Karan Johar: ಅಬ್ಬಬ್ಬಾ.. ಶರವೇಗದಲ್ಲಿ ಸಿನಿಮಾ ಮಾಡ್ತಿದ್ದಾರೆ ಕರಣ್ ಜೋಹರ್; 12 ತಿಂಗಳಲ್ಲಿ ರಿಲೀಸ್ ಆಗಲಿದೆ 7 ಸಿನಿಮಾ

ಕರಣ್ ಜೋಹರ್ ಅವರು ನಿರ್ಮಾಣದ ಮೇಲೂ ಸಾಕಷ್ಟು ಗಮನ ಹರಿಸುತ್ತಿದ್ದಾರೆ. ಏಕಕಾಲಕ್ಕೆ ಹಲವು ಸಿನಿಮಾಗಳ ಪ್ರೊಡಕ್ಷನ್​ನಲ್ಲಿ ಅವರು ತೊಡಗಿಕೊಂಡಿದ್ದಾರೆ.

Karan Johar: ಅಬ್ಬಬ್ಬಾ.. ಶರವೇಗದಲ್ಲಿ ಸಿನಿಮಾ ಮಾಡ್ತಿದ್ದಾರೆ ಕರಣ್ ಜೋಹರ್; 12 ತಿಂಗಳಲ್ಲಿ ರಿಲೀಸ್ ಆಗಲಿದೆ 7 ಸಿನಿಮಾ
ಕರಣ್ ಜೋಹರ್
Follow us
ರಾಜೇಶ್ ದುಗ್ಗುಮನೆ
|

Updated on: Jun 08, 2023 | 6:30 AM

ಕರಣ್ ಜೋಹರ್ (Karan Johar) ಅವರು ನಿರ್ಮಾಣದಲ್ಲಿ ಸಖತ್ ಬ್ಯುಸಿ ಇದ್ದಾರೆ. ಅವರ ಒಡೆತನದ ಧರ್ಮ ಪ್ರೊಡಕ್ಷನ್ ಮೂಲಕ ಹಲವು ಸಿನಿಮಾಗಳು ಮೂಡಿ ಬಂದಿವೆ. ಈಗ ಅವರು ಹೈಪರ್ ಆ್ಯಕ್ಟೀವ್ ಆಗಿದ್ದಾರೆ. ಮುಂದಿನ ಒಂದು ವರ್ಷಗಳಲ್ಲಿ ಅವರ ನಿರ್ಮಾಣದ 7 ಸಿನಿಮಾಗಳು ರಿಲೀಸ್ ಆಗಲಿವೆ. ಈ ವಿಚಾರ ಕೇಳಿ ಅನೇಕರಿಗೆ ಖುಷಿ ಆಗಿದೆ. ಬಾಲಿವುಡ್​ ಸಿನಿಮಾಗಳು (Bollywood Movies) ನಿರಂತರವಾಗಿ ಸೋಲುತ್ತಿರುವ ಈ ಸಂದರ್ಭದಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಹಿಂದಿ ಚಿತ್ರರಂಗಕ್ಕೆ ಬೂಸ್ಟ್ ಸಿಕ್ಕಂತೆ ಆಗುತ್ತದೆ.

ಕರಣ್ ಜೋಹರ್ ಅವರು ಸದ್ಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ನಿರ್ದೇಶನದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಇನ್ನು ಕೆಲವೇ ತಿಂಗಳಲ್ಲಿ ರಿಲೀಸ್ ಆಗಲಿದೆ. ಇದರ ಜೊತೆಗೆ ಅವರು ನಿರ್ಮಾಣದ ಮೇಲೂ ಸಾಕಷ್ಟು ಗಮನ ಹರಿಸುತ್ತಿದ್ದಾರೆ. ಏಕಕಾಲಕ್ಕೆ ಹಲವು ಸಿನಿಮಾಗಳ ಪ್ರೊಡಕ್ಷನ್​ನಲ್ಲಿ ಅವರು ತೊಡಗಿಕೊಂಡಿದ್ದಾರೆ.

ವಿಕ್ಕಿ ಕೌಶಲ್ ಹಾಗೂ ತೃಪ್ತಿ ದಿಮ್ರಿ ನಟನೆಯ ‘ಮೆರೆ ಮೆಹಬೂಬ್ ಮೆರೆ ಸನಮ್​’ ಚಿತ್ರವನ್ನು ಕರಣ್ ಜೋಹರ್ ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈಗಾಗಲೇ ಸಿದ್ದಾರ್ಥ್ ಮಲ್ಹೋತ್ರಾ ಅವರು ‘ಶೇರ್ಷಾ’ ಸಿನಿಮಾದಲ್ಲಿ ಸೈನಿಕನಾಗಿ ಗಮನ ಸೆಳೆದಿದ್ದರು. ಈಗ ಅವರು ಮತ್ತೊಮ್ಮೆ ಇದೇ ರೀತಿಯ ಸಿನಿಮಾ ಒಪ್ಪಿಕೊಂಡಿದ್ದು, ‘ಯೋಧ’ ಎಂದು ಹೆಸರು ಇಡಲಾಗಿದೆ. ಈ ಚಿತ್ರದಲ್ಲಿ ಸಿದ್ದಾರ್ಥ್ ಜೊತೆ ದಿಶಾ ಪಟಾಣಿ, ರಾಶಿ ಖನ್ನಾ ಕೂಡ ನಟಿಸಿದ್ದಾರೆ. ಇದು ‘ಧರ್ಮ ಪ್ರೊಡಕ್ಷನ್’ ಮೂಲಕ ನಿರ್ಮಾಣ ಆಗುತ್ತಿದೆ.

ಅಕ್ಷಯ್ ಕುಮಾರ್ ನಟನೆಯ ಚಿತ್ರವೊಂದಕ್ಕೆ ಕರಣ್ ಹಣ ಹಾಕುತ್ತಿದ್ದಾರೆ. ಸಾರಾ ಅಲಿ ಖಾನ್ ಅವರ ‘ಯೇ ವತನ್ ಮೆರೇ ವತನ್’ ಚಿತ್ರಕ್ಕೂ ಕರಣ್ ಬಂಡವಾಳ ಹಾಕಿದ್ದಾರೆ. ಕಾಜೋಲ್​, ಪೃಥ್ವಿರಾಜ್​ ಹಾಗೂ ಇಬ್ರಾಹಿಂ ಖಾನ್ ಅವರ ‘ಸರ್ಜಮೀನ್​’, ಜಾನ್ವಿ ಕಪೂರ್, ರಾಜ್​ಕುಮಾರ್ ರಾವ್ ನಟನೆಯ ‘ಮಿಸ್ಟರ್​ ಔರ್ ಮಿಸಸ್ ಮಾಹಿ’ ಚಿತ್ರಕ್ಕೆ ಕರಣ್ ನಿರ್ಮಾಣ ಇದೆ.

ಇದನ್ನೂ ಓದಿ: ನಿಮ್ಮ ಸಹೋದರನೊಂದಿಗೆ ಮಲಗುತ್ತೀರಾ’ ಎಂದು ಆ್ಯಂಕರ್​ಗೆ ಕೇಳಿದ್ದ ಕರಣ್ ಜೋಹರ್

ಈ ಏಳು ಸಿನಿಮಾಗಳು ಮುಂದಿನ 12 ವರ್ಷಗಳಲ್ಲಿ ರಿಲೀಸ್ ಆಗಲಿವೆ. ಕೆಲವು ಸಿನಿಮಾಗಳು ಒಟಿಟಿಯಲ್ಲಿ ರಿಲೀಸ್ ಆದರೆ ಕೆಲವು ಥಿಯೇಟರ್​​ನಲ್ಲಿ ರಿಲೀಸ್ ಆಗಲಿವೆ.  ಅವರ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಜುಲೈ 27ರಂದು ಬಿಡುಗಡೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ