AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದು ಟ್ರೋಲ್ ಆದ ಕರೀನಾ ಕಪೂರ್

ವಾಂಖೆಡೆಯಲ್ಲಿ ನಡೆದ ಮುಂಬೈ vs ಆರ್​​ಸಿಬಿ ಪಂದ್ಯ ವೀಕ್ಷಣೆಗೆ ಬಂದಿದ್ದ ನಟಿ ಕರೀನಾ ಕಪೂರ್ ಟ್ರೋಲ್ ಆಗಿದ್ದಾರೆ. ಪಂದ್ಯದ ವೇಳೆ ಅವರು ಮೊಬೈಲ್‌ನಲ್ಲಿ ಮುಳುಗಿದ್ದನ್ನು ಮತ್ತು ಮಕ್ಕಳತ್ತ ಗಮನ ನೀಡದಿದ್ದನ್ನು ಫ್ಯಾನ್ಸ್ ಪ್ರಶ್ನಿಸಿದ್ದಾರೆ. ಅಲ್ಲದೆ, ಮುಂಬೈ ಇಂಡಿಯನ್ಸ್ ಜೆರ್ಸಿಯಲ್ಲಿ ಬಂದ ಕರೀನಾ, ಹೊರಹೋಗುವಾಗ ಅದನ್ನು ಬದಲಾಯಿಸಿದ್ದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದು ಟ್ರೋಲ್ ಆದ ಕರೀನಾ ಕಪೂರ್
ಕರೀನಾ
ರಾಜೇಶ್ ದುಗ್ಗುಮನೆ
|

Updated on: Apr 13, 2026 | 7:46 AM

Share

ಬಾಲಿವುಡ್ ನಟಿ ಕರೀನಾ ಕಪೂರ್ (Kareena Kapoor) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ಅವರು ಏಪ್ರಿಲ್ 12ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ vs ಆರ್​​ಸಿಬಿ ಮ್ಯಾಚ್ ನೋಡಲು ಬಂದಿದ್ದರು. ಈ ವೇಳೆ ಅವರ ಮಕ್ಕಳು ಕೂಡ ಇದ್ದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವೇಳೆ ಕರೀನಾ ಕಪೂರ್ ಅವರನ್ನು ಸಾಕಷ್ಟು ಟ್ರೋಲ್ ಮಾಡಲಾಗಿದೆ.

ಮುಂಬೈನಲ್ಲಿ ಬಹುತೇಕ ಬಾಲಿವುಡ್ ಸೆಲೆಬ್ರಿಟಿಗಳು ವಾಸವಾಗಿದ್ದಾರೆ. ಅಲ್ಲಿ ಪಂದ್ಯ ನಡೆದರೆ ಸಾಕಷ್ಟು ಸೆಲೆಬ್ರಿಟಿಗಳು ಭಾಗಿ ಆಗುತ್ತಾರೆ. ಭಾನುವಾರದ ಪಂದ್ಯದಲ್ಲೂ ಚಿತ್ರರಂಗದ ಅನೇಕ ಗಣ್ಯರು ಇದ್ದರು. ನಟಿ ಪೂಜಾ ಹೆಗ್ಡೆ, ಯೂಟ್ಯೂಬರ್ ರಣವೀರ್ ಅಲಹಾಬಾದಿಯಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಮ್ಯಾಚ್ ವೀಕ್ಷಣೆಗೆ ಬಂದಿದ್ದರು. ಅದೇ ರೀತಿ ಕರೀನಾ ಕೂಡ ತಮ್ಮ ಮಕ್ಕಳ ಜೊತೆ ಆಗಮಿಸಿದ್ದರು.

ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಕರೀನಾ ಅವರು ಮೊಬೈಲ್ ಬಳಕೆ ಮಾಡುತ್ತಿದ್ದರು. ಅತ್ತ ಮಕ್ಕಳು ಜ್ಯೂಸ್ ಬಾಟಲಿಗಳನ್ನು ತಂದುಕೊಂಡು ಕುಡಿಯುತ್ತಿದ್ದರು. ಈ ಬಗ್ಗೆ ಕರೀನಾ ಕಪೂರ್​​ಗೆ ಗಮನವೇ ಇರಲಿಲ್ಲ. ಅವರ ಗಮನ ಸಂಪೂರ್ಣವಾಗಿ ಮೊಬೈಲ್ ಮೇಲೆ ಇತ್ತು. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಧುರಂಧರ್ ರಣವೀರ್ ಸಿಂಗ್ ಸಿನಿಮಾ ಎಂದು ಹೇಳಲು ಸಾಧ್ಯವಿಲ್ಲ; ಕರೀನಾ ಕಪೂರ್

ಮೈದಾನದಲ್ಲಿ ಪಂದ್ಯ ನೋಡಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಕರೀನಾಗೆ ಅಂತಹ ಅವಕಾಶ ಸಿಕ್ಕಿದೆ. ಆದರೂ ಅವರು ಮುಂಬೈ ಇಂಡಿಯನ್ಸ್ ತಂಡಕ್ಕೆ ಚಿಯರ್ಸ್ ಮಾಡೋದು ಬಿಟ್ಟು ಮೊಬೈಲ್ ನೋಡುತ್ತಾ ಕುಳಿತಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಇನ್ನು ಮೈದಾನದಲ್ಲಿ ಇರುವಾಗ ಕರೀನಾ ಮುಂಬೈ ಇಂಡಿಯನ್ಸ್ ಜರ್ಸಿ ಧರಿಸಿದ್ದರು. ಹೊರ ಹೋಗುವಾಗ ಅವರು ಶರ್ಟ್ ಬದಲಿಸಿದ್ದರು. ಇದು ಚರ್ಚೆಗೆ ಕಾರಣ ಆಗಿದೆ.ಅವಮಾನ ತಪ್ಪಿಸಿಕೊಳ್ಳಲು ಹೀಗೆ ಮಾಡಿರಬಹುದು ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬೀದಿದೀಪ ನಿರ್ವಹಣೆಯಲ್ಲಿ ಲೋಪ: ಗುತ್ತಿಗೆದಾರರಿಗೆ 13 ಲಕ್ಷ ರೂ ದಂಡ
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ