AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kareena Kapoor: ಕೊವಿಡ್​ನಿಂದ ಚೇತರಿಸಿಕೊಂಡ ಬಳಿಕ ಯೋಗಾಭ್ಯಾಸ ಮತ್ತೆ ಆರಂಭಿಸಿದ ಕರೀನಾ; ಇಲ್ಲಿವೆ ಚಿತ್ರಗಳು

Kareena Kapoor Yoga: ಬಾಲಿವುಡ್ ನಟಿ ಕರೀನಾ ಕಪೂರ್ ಇತ್ತೀಚೆಗೆ ಕೊವಿಡ್ ಸೋಂಕಿಗೆ ತುತ್ತಾಗಿದ್ದರು. ಇದೀಗ ನಟಿ ಸಂಪೂರ್ಣ ಚೇತರಿಸಿಕೊಂಡಿದ್ದು, ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Kareena Kapoor: ಕೊವಿಡ್​ನಿಂದ ಚೇತರಿಸಿಕೊಂಡ ಬಳಿಕ ಯೋಗಾಭ್ಯಾಸ ಮತ್ತೆ ಆರಂಭಿಸಿದ ಕರೀನಾ; ಇಲ್ಲಿವೆ ಚಿತ್ರಗಳು
ಕರೀನಾ ಕಪೂರ್ ಹಂಚಿಕೊಂಡಿರುವ ಚಿತ್ರ
TV9 Web
| Edited By: |

Updated on: Jan 13, 2022 | 4:46 PM

Share

ಕೊವಿಡ್​ನಿಂದ ಚೇತರಿಸಿಕೊಂಡಿರುವ ನಟಿ ಕರೀನಾ ಕಪೂರ್ ಮತ್ತೆ ತಮ್ಮ ದೈನಂದಿನ ಚಟುವಟಿಕೆಗಳಿಗೆ ಮರಳಿದ್ದಾರೆ. ನಟಿ ಇಂದು ಯೋಗ ಮ್ಯಾಟ್ ಮೇಲೆ ಕುಳಿತಿರುವ ಚಿತ್ರವನ್ನು ಹಂಚಿಕೊಂಡಿದ್ದು, ಬಹಳ ದಿನಗಳ ಮತ್ತೆ ನೆಚ್ಚಿನ ಸ್ಥಳಕ್ಕೆ ಮರಳಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಕರೀನಾ ಹಾಗೂ ಅವರ ಗೆಳತಿ ಅಮೃತಾ ಅರೋರಾಗೆ ಡಿಸೆಂಬರ್​ನಲ್ಲಿ ಕೊವಿಡ್ ಪಾಸಿಟಿವ್ ಆಗಿತ್ತು.ಪಾರ್ಟಿಯಲ್ಲಿ ಭಾಗವಹಿಸಿದ್ದ ಕರೀನಾ ಅವರ ಇತರ ಸ್ನೇಹಿತರಾದ ಸೀಮಾ ಖಾನ್ ಹಾಗೂ ಮಹೀಪ್ ಕಪೂರ್​ಗೂ ಸೋಂಕು ತಗುಲಿತ್ತು. ಬೃಹತ್ ಮುಂಬೈ ಮಹಾನಗರ ಪಾಲಿಕೆ ಕರೀನಾ ಅವರ ನಡತೆಗೆ ವಿರುದ್ಧ ಕಿಡಿಕಾರಿತ್ತು. ಕೊವಿಡ್ ನಿಯಮಗಳನ್ನು ಗಾಳಿಗೆ ತೂರಿ ಹಲವಾರು ಪಾರ್ಟಿಗಳಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿತ್ತು. ಇದನ್ನು ನಿರಾಕರಿಸಿದ್ದ ಕರೀನಾ ತಾವು ಜವಾಬ್ದಾರಿಯುತವಾಗಿ ನಡೆದುಕೊಂಡಿದ್ದೆ ಎಂದು ಹೇಳಿದ್ದರು. ಇದೀಗ ಕೊವಿಡ್​ನಿಂದ ಸಂಪೂರ್ಣ ಚೇತರಿಸಿಕೊಂಡಿರುವ ನಟಿ ಮತ್ತೆ ಹಳೆಯ ಚಟುವಟಿಕೆಗಳಿಗೆ ಮರಳಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಚಿತ್ರಗಳನ್ನು ಹಂಚಿಕೊಂಡಿರುವ ನಟಿ ಯೋಗಭ್ಯಾಸ ತಯಾರಿ ನಡೆಸುತ್ತಿರುವ ಸಂದರ್ಭದ ಚಿತ್ರ ಹಂಚಿಕೊಂಡಿದ್ದಾರೆ. ಅದು ತಮ್ಮ ನೆಚ್ಚಿನ ಸ್ಥಳ ಎಂದು ಹೇಳಿಕೊಂಡಿರುವ ಕರೀನಾ ತಮ್ಮ ಯೋಗ ಶಿಕ್ಷಕಿ ಅನುಷ್ಕಾ ಪರ್ವಾನಿಯವರನ್ನು ಹೊಗಳಿದ್ದಾರೆ. ಇವಿಷ್ಟು ವಿಚಾರಗಳಲ್ಲದೇ ಕರೀನಾ ಮತ್ತೊಂದು ಅಂಶವನ್ನೂ ಪ್ರಸ್ತಾಪಿಸಿದ್ದಾರೆ. ಚಿತ್ರದಲ್ಲಿ ಆಟಿಕೆ ಕಾರೊಂದಿದೆ. ಬೆಬೊ ತಮಾಷೆಯಾಗಿ ‘ಓಹ್ ಅದು ನನ್ನ ಕಾರೇ?’ ಎಂದು ಬರೆದುಕೊಂಡಿದ್ದಾರೆ.

ಕರೀನಾ ಹಂಚಿಕೊಂಡಿರುವ ಪೋಸ್ಟ್ ಇಲ್ಲಿದೆ:

ಕರೀನಾ ಪೋಸ್ಟ್​ಗೆ ಅಭಿಮಾನಿಗಳು ನಾನಾ ವಿಧವಾಗಿ ಪ್ರತಿಕ್ರಿಯಿಸಿದ್ದಾರೆ. ಹಲವರು ನಟಿ ಮತ್ತೆ ಯೋಗ ಮಾಡಲು ಪ್ರಾರಂಭಿಸಿದ್ದಕ್ಕೆ ಹೊಗಳಿದ್ದಾರೆ. ಹೆಚ್ಚಿನವರಿಗೆ ತೈಮೂರ್​ನ ಕಾರು ಆಕರ್ಷಕವಾಗಿ ಕಂಡಿದೆ. ಅದು ಅದ್ಭುತವಾಗಿದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಕರೀನಾ ಈ ಹಿಂದೆಯೂ ಯೋಗ ಮಾಡುತ್ತಿರುವ ಚಿತ್ರಗಳನ್ನು, ವಿಡಿಯೋಗಳನ್ನು ಹಂಚಿಕೊಂಡಿದ್ದರು. ಅಲ್ಲದೇ ಯೋಗದ ಕುರಿತು ಅವರು ಹಲವು ಬಾರಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದರು.

ಚಿತ್ರಗಳ ವಿಚಾರಕ್ಕೆ ಬಂದರೆ ಕರೀನಾ ಕೊನೆಯದಾಗಿ ಬಣ್ಣ ಹಚ್ಚಿದ್ದು 2020ರಲ್ಲಿ ತೆರೆಕಂಡ ‘ಅಂಗ್ರೇಜಿ ಮೀಡಿಯಂ’ನಲ್ಲಿ. ಇದೀಗ ಅವರು ಅಮೀರ್ ಖಾನ್ ನಟನೆಯ ಬಹುನಿರೀಕ್ಷಿತ ‘ಲಾಲ್ ಸಿಂಗ್ ಛಡ್ಡಾ’ದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಏಪ್ರಿಲ್ 14ರಂದು ಚಿತ್ರ ತೆರೆಕಾಣಲಿದೆ.

ಇದನ್ನೂ ಓದಿ:

Arjun Sarja: ಶ್ರುತಿ ಹರಿಹರನ್​ ಮೀಟೂ ಪ್ರಕರಣ: ಅರ್ಜುನ್​ ಸರ್ಜಾಗೆ ಜಯ

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ; ವೈದ್ಯರು ಹೇಳಿದ್ದೇನು?

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ