Kareena Kapoor: ಕೊವಿಡ್​ ಮೂರನೆ ಅಲೆ ಭೀತಿ; ಪತಿ ಸೈಫ್ ಮತ್ತು ಮಕ್ಕಳೊಂದಿಗೆ ಮಾಲ್ಡೀವ್ಸ್​ಗೆ ಹಾರಿದ ಕರೀನಾ

Saif Ali Khan: ಬಾಲಿವುಡ್​ನ ಖ್ಯಾತ ತಾರಾ ಜೋಡಿ ಸೈಫ್ ಹಾಗೂ ಕರೀನಾ ಮಾಲ್ಡೀವ್ಸ್​ನತ್ತ ಪ್ರಯಾಣ ಬೆಳೆಸಿದ್ದಾರೆ.

Kareena Kapoor: ಕೊವಿಡ್​ ಮೂರನೆ ಅಲೆ ಭೀತಿ; ಪತಿ ಸೈಫ್ ಮತ್ತು ಮಕ್ಕಳೊಂದಿಗೆ ಮಾಲ್ಡೀವ್ಸ್​ಗೆ ಹಾರಿದ ಕರೀನಾ
ವಿಮಾನ ನಿಲ್ದಾಣದಲ್ಲಿ ಕರೀನಾ- ಸೈಫ್ ದಂಪತಿ
Follow us
TV9 Web
| Updated By: shivaprasad.hs

Updated on: Aug 14, 2021 | 2:18 PM

ಬಾಲಿವುಡ್​ನ ತಾರಾ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ತಮ್ಮ ಈರ್ವರು ಮಕ್ಕಳೊಂದಿಗೆ ಮಾಲ್ಡೀವ್ಸ್​ಗೆ ಪ್ರಯಾಣ ಬೆಳೆಸಿದ್ದಾರೆ. ಇದಕ್ಕೆ ಕಾರಣವೂ ಇಲ್ಲದಿಲ್ಲ. ನಟ ಸೈಫ್ ಅಲಿ ಖಾನ್ 52ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ , ಅವರ ಜನ್ಮದಿನವನ್ನು ಆಚರಿಸಲು ಮಾಲ್ಡೀವ್ಸ್​ಗೆ ಕುಟಂಬ ಸಮೇತ ಕರೀನಾ ತೆರಳಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಖಾಸಗಿ ವಿಮಾನ ನಿಲ್ದಾಣವೊಂದರಿಂದ ಈ ಜೋಡಿ ಮಾಲ್ಡೀವ್ಸ್​ಗೆ ತೆರಳಿದೆ. ಮಕ್ಕಳಾದ ಜೇಹ್ ಮತ್ತು ತೈಮೂರ್ ಕೂಡಾ ಜೊತೆಯಲ್ಲಿದ್ದರು.

ವಿಮಾನ ನಿಲ್ದಾಣದತ್ತ ತೆರಳುತ್ತಿರುವ ಕರೀನಾ ಹಾಗೂ ಸೈಫ್ ಅಲಿ ಖಾನ್:

ಇತ್ತೀಚೆಗೆ ಕರೀನಾ ಮತ್ತು ಸೈಫ್ ಜೋಡಿ ತಮ್ಮ ಮಕ್ಕಳಿಗೆ ಇಟ್ಟ ಹೆಸರಿನ ಕುರಿತು ಹೆಚ್ಚು ಚರ್ಚೆಯಾಗುತ್ತಿದೆ. ತಮ್ಮ ಮೊದಲ ಮಗನಿಗೆ ತೈಮೂರ್ ಎಂದು ನಾಮಕರಣ ಮಾಡಿದ್ದ ಕರೀನಾ- ಸೈಫ್, ಎರಡನೇ ಮಗನಿಗೆ ಜಹಾಂಗೀರ್ ಎಂದು ಹೆಸರಿಟ್ಟಿದ್ದರು. ಇದರ ಕುರಿತು ಬಹಳಷ್ಟು ಟೀಕೆಗಳೂ ವ್ಯಕ್ತವಾಗಿದ್ದವು. ಆದರೆ ತಾರಾ ಜೋಡಿ ಅದ್ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ಇತ್ತೀಚೆಗೆ ಇಂಡಿಯಾ ಟುಡೆಯೊಂದಿಗೆ ಮಾತನಾಡಿದ್ದ ಕರೀನಾ ಹೆಸರಿನ ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿರುವವರಿಗೆ ಪರೋಕ್ಷವಾಗಿ ಉತ್ತರಿಸಿದ್ದರು. ‘‘ನಾನು ತುಂಬಾ ಸಕಾರಾತ್ಮಕ ವ್ಯಕ್ತಿ. ಕೋವಿಡ್​ನಂತಹ ಸಮಯದಲ್ಲಿ ಸಾಧ್ಯವಾದಷ್ಟು ಸಂತೋಷ ಮತ್ತು ಸಕಾರಾತ್ಮಕತೆಯನ್ನು ಹರಡಲು ಬಯಸುತ್ತೇನೆ. ಯಾವುದೇ ರೀತಿಯ ನಕಾರಾತ್ಮಕತೆಯ ಬಗ್ಗೆ ನಾನು ಯೋಚಿಸುವುದಿಲ್ಲ.’’ ಎಂದಿದ್ದರು.

ನಕಾರಾತ್ಮಕತೆಯನ್ನು ಹೇಗೆ ಎದುರಿಸುತ್ತೀರಿ ಎಂಬ ಪ್ರಶ್ನೆಗೆ, ಧ್ಯಾನ ಮಾಡುವುದು ಮಾತ್ರ ತನಗೆ ಉಳಿದಿರುವ ಆಯ್ಕೆ ಎಂದು ಅವರು ಹೇಳಿದ್ದರು. ‘‘ಸಕಾರಾತ್ಮಕತೆ ಇದ್ದಲ್ಲಿ ನಕಾರಾತ್ಮಕತೆಯೂ ಇರುತ್ತದೆ. ಹಾಗಾಗಿ ಇದನ್ನು ಸ್ವೀಕರಿಸಲೇಬೇಕು. ಆದರೆ ಮಾನಸಿಕ ಶಾಂತಿಗಾಗಿ ಧ್ಯಾನವೊಂದೇ ನನಗೆ ಉಳಿದಿರುವ ಆಯ್ಕೆ’’ ಎಂದಿದ್ದರು.

ಇದನ್ನೂ ಓದಿ:

Jehangir: ಎರಡನೇ ಮಗುವಿಗೆ ಜಹಾಂಗೀರ್ ಎಂದು ನಾಮಕರಣ ಮಾಡಿದ ಕರೀನಾ-ಸೈಫ್ 

ನೈತಿಕತೆ ಬಿಟ್ಟು ಮಹಿಳಾ ಸ್ಪರ್ಧಿಗೆ ಲಿಪ್​ ಕಿಸ್​ ಮಾಡಿದ ಗಾಯಕಿ; ಎತ್ತ ಸಾಗುತ್ತಿದೆ ಬಿಗ್​ ಬಾಸ್​?

(Kareena Kapoor went to Maldives with her family to celebrate Saif Ali Khan’s birthday)

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್