AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯ ಬಾಯ್ಬಿಟ್ಟು ಟ್ರೋಲ್ ಆದ ದೀಪಿಕಾ ಬೆಂಬಲಕ್ಕೆ ನಿಂತ ಕರಣ್ ಜೋಹರ್

ಕಾಫಿ ವಿತ್ ಕರಣ್ ಶೋನಲ್ಲಿ ದೀಪಿಕಾ ಮಾತಿಗೆ ರಣವೀರ್ ಕೋಪಗೊಂಡಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಕರಣ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಟ್ರೋಲ್​ಗಳನ್ನು ಯಾರೂ ನೋಡಲ್ಲ ಎಂದಿದ್ದಾರೆ ಅವರು.

ಸತ್ಯ ಬಾಯ್ಬಿಟ್ಟು ಟ್ರೋಲ್ ಆದ ದೀಪಿಕಾ ಬೆಂಬಲಕ್ಕೆ ನಿಂತ ಕರಣ್ ಜೋಹರ್
ರಣವೀರ್, ದೀಪಿಕಾ, ಕರಣ್
ರಾಜೇಶ್ ದುಗ್ಗುಮನೆ
|

Updated on: Oct 30, 2023 | 10:35 AM

Share

ಕರಣ್ ಜೋಹರ್ ಅವರು ‘ಕಾಫಿ ವಿತ್ ಕರಣ್’ ಶೋನ 8ನೇ ಸೀಸನ್ ಆರಂಭಿಸಿದ್ದಾರೆ. ಇತ್ತೀಚೆಗೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​​ನಲ್ಲಿ ಈ ಎಪಿಸೋಡ್ ಪ್ರಸಾರ ಕಂಡಿದೆ. ದೀಪಿಕಾ ಪಡುಕೋಣೆ (Deepika Padukone) ಹಾಗೂ ರಣವೀರ್ ಸಿಂಗ್​​ ಮೊದಲ ಅತಿಥಿ ಆಗಿದ್ದರು. ಏನೋ ಹೇಳುವ ಭರದಲ್ಲಿ ದೀಪಿಕಾ ಅವರು ಹಳೆಯ ಘಟನೆ ಬಗ್ಗೆ ಮಾತನಾಡಿದ್ದರು. ರಣವೀರ್ ಸಿಂಗ್ ಜೊತೆ ಡೇಟ್ ಮಾಡುವಾಗಲೇ ಕೆಲವರ ಜೊತೆ ಸುತ್ತಾಡಿದ್ದಾಗಿ ಅವರು ಹೇಳಿಕೊಂಡಿದ್ದರು. ಈ ಮೂಲಕ ಅವರು ಟ್ರೋಲ್ ಆಗಿದ್ದರು. ಇದಕ್ಕೆ ಕರಣ್ ಜೋಹರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕಾಫಿ ವಿತ್ ಕರಣ್ ಶೋನಲ್ಲಿ ದೀಪಿಕಾ ಮಾತನಾಡಿದ್ದರು. ‘ನಾನು ರಣವೀರ್ ಸಿಂಗ್ ಜೊತೆ ಡೇಟ್ ಮಾಡುವಾಗ ಕೆಲವರ ಜೊತೆ ಸುತ್ತಾಡಿದೆ. ಆದರೆ, ಯಾರೂ ರಣವೀರ್ ಅಷ್ಟು ಎಗ್ಸೈಟಿಂಗ್ ಅನಿಸಿಲ್ಲ’ ಎಂದು ಹೇಳಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ದೀಪಿಕಾ ಮಾತಿಗೆ ರಣವೀರ್ ಕೋಪಗೊಂಡಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಕರಣ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಈ ರೀತಿಯ ಟ್ರೋಲ್​ಗಳನ್ನು ಯಾರೂ ನೋಡಲ್ಲ ಎಂದಿದ್ದಾರೆ ಅವರು.

‘ನಿಮಗೆ ಏನು ಮಾಡಬೇಕು ಅನಿಸಿತೋ ಅದನ್ನು ಮಾಡಿ. ಯಾರೂ ಇದನ್ನು ಗಮನಿಸುತ್ತಿಲ್ಲ. ಟ್ರೋಲ್ ನಿಮ್ಮನ್ನು ಎಲ್ಲಿಗೂ ಕರೆದೊಯ್ಯುವುದಿಲ್ಲ’ ಎಂದಿದ್ದಾರೆ ಕರಣ್ ಜೋಹರ್. ಈ ಮೂಲಕ ಈ ಟ್ರೋಲ್​ಗಳು ಉಪಯೋಗಕ್ಕೆ ಬರುವುದಿಲ್ಲ ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ ಮನೆಗೆ ಬಂದು ಎರಡು ಲಕ್ಷ ರೂಪಾಯಿ ಕಳೆದುಕೊಂಡ ತುಕಾಲಿ ಸಂತೋಷ್

‘ಕಾಫಿ ವಿತ್ ಕರಣ್’ ಶೋನಲ್ಲಿ ವಿವಾದಗಳು ಸೃಷ್ಟಿ ಆಗಿದ್ದು ಇದೇ ಮೊದಲೇನು ಅಲ್ಲ. ಈ ಮೊದಲು ಕೂಡ ಸಾಕಷ್ಟು ಕಾಂಟ್ರವರ್ಸಿಗಳು ಆಗಿದ್ದವು. ಕೆಲವರ ವೃತ್ತಿ ಜೀವನದ ಮೇಲೆ ಈ ಶೋ ಪ್ರಭಾವ ಬೀರಿದೆ. ಅನೇಕರು ರಣವೀರ್ ಸಿಂಗ್ ಹಾಗೂ ದೀಪಿಕಾ ಶೀಘ್ರವೇ ವಿಚ್ಛೇದನ ಪಡೆಯುತ್ತಾರೆ ಎಂದು ಕೂಡ ಮಾತನಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು