ಫನ್ನಿ ಕಾರಣಕ್ಕೆ ಮತ್ತೆ ಒಂದಾದ ಕರೀನಾ ಕಪೂರ್​​-ಆಮಿರ್​ ಖಾನ್​; ವಿಡಿಯೋ ವೈರಲ್​

ಕರೀನಾ ಕಪೂರ್​ ಖಾನ್​ ಅವರು ಆಮಿರ್​ ಖಾನ್​ಗೆ ಜೋಡಿಯಾಗಿ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.

ಫನ್ನಿ ಕಾರಣಕ್ಕೆ ಮತ್ತೆ ಒಂದಾದ ಕರೀನಾ ಕಪೂರ್​​-ಆಮಿರ್​ ಖಾನ್​; ವಿಡಿಯೋ ವೈರಲ್​
ಆಮಿರ್ ಖಾನ್, ಕರೀನಾ ಕಪೂರ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: May 01, 2022 | 1:04 PM

ಬಾಲಿವುಡ್​ ಕಲಾವಿದರಾದ ಆಮಿರ್​ ಖಾನ್​ ಮತ್ತು ಕರೀನಾ ಕಪೂರ್​ ಖಾನ್​ (Kareena Kapoor Khan) ನಡುವೆ ಉತ್ತಮ ಗೆಳೆತನ ಇದೆ. ‘3 ಈಡಿಯಟ್ಸ್​’, ‘ತಲಾಶ್​’ ಸಿನಿಮಾಗಳಲ್ಲಿ ಅವರಿಬ್ಬರು ಜೊತೆಯಾಗಿ ನಟಿಸಿದ್ದರು. ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಮೂಲಕ ಈ ಜೋಡಿ ಮತ್ತೆ ಒಂದಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆ.11ರಂದು ‘ಲಾಲ್​ ಸಿಂಗ್​ ಚಡ್ಡಾ’ ಬಿಡುಗಡೆ ಆಗಲಿದೆ. ಈಗಾಗಲೇ ಈ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹಲವು ಕಾರಣಗಳಿಂದಾಗಿ ಈ ಚಿತ್ರದ ಮೇಲೆ ಆಮಿರ್ ಖಾನ್ (Aamir Khan)​ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಮಿಸ್ಟರ್​ ಪರ್ಫೆಕ್ಷನಿಸ್ಟ್​’ ಎಂದು ಕರೆಸಿಕೊಳ್ಳುವ ಅವರು ಒಂದು ಸಿನಿಮಾ ಮಾಡುತ್ತಾರೆ ಎಂದರೆ ಅದರಲ್ಲಿ ಏನಾದರೂ ವಿಶೇಷ ಇದ್ದೇ ಇರುತ್ತದೆ ಎಂಬುದು ಫ್ಯಾನ್ಸ್​ ನಂಬಿಕೆ. ಈ ಬಾರಿ ಅವರು ಅಭಿಮಾನಿಗಳಿಗೆ ಯಾವ ರೀತಿಯ ಮನರಂಜನೆ ನೀಡಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮನೆ ಮಾಡಿದೆ. ‘ಲಾಲ್​ ಸಿಂಗ್​ ಚಡ್ಡಾ’ (Laal Singh Chaddha) ಚಿತ್ರದ ಮೊದಲ ಹಾಡು ರಿಲೀಸ್​ ಆಗಿದೆ. ಅದರ ಜೊತೆಗೆ ಸೋಶಿಯಲ್​ ಮೀಡಿಯಾದಲ್ಲಿ ಒಂದು ಹೊಸ ಫಿಲ್ಟರ್​ ಅನ್ನು ಕೂಡ ಪರಿಚಯಿಸಲಾಗಿದೆ. ಅದಕ್ಕಾಗಿ ಆಮಿರ್ ಖಾನ್​ ಮತ್ತು ಕರೀನಾ ಕಪೂರ್​ ಖಾನ್ ಅವರು ಜೋಡಿಯಾಗಿ ವಿಡಿಯೋ ಮಾಡಿದ್ದಾರೆ.

ಸಂದರ್ಭಕ್ಕೆ ಅನುಗುಣವಾಗಿ ಇನ್​ಸ್ಟಾಗ್ರಾಮ್​ನಲ್ಲಿ ಅನೇಕ ಫಿಲ್ಟರ್​ಗಳನ್ನು ಪರಿಚಯಿಸಲಾಗುತ್ತದೆ. ಈಗ ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾದ ಪ್ರಚಾರಕ್ಕಾಗಿ ಈ ಹೊಸ ಫಿಲ್ಟರ್​ ಬಂದಿದೆ. ಅದನ್ನು ಆಮಿರ್​ ಖಾನ್​ ಮತ್ತು ಕರೀನಾ ಕಪೂರ್​ ಖಾನ್​ ಪ್ರಯತ್ನಿಸಿದ್ದಾರೆ. ‘ನನ್ನ ಹೀರೋ ಜೊತೆ ಫೆದರ್​ ಚಾಲೆಂಜ್​’ ಎಂದು ಈ ವಿಡಿಯೋಗೆ ಕರೀನಾ ಕ್ಯಾಪ್ಷನ್​ ನೀಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇದನ್ನು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾಗೆ ಪ್ರಚಾರ ನೀಡುವ ಕೆಲಸ ಆಗುತ್ತಿದೆ.

ಈ ಮೊದಲೇ ‘ಲಾಲ್​ ಸಿಂಗ್​ ಚಡ್ಡಾ’ ಚಿತ್ರ ತೆರೆಕಂಡಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಬಿಡುಗಡೆ ದಿನಾಂಕ ಮುಂದೂಡುತ್ತಲೇ ಬಂತು. ಈಗ ಅಂತಿಮವಾಗಿ ಆಗಸ್ಟ್​ 11ರಂದು ಸಿನಿಮಾವನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ. ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಸಿನಿಮಾದ ಹಿಂದಿ ರಿಮೇಕ್​ ಆಗಿ ‘ಲಾಲ್​ ಸಿಂಗ್​ ಚಡ್ಡಾ’ ಮೂಡಿಬಂದಿದೆ. ಮೂಲ ಸಿನಿಮಾದಲ್ಲಿ ಟಾಮ್​ ಹ್ಯಾಂಕ್ಸ್​ ಮಾಡಿದ್ದ ಪಾತ್ರವನ್ನು ಹಿಂದಿಯಲ್ಲಿ ಆಮಿರ್ ಖಾನ್​ ಮಾಡಿದ್ದಾರೆ. ಅವರಿಗೆ ಕರೀನಾ ಕಪೂರ್​ ಖಾನ್​ ಜೋಡಿಯಾಗಿದ್ದಾರೆ. ತುಂಬು ಗರ್ಭಿಣಿ ಆಗಿದ್ದಾಗಲೂ ಕರೀನಾ ಅವರು ಈ ಪಾತ್ರದ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು.

ಆಮಿರ್ ಖಾನ್​ ಅವರ ವಿವಿಧ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಸಿನಿಮಾದ ಕಥೆಯ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಇದೆ. ಈ ಚಿತ್ರದ ನಟನೆಗಾಗಿ ಅವರು ಬರೋಬ್ಬರಿ 50 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂಬ ಬಗ್ಗೆ ಇತ್ತೀಚೆಗೆ ವರದಿ ಆಗಿತ್ತು. ಕರೀನಾ ಕಪೂರ್​ ಅವರಿಗೆ 8 ಕೋಟಿ ರೂಪಾಯಿ ನೀಡಲಾಗಿದೆಯಂತೆ. ಈ ಸಿನಿಮಾದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ನಾಗ ಚೈತನ್ಯ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅವರಿಗೆ 6 ಕೋಟಿ ರೂಪಾಯಿ ನೀಡಲಾಗಿದೆ. ಈ ಸಿನಿಮಾದ ಶೂಟಿಂಗ್​ ಮುಗಿದ ಬಳಿಕ ಆಮಿರ್​ ಖಾನ್​ ಮತ್ತು ನಾಗ ಚೈತನ್ಯ ನಡುವಿನ ಸ್ನೇಹ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

ನಟನೆಗೆ ವಿದಾಯ ಹೇಳಲು ಆಮಿರ್​ ಖಾನ್​ ನಿರ್ಧಾರ ಮಾಡಿದ್ದ ಸಂಗತಿ ಬಯಲು; ಮಾಜಿ ಪತ್ನಿ ಏನು ಹೇಳಿದ್ರು?

‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ