿತವಾಗಿ ಉಳಿಸಿಕೊಳ್ಳುವ, ಮತ್ತು ಕಥೆ ನಿರೂಪಣೆಯನ್ನು ಆಡಿಯೋ ರೆಕಾರ್ಡ್ ಮಾಡುವ ಮೂಲಕ ರಕ್ಷಿಸಿಕೊಳ್ಳಲು ಅವರು ಮಹತ್ವದ ಸಲಹೆ ನೀಡಿದ್ದಾರೆ.

‘ಆ ಸಿನಿಮಾ ಕಥೆ ನನ್ನದು’; ಕನ್ನಡದಲ್ಲಿ ಇತ್ತೀಚೆಗೆ ರಿಲೀಸ್ ಆದ ಹಿಟ್ ಚಿತ್ರದ ಬಗ್ಗೆ ಕೃತಿಚೌರ್ಯ ಆರೋಪ
ರಾಘವೇಂದ್ರ
ರಾಜೇಶ್ ದುಗ್ಗುಮನೆ
| Edited By: |

Updated on:Mar 23, 2026 | 12:05 PM

Share

ಒಂದು ಸಿನಿಮಾ ರಿಲೀಸ್ ಆಗಿ ಹಿಟ್ ಆದ ಬಳಿಕ ಕೆಲವರು ನಿರ್ದೇಶಕರ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ ಉದಾಹರಣೆ ಇದೆ. ಕೆಲವು ನಿಜವಾದರೆ, ಕೆಲವು ಸುಳ್ಳಾಗಿದೆ. ಈಗ ಇತ್ತೀಚೆಗೆ ರಿಲೀಸ್ ಆಗಿ ಹಿಟ್ ಆದ ಸಿನಿಮಾ ಮೇಲೆ ‘ಮಾರಿಗೋಲ್ಡ್’ ಸಿನಿಮಾ ನಿರ್ದೇಶಕ ರಾಘವೇಂದ್ರ ನಾಯಕ್ ದೀರ್ಘ ಪೋಸ್ಟ್ ಬರೆದಿದ್ದಾರೆ. ಅವರು ಆರೋಪ ಮಾಡಿರೋದು ‘ಲವ್ ಮಾಕ್ಟೇಲ್ 3’ ಚಿತ್ರದ ಮೇಲೆ ಇರಬಹುದು ಎಂಬ ಚರ್ಚೆ ಕೂಡ ನಡೆದಿದೆ.

‘ಸಿನಿಮಾ ಬರಹಗಾರರೇ ಮತ್ತು ಭವಿಷ್ಯದ ನಿರ್ದೇಶಕರೇ, ನನ್ನದೊಂದು ಸಣ್ಣ ಕಿವಿಮಾತು: ನೀವು ಯಾವುದೇ ಕಥೆ ಸಿದ್ಧಪಡಿಸಿದಾಗ, ಮೊದಲು ಅದನ್ನು SWA (Screenwriters Association) ನಲ್ಲಿ ನೋಂದಾಯಿಸಿಕೊಳ್ಳಿ. ಕಥೆ ಮತ್ತು ಚಿತ್ರಕಥೆ ಸಿದ್ಧವಾಗುವ ಪ್ರತಿ ಹಂತದ ಕಡತವನ್ನೂ (File) ನಿಮ್ಮ ಸ್ವಂತ ಇಮೇಲ್ ವಿಳಾಸಕ್ಕೆ ಕಳುಹಿಸಿ ಸುರಕ್ಷಿತವಾಗಿಟ್ಟುಕೊಳ್ಳಿ. ಎಲ್ಲಕ್ಕಿಂತ ಮುಖ್ಯವಾಗಿ, ನೀವು ಯಾರಿಗಾದರೂ ಕಥೆ ವಿವರಿಸುವ (Narration) ಮೊದಲು ಅದರ ಆಡಿಯೋ ರೆಕಾರ್ಡ್ ಮಾಡಿಕೊಳ್ಳುವುದನ್ನು ಮರೆಯಬೇಡಿ. ಕಥೆ ಹೇಳುವ ಮುನ್ನ ನಡೆಸುವ ಸಂಭಾಷಣೆ ಹಾಗೂ ಕಥೆ ಮುಗಿದ ನಂತರದ ಚರ್ಚೆಗಳೂ ಅದರಲ್ಲಿ ದಾಖಲಾಗಿರಲಿ. ಮೀಟಿಂಗ್ ಮುಗಿದ ಕೂಡಲೇ ಆ ಆಡಿಯೋ ಫೈಲ್ ಅನ್ನು ನಿಮಗೆ ನೀವೇ ಇಮೇಲ್ ಮಾಡಿಕೊಳ್ಳಿ. ಆಗ ನೀವು ನಾಯಕನಿಗಾಗಲಿ, ನಿರ್ಮಾಪಕರಿಗಾಗಲಿ ಅಥವಾ ನಿರ್ದೇಶಕರಿಗಾಗಲಿ ಕಥೆ ವಿವರಿಸಿದ್ದೀರಿ ಎಂಬುದಕ್ಕೆ ಭದ್ರವಾದ ದಾಖಲೆ ಇರುತ್ತದೆ’ ಎಂದು ರಾಘವೇಂದ್ರ ನಾಯಕ್ ಬರಹ ಆರಂಭಿಸಿದ್ದಾರೆ. ‘ಇಂತಹ ಮುನ್ನೆಚ್ಚರಿಕೆ ವಹಿಸದ ಕಾರಣ ಇಂದು ನನಗೆ ದೊಡ್ಡ ದ್ರೋಹವಾಗಿದೆ. ನನ್ನ ಕಥೆಯ ಇಡೀ ದ್ವಿತೀಯಾರ್ಧವನ್ನು (Second Half) ಬಳಸಿಕೊಂಡು ಸಿನಿಮಾ ಮಾಡಿ ಬಿಡುಗಡೆಗೊಳಿಸಿದ್ದಾರೆ; ಆ ಸಿನಿಮಾ ಈಗ ಯಶಸ್ವಿಯಾಗಿ ಪ್ರದರ್ಶನವನ್ನೂ ಕಾಣುತ್ತಿದೆ. ಈ ಕಥೆ ನನ್ನದು ಎಂಬುದು ನನ್ನ ಆಪ್ತ ವಲಯದ ಬಹಳಷ್ಟು ನಿರ್ಮಾಪಕರಿಗೆ, ತಂತ್ರಜ್ಞರಿಗೆ ಹಾಗೂ ಸ್ನೇಹಿತರಿಗೆ ತಿಳಿದಿದೆ. ಕನ್ನಡದ ಖ್ಯಾತ ನಿರ್ದೇಶಕರು ಮತ್ತು ನಿರ್ಮಾಪಕರು ಈ ಕಥೆಯನ್ನು ಸಿನಿಮಾ ಮಾಡಲು ನಿರ್ಧರಿಸಿ, ನನಗೆ ಮುಂಗಡ ಸಂಭಾವನೆಯನ್ನೂ ನೀಡಿದ್ದರು. ಇದೇ ನಿರ್ಮಾಪಕ-ನಿರ್ದೇಶಕರ ಜೊತೆಗೂಡಿ ಎರಡು ವರ್ಷಗಳ ಹಿಂದೆಯೇ ನಾನು ಆ ‘ನಿರ್ದೇಶಕ, ನಿರ್ಮಾಪಕ ಕಮ್ ನಟ’ನಿಗೆ ಕಥೆ ಹೇಳಿದ್ದೆ’ ಎಂದು ಆರೋಪಿಸಿದ್ದಾರೆ ಅವರು.

ಸಿನಿಮಾ ನಿರ್ದೇಶಕ ರಾಘವೇಂದ್ರ ನಾಯಕ್ ಅವರ ಫೇಸ್​ಬುಕ್​ ಪೋಸ್ಟ್

‘ನನ್ನ ಬಳಿ ಆ ಕಥೆ ನನ್ನದೇ ಎನ್ನುವುದಕ್ಕೆ ಸೂಕ್ತ ದಾಖಲೆಗಳಿವೆಯಾದರೂ, “ನಾನು ಅವರಿಗೆ ಈ ಕಥೆಯನ್ನೇ ಹೇಳಿದ್ದೆ” ಎನ್ನುವುದಕ್ಕೆ ಪೂರಕ ದಾಖಲೆಗಳಿಲ್ಲ. ಈ ತಾಂತ್ರಿಕ ಕಾರಣದಿಂದಾಗಿ ನಾನು ಅಸಹಾಯಕನಾಗಿ ಸುಮ್ಮನಿರಬೇಕಾಗಿದೆ. ಭವಿಷ್ಯದಲ್ಲಿ ಬೇರೆ ಯಾವ ಬರಹಗಾರರಿಗೂ ಇಂತಹ ಮೋಸ ಆಗಬಾರದು ಎಂಬ ಸದಾಶಯದಿಂದ ಮತ್ತು ಅವರು ಮುನ್ನೆಚ್ಚರಿಕೆ ವಹಿಸಲಿ ಎಂಬ ಕಾರಣಕ್ಕೆ ಈ ಪೋಸ್ಟ್ ಹಾಕುತ್ತಿದ್ದೇನೆ. ದಯವಿಟ್ಟು ಬರಹಗಾರರೇ, ನಿಮ್ಮ ಕಲ್ಪನೆಗೆ ಕನ್ನ ಬೀಳದಂತೆ ಜಾಗ್ರತೆ ವಹಿಸಿ. ನಿಮಗೆ ಶುಭವಾಗಲಿ’ ಎಂದು ಅವರು ಬರಹ ಪೂರ್ಣಗೊಳಿಸಿದ್ದಾರೆ.

ಇದನ್ನೂ ಓದಿ: ಭಾನುವಾರ ಭರ್ಜರಿ ಗಳಿಕೆ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಕಲೆಕ್ಷನ್ ಎಷ್ಟು?

ಇತ್ತೀಚೆಗೆ ರಿಲೀಸ್ ಆಗಿ ಹಿಟ್ ಆದ ಕನ್ನಡದ ಸಿನಿಮಾ ಎಂದರೆ ಅದು ‘ಲವ್ ಮಾಕ್ಟೇಲ್ 3’. ಅಲ್ಲದೆ, ನಿರ್ದೇಶಕ, ನಿರ್ಮಾಪಕ ಕಮ್ ನಟ ಎಂದರೆ ಅದು ಡಾರ್ಲಿಂಗ್ ಕೃಷ್ಣ ಇರಬಹುದು ಎಂದು ಅನೇಕರು ಊಹಿಸಿದ್ದಾರೆ. ಇದಕ್ಕೆ ಕೃಷ್ಣ ಅವರ ಕಡೆಯಿಂದ ಯಾವ ರೀತಿಯ ಸ್ಪಷ್ಟನೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:57 am, Mon, 23 March 26

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್