AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಅಪಘಾತದ ವದಂತಿ ಬೆನ್ನಲ್ಲೇ ಶಾರುಖ್​ ಖಾನ್​ ಬಗ್ಗೆ ಇನ್ನೊಂದು ಗಾಸಿಪ್​; ಕೂಡಲೇ ಸ್ಪಷ್ಟನೆ ನೀಡಿದ ಕರಣ್​ ಜೋಹರ್​

Karan Johar: ಕರಣ್​ ಜೋಹರ್​ ಅವರು ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​ ಜೊತೆ ಅವರಿಗೆ ಬಹಳ ಆತ್ಮೀಯತೆ ಇದೆ.

Shah Rukh Khan: ಅಪಘಾತದ ವದಂತಿ ಬೆನ್ನಲ್ಲೇ ಶಾರುಖ್​ ಖಾನ್​ ಬಗ್ಗೆ ಇನ್ನೊಂದು ಗಾಸಿಪ್​; ಕೂಡಲೇ ಸ್ಪಷ್ಟನೆ ನೀಡಿದ ಕರಣ್​ ಜೋಹರ್​
ಶಾರುಖ್​ ಖಾನ್​, ಕರಣ್​ ಜೋಹರ್​
ಮದನ್​ ಕುಮಾರ್​
|

Updated on: Jul 05, 2023 | 3:41 PM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಹಲವು ಕಾರಣಗಳಿಂದ ಸುದ್ದಿ ಆಗುತ್ತಿದ್ದಾರೆ. ಇತ್ತೀಚೆಗೆ ಅವರಿಗೆ ಅಪಘಾತ ಆಗಿದೆ ಎಂದು ವದಂತಿ ಹಬ್ಬಿತ್ತು. ಶೂಟಿಂಗ್ ವೇಳೆ ಅವರ ಮೂಗಿಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ಹೇಳಲಾಗಿತ್ತು. ಆದರೆ ಆದು ನಿಜವಲ್ಲ ಎಂಬ ಅನುಮಾನ ಮೂಡಿದೆ. ಅದರ ಬೆನ್ನಲ್ಲೇ ಮತ್ತೊಂದು ಗಾಸಿಪ್​ ಹಬ್ಬಿತ್ತು. ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ (Rocky Aur Rani Ki Prem Kahani) ಸಿನಿಮಾದಲ್ಲಿ ಶಾರುಖ್​ ಖಾನ್​ ಅವರು ಅತಿಥಿ ಪಾತ್ರ ಮಾಡಿರಬಹುದು ಎಂಬ ಗುಮಾನಿ ಅಭಿಮಾನಿಗಳಿಗೆ ಇತ್ತು. ಆ ಬಗ್ಗೆ ನಿರ್ದೇಶಕ, ನಿರ್ಮಾಪಕ ಕರಣ್​ ಜೋಹರ್​ (Karan Johar) ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ನಟಿಸಿಲ್ಲ ಎಂದು ಅವರು ಹೇಳಿದ್ದಾರೆ.

‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದ ಟ್ರೇಲರ್​ ಜುಲೈ 4ರಂದು ಬಿಡುಗಡೆ ಆಗಿ ಸದ್ದು ಮಾಡುತ್ತಿದೆ. ಬಹಳ ಅದ್ದೂರಿಯಾಗಿ ಈ ಟ್ರೇಲರ್​ ಮೂಡಿಬಂದಿದೆ. ಜುಲೈ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇದರಲ್ಲಿ ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್​ ಅವರು ಜೋಡಿಯಾಗಿ ಅಭಿನಯಿಸಿದ್ದಾರೆ. ಅಲ್ಲದೇ, ಪೋಷಕ ಪಾತ್ರಗಳಲ್ಲಿ ಧರ್ಮೇಂದ್ರ, ಶಬ್ನಾ ಆಜ್ಮಿ, ಜಯಾ ಬಚ್ಚನ್​, ರೋನಿತ್​ ರಾಯ್​, ಕರ್ಮವೀರ್​ ಚೌದರಿ, ಸಾಸ್ವತ ಚಟರ್ಜಿ ಮುಂತಾದವರು ನಟಿಸಿದ್ದಾರೆ. ಅಲ್ಲದೇ ಬಾಲಿವುಡ್​ನ ಕೆಲವು ಸ್ಟಾರ್​ ಕಲಾವಿದರು ಅತಿಥಿ ಪಾತ್ರ ಮಾಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಇದನ್ನೂ ಓದಿ: Rocky Aur Rani Ki Prem Kahani: ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಟ್ರೇಲರ್​​; ಕರಣ್​ ಜೋಹರ್​ ಅದ್ದೂರಿತನಕ್ಕೆ ಇಲ್ಲಿದೆ ಸಾಕ್ಷಿ

ಕರಣ್​ ಜೋಹರ್​ ಅವರು ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಬಹುತಾರಾಗಣ ಇರುತ್ತದೆ. ಶಾರುಖ್​ ಖಾನ್​ ಜೊತೆ ಕರಣ್​ ಜೋಹರ್​ ಅವರಿಗೆ ಬಹಳ ಆತ್ಮೀಯತೆ ಇದೆ. ಹಾಗಾಗಿ ಅವರು ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿರಬಹುದು ಎಂದು ಫ್ಯಾನ್ಸ್​ ಊಹಿಸಿದ್ದರು. ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಆ ಬಗ್ಗೆ ಪ್ರಶ್ನೆ ಎದುರಾಯಿತು. ಅದಕ್ಕೆ ಕರಣ್​ ಜೋಹರ್​ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: Karan Johar: ಬ್ರಿಟನ್​ ಪಾರ್ಲಿಮೆಂಟ್​ನಲ್ಲಿ ಕರಣ್​ ಜೋಹರ್​ಗೆ ಸಿಗಲಿದೆ ವಿಶೇಷ ಗೌರವ

‘ಶಾರುಖ್ ಖಾನ್​ ಅವರು ಈ ಸಿನಿಮಾದಲ್ಲಿ ನಟಿಸಿಲ್ಲ. ಆದರೆ ಅವರ ಪ್ರೀತಿ ಮತ್ತು ಆಶೀರ್ವಾದ ನಮ್ಮ ಸಿನಿಮಾದ ಮೇಲಿದೆ. ಅವರು ನನ್ನ ಕುಟುಂಬದ ಸದಸ್ಯನಿದ್ದಂತೆ’ ಎಂದು ಕರಣ್​ ಜೋಹರ್​ ಹೇಳಿದ್ದಾರೆ. ಇನ್ನು, ಸ್ವತಃ ಕರಣ್​ ಜೋಹರ್​ ಈ ಸಿನಿಮಾದಲ್ಲಿ ನಟಿಸಿರಬಹುದಾ ಎಂಬ ಪ್ರಶ್ನೆ ಕೂಡ ಎದುರಾಯಿತು. ಅದಕ್ಕೂ ಅವರು ‘ನೋ’ ಎಂದು ಉತ್ತರಿಸಿದ್ದಾರೆ. ಈ ಚಿತ್ರದಲ್ಲಿ ಮೂವರು ಕಲಾವಿದರು ಅತಿಥಿ ಪಾತ್ರ ಮಾಡಿದ್ದಾರೆ. ಅವರು ಯಾರು ಎಂಬ ಬಗ್ಗೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗತ್ತಿದೆ. ವರುಣ್​ ಧವನ್​, ಸಾರಾ ಅಲಿ ಖಾನ್​, ಅನನ್ಯಾ ಪಾಂಡೆ ಹೆಸರುಗಳು ಹರಿದಾಡುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್