AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಿಂತ ಐಷಾರಾಮಿಯಾಗಿದೆ ಕರಣ್ ಜೋಹರ್ ವ್ಯಾನಿಟಿ ವ್ಯಾನ್; ಇದರಲ್ಲಿವೆ ಐದು ಮುಖ್ಯ ವಸ್ತುಗಳು

ಕರಣ್ ಜೋಹರ್ ಕೂಡ ತಮ್ಮದೇ ಆದ ಐಷಾರಾಮಿ ವ್ಯಾನ್ ಹೊಂದಿದ್ದಾರೆ. ಅದು ಹೇಗಿದೆ ಎಂಬುದನ್ನು ವಿಡಿಯೋ ಮೂಲಕ ತೋರಿಸಿದ್ದಾರೆ.

ಮನೆಗಿಂತ ಐಷಾರಾಮಿಯಾಗಿದೆ  ಕರಣ್ ಜೋಹರ್ ವ್ಯಾನಿಟಿ ವ್ಯಾನ್; ಇದರಲ್ಲಿವೆ ಐದು ಮುಖ್ಯ ವಸ್ತುಗಳು
ಕರಣ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 28, 2022 | 9:59 AM

Share

ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ (Karan Johar) ಅವರು ಬಾಲಿವುಡ್​ನಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅನೇಕ ಸ್ಟಾರ್​​ಕಿಡ್​ಗಳಿಗೆ ಅವರೇ ಗಾಡ್ ಫಾದರ್. ಅವರನ್ನು ಅನೇಕರು ಆರಾಧಿಸುತ್ತಾರೆ. ಆದರೆ, ಇನ್ನೂ ಕೆಲವರಿಗೆ ಕರಣ್ ಜೋಹರ್ ಅವರ ಮೇಲೆ ಎಲ್ಲಿಲ್ಲದ ದ್ವೇಷ. ಪ್ರೀತಿಸುವವರನ್ನು ಮತ್ತಷ್ಟು ಪ್ರೀತಿಸುತ್ತಾರೆ ಕರಣ್​. ಆದರೆ, ದ್ವೇಷ ಮಾಡುವವರ ಬಗ್ಗೆ ಅವರು ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಕರಣ್ ಜೋಹರ್ ಅವರು ಸೋಶಿಯಲ್ ಮೀಡಿಯಾದಲ್ಲಿ (Social Media) ಆ್ಯಕ್ಟೀವ್ ಆಗಿದ್ದಾರೆ. ಅವರು ಹೊಸ ಹೊಸ ವಿಡಿಯೋ ಹಂಚಿಕೊಳ್ಳುತ್ತಾರೆ. ಈಗ ಕರಣ್ ಜೋಹರ್ ಅವರು ತಮ್ಮ ವ್ಯಾನಿಟಿ ವ್ಯಾನ್​ನ ವಿಡಿಯೋ ಹಂಚಿಕೊಂಡಿದ್ದಾರೆ. ಇದು ಸಖತ್ ಐಷಾರಾಮಿ ಆಗಿದೆ.

ಹಲವು ಸೆಲೆಬ್ರಿಟಿಗಳು ತಮ್ಮದೇ ಸ್ವಂತ ವ್ಯಾನಿಟಿ ಹೊಂದಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಸೆಟ್​​ನಲ್ಲಿ ಈ ವಾಹನ ಬಂದು ನಿಲ್ಲುತ್ತದೆ. ಚಿತ್ರೀಕರಣದ ಬಿಡುವಿನಲ್ಲಿ ಸೆಲೆಬ್ರಿಟಿಗಳು ಇಲ್ಲಿ ವಿಶ್ರಾಂತಿ ಪಡೆಯುತ್ತಾರೆ. ಡ್ರೆಸ್ ಚೇಂಜ್, ಮೇಕಪ್ ಎಲ್ಲವೂ ಇಲ್ಲಿಯೇ ನಡೆಯುತ್ತದೆ. ಕರಣ್ ಜೋಹರ್ ಕೂಡ ತಮ್ಮದೇ ಆದ ಐಷಾರಾಮಿ ವ್ಯಾನ್ ಹೊಂದಿದ್ದಾರೆ. ಅದು ಹೇಗಿದೆ ಎಂಬುದನ್ನು ವಿಡಿಯೋ ಮೂಲಕ ತೋರಿಸಿದ್ದಾರೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ವ್ಯಾನಿಟಿ ವ್ಯಾನ್​ನಲ್ಲಿ ಐದು ಪ್ರಮುಖ ವಸ್ತುಗಳಿಗೆ ಕರಣ್ ಜೋಹರ್ ಜಾಗ ನೀಡಿದ್ದಾರೆ. ಕಣ್ಣಿಗೆ ಹಾಕುವ ಕನ್ನಡಕ ಇಡಲು ಕರಣ್ ವಿಶೇಷ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದಲ್ಲದೆ ಉಂಗುರ, ಕುಳಿತುಕೊಳ್ಳಲು ಐಷಾರಾಮಿ ಸೋಫಾ ಈ ವಾಹನದಲ್ಲಿದೆ. ಕರಣ್ ಜಾಕೆಟ್ ಹಾಕೋಕೆ ಇಷ್ಟಪಡುತ್ತಾರೆ. ಅದರ ಕಲೆಕ್ಷನ್​ ಕೂಡ ಇದೆ. ಕಾಫಿ ಮಷಿನ್ ಕೂಡ ಇದರಲ್ಲಿದೆ. ಬಂದ ಅತಿಥಿಗಳಿಗೆ ಕಾಫಿ ನೀಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಇದನ್ನು ಇಡಲಾಗಿದೆ. ಮನೆಯಿಂದ ತಂದ ಊಟವನ್ನು ಬಿಸಿ ಮಾಡಿ ತಿನ್ನಲು ಓವನ್ ಕೂಡ ಇಟ್ಟುಕೊಂಡಿದ್ದಾರೆ ಅವರು.

View this post on Instagram

A post shared by Karan Johar (@karanjohar)

ಇದನ್ನೂ ಓದಿ: ‘ಬಾಲಿವುಡ್​ ಕಲಾವಿದರಲ್ಲಿ ನನಗೆ ಟ್ಯಾಲೆಂಟ್​ ಎಂಬುದು ಕಂಡೇ ಇಲ್ಲ’; ಅಚ್ಚರಿಯ ಹೇಳಿಕೆ ನೀಡಿದ ಕರಣ್ ಜೋಹರ್

ಸಿನಿಮಾ ವಿಚಾರಕ್ಕೆ ಬರೋದಾದರೆ ಕರಣ್ ಜೋಹರ್ ಅವರು ಹಲವು ವರ್ಷಗಳ ಬಳಿಕ ನಿರ್ದೇಶನಕ್ಕೆ ಮರಳುತ್ತಿದ್ದಾರೆ. ಅವರ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದೆ. ಆಲಿಯಾ ಭಟ್ ಪ್ರೆಗ್ನೆಂಟ್ ಆಗಿದ್ದ ಕಾರಣಕ್ಕೆ ಸಿನಿಮಾ ರಿಲೀಸ್ ದಿನಾಂಕ ವಿಳಂಬ ಆಗಿದೆ. ಆಲಿಯಾ ಜತೆ ರಣವೀರ್ ಸಿಂಗ್ ಅವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:13 am, Mon, 28 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!