AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮ್​ ಸೇತು’ ಎದುರು ಹೆಚ್ಚಾಯ್ತು ‘ಕಾಂತಾರ’ ಶೋಗಳ ಸಂಖ್ಯೆ; ಮತ್ತೆ ಎಡವಿದ ಅಕ್ಷಯ್ ಕುಮಾರ್

ಹಿಂದಿ ಪ್ರೇಕ್ಷಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಹಿಂದಿಯಲ್ಲಿ ಮೂರನೇ ವಾರಾಂತ್ಯಕ್ಕೆ 42.95 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಭಾನುವಾರ (ಅಕ್ಟೋಬರ್ 30) ಈ ಚಿತ್ರ ನಾಲ್ಕು ಕೋಟಿ ರೂಪಾಯಿ ಬಾಚಿಕೊಂಡಿದೆ.

‘ರಾಮ್​ ಸೇತು’ ಎದುರು ಹೆಚ್ಚಾಯ್ತು ‘ಕಾಂತಾರ’ ಶೋಗಳ ಸಂಖ್ಯೆ; ಮತ್ತೆ ಎಡವಿದ ಅಕ್ಷಯ್ ಕುಮಾರ್
ಅಕ್ಷಯ್​-ರಿಷಬ್
TV9 Web
| Edited By: |

Updated on: Oct 31, 2022 | 12:44 PM

Share

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅವರು ಇತ್ತೀಚೆಗೆ ಸಾಲುಸಾಲು ಸೋಲು ಕಾಣುತ್ತಿದ್ದಾರೆ. ‘ರಾಮ್​ ಸೇತು’ ಚಿತ್ರದಿಂದ ದೊಡ್ಡ ಗೆಲುವು ಕಾಣಬೇಕು ಎಂದು ಅವರು ಅಂದುಕೊಂಡಿದ್ದರು. ಆದರೆ, ಇದು ಸಾಧ್ಯವಾಗುವ ಸೂಚನೆ ಸಿಗುತ್ತಿಲ್ಲ. ಈ ಚಿತ್ರ ಆರಂಭದಲ್ಲಿ ಒಳ್ಳೆಯ ಗಳಿಕೆ ಮಾಡಿತ್ತಾದರೂ ಇತ್ತೀಚೆಗೆ ಸಿನಿಮಾ ಡಲ್ ಹೊಡೆದಿದೆ. ಕನ್ನಡದ ‘ಕಾಂತಾರ’ ಚಿತ್ರದ (Kantara Movie) ಅಬ್ಬರದ ಮುಂದೆ ಅಕ್ಷಯ್ ಕುಮಾರ್ ಚಿತ್ರ ಮಾರುಕಟ್ಟೆ ಕಳೆದುಕೊಳ್ಳುತ್ತಿದೆ. ‘ರಾಮ್​ ಸೇತು’ ಜತೆಯಲ್ಲಿ ರಿಲೀಸ್ ಆದ ‘ಥ್ಯಾಂಕ್ ಗಾಡ್​’ ಚಿತ್ರಕ್ಕೂ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದು ‘ಕಾಂತಾರ’ ಚಿತ್ರಕ್ಕೆ ವರದಾನವಾಗಿದೆ.

‘ಕಾಂತಾರ’ ಸಿನಿಮಾ ಸೆಪ್ಟೆಂಬರ್ 30ರಂದು ಕನ್ನಡದಲ್ಲಿ ರಿಲೀಸ್ ಆಯಿತು. ಈ ಚಿತ್ರಕ್ಕೆ ಕನ್ನಡ ಪ್ರೇಕ್ಷಕರಿಂದ ಸಿಕ್ಕ ಪ್ರತಿಕ್ರಿಯೆ ನೋಡಿ ಪರಭಾಷೆಯವರಿಗೂ ಕುತೂಹಲ ಮೂಡಿತು. ಈ ಚಿತ್ರವನ್ನು ಅವರು ಕನ್ನಡದಲ್ಲೇ ಕಣ್ತುಂಬಿಕೊಳ್ಳುವ ಪ್ರಯತ್ನ ಮಾಡಿದರು. ಬಳಿಕ ಪರಭಾಷೆಯಲ್ಲೂ ಈ ಚಿತ್ರವನ್ನು ರಿಲೀಸ್ ಮಾಡಬೇಕು ಎಂಬ ಒತ್ತಾಯ ಹೆಚ್ಚಿತು. ಈ ಕಾರಣಕ್ಕೆ ಸಿನಿಮಾವನ್ನು ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಿಗೆ ಡಬ್ ಮಾಡಿ ರಿಲೀಸ್ ಮಾಡಲಾಯಿತು.

ಇದನ್ನೂ ಓದಿ
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ಹಿಂದಿ ಪ್ರೇಕ್ಷಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಹಿಂದಿಯಲ್ಲಿ ಮೂರನೇ ವಾರಾಂತ್ಯಕ್ಕೆ 42.95 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಭಾನುವಾರ (ಅಕ್ಟೋಬರ್ 30) ಈ ಚಿತ್ರ ನಾಲ್ಕು ಕೋಟಿ ರೂಪಾಯಿ ಬಾಚಿಕೊಂಡಿದೆ. ‘ರಾಮ್ ಸೇತು’ ಹಾಗೂ ‘ಥ್ಯಾಂಕ್ ಗಾಡ್’ ಚಿತ್ರದ ಕಲೆಕ್ಷನ್ ದಿನಕಳೆದಂತೆ ಕುಗ್ಗಿದರೆ ರಿಷಬ್ ಚಿತ್ರದ ಕಲೆಕ್ಷನ್ ಹೆಚ್ಚುತ್ತಿದೆ. ಶೀಘ್ರದಲ್ಲೇ ‘ಕಾಂತಾರ’ ಸಿನಿಮಾ ‘ಕೆಜಿಎಫ್’ ಸಿನಿಮಾದ ಹಿಂದಿ ಕಲೆಕ್ಷನ್​ ಅನ್ನು ಹಿಂದಿಕ್ಕಿಲಿದೆ.

ಇದನ್ನೂ ಓದಿ: Kantara: ರಜನಿಕಾಂತ್​ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್​ ಶೆಟ್ಟಿ; ‘ಕಾಂತಾರ’ ಟೀಮ್​ ಫುಲ್​ ಖುಷ್​

‘ರಾಮ್ ಸೇತು’ ಹಾಗೂ ‘ಥ್ಯಾಂಕ್ ಗಾಡ್’ ಚಿತ್ರಕ್ಕೆ ವೀಕೆಂಡ್​ನಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರುತ್ತಿಲ್ಲ. ಈ ಕಾರಣಕ್ಕೆ ಈ ಚಿತ್ರಗಳ ಬದಲು ‘ಕಾಂತಾರ’ ಚಿತ್ರವನ್ನು ಪ್ರದರ್ಶನ ಮಾಡಲು ಎಲ್ಲರೂ ಆಸಕ್ತಿ ತೋರುತ್ತಿದ್ದಾರೆ. ಈಗಲೂ ‘ಕಾಂತಾರ’ ಸಿನಿಮಾ ಮುಂಬೈ ಮೊದಲಾದ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಇನ್ನೂ ಕೆಲ ವಾರ ಸಿನಿಮಾದ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್