AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಕನ್ನಡದಲ್ಲೂ ಬರಲಿದೆ ‘ದಿ ಕಾಶ್ಮೀರ್​ ಫೈಲ್ಸ್​’?; ರಾಜ್ಯ ಬಿಜೆಪಿ ಹೊಸ ಚಿಂತನೆ

1990ರ ಸಮಯದಲ್ಲಿ ಕಾಶ್ಮೀರದ ಪಂಡಿತರು ಅನುಭವಿಸಿದ ಕಷ್ಟಗಳೇನು ಎನ್ನುವುದನ್ನು ಜನರ ಮುಂದಿಡುವ ಪ್ರಯತ್ನವನ್ನು ವಿವೇಕ್​ ಅಗ್ನಿಹೋತ್ರಿ ಮಾಡಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ.

ಶೀಘ್ರವೇ ಕನ್ನಡದಲ್ಲೂ ಬರಲಿದೆ ‘ದಿ ಕಾಶ್ಮೀರ್​ ಫೈಲ್ಸ್​’?; ರಾಜ್ಯ ಬಿಜೆಪಿ ಹೊಸ ಚಿಂತನೆ
TV9 Web
| Edited By: |

Updated on: Mar 18, 2022 | 5:27 PM

Share

ಕಾಶ್ಮೀರಿ ಪಂಡಿತರ (Kashmiri Pandits) ಹತ್ಯೆ ಹಾಗೂ ಅವರ ವಲಸೆ ಆಧರಿಸಿ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ (The Kashmir Files) ಸಿದ್ಧಗೊಂಡಿದೆ. ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜಕೀಯ ವಲಯದಲ್ಲೂ ಈ ಸಿನಿಮಾ ದೊಡ್ಡ ಮಟ್ಟದ ಚರ್ಚೆ ಸೃಷ್ಟಿ ಮಾಡಿದೆ. ಈ ಚಿತ್ರದ ಬಗ್ಗೆ ಈಗ ಒಂದು ಹೊಸ ಅಪ್​ಡೇಟ್​ ಕೇಳಿ ಬಂದಿದೆ. ಈ ಸಿನಿಮಾವನ್ನು ಕನ್ನಡಕ್ಕೆ ಡಬ್​ ಮಾಡುವ ಬಗ್ಗೆ ರಾಜ್ಯ ಬಿಜೆಪಿ (BJP) ಚಿಂತನೆ ನಡೆಸಿದೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಕನ್ನಡದ ಸಿನಿಪ್ರಿಯರು ಖುಷಿಪಟ್ಟಿದ್ದಾರೆ.

1990ರ ಸಮಯದಲ್ಲಿ ಕಾಶ್ಮೀರದ ಪಂಡಿತರು ಅನುಭವಿಸಿದ ಕಷ್ಟಗಳೇನು ಎನ್ನುವುದನ್ನು ಜನರ ಮುಂದಿಡುವ ಪ್ರಯತ್ನವನ್ನು ವಿವೇಕ್​ ಅಗ್ನಿಹೋತ್ರಿ ಮಾಡಿದ್ದಾರೆ. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿದೆ. ಉತ್ತರ ಭಾರತಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಹಿಂದಿ ಮಾತನಾಡುವವರ ಹಾಗೂ ಹಿಂದಿ ಭಾಷೆಯನ್ನು ಅರ್ಥೈಸಿಕೊಳ್ಳುವವರ ಸಂಖ್ಯೆ ತುಂಬಾನೇ ಕಡಿಮೆ. ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಸಂಪೂರ್ಣವಾಗಿ ಹಿಂದಿಯಲ್ಲೇ ಇದೆ. ಹೀಗಾಗಿ, ಎಲ್ಲಾ ವಿಚಾರಗಳು ಕನ್ನಡಿಗರಿಗೆ ತಲುಪದೇ ಇರಬಹುದು. ಈ ಕಾರಣಕ್ಕೆ ಸಿನಿಮಾ ಕನ್ನಡದಲ್ಲಿ ಡಬ್​ ಆಗಿ ತೆರೆಗೆ ಬಂದರೆ ಉತ್ತಮ ಅನ್ನೋದು ಬಿಜೆಪಿ ಆಲೋಚನೆ.

ಇತ್ತೀಚೆಗೆ ವಿಧಾನಸಭೆ ಹಾಗೂ ಪರಿಷತ್ ಸಚಿವಾಲಯದಿಂದ ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರವನ್ನು ಪ್ರದರ್ಶನ ಮಾಡಲಾಗಿತ್ತು. ಈ ವೇಳೆ ಬಿಜೆಪಿ ನಾಯಕರು ಸಿನಿಮಾವನ್ನು ಇಷ್ಟಪಟ್ಟಿದ್ದಾರೆ. ಈಗ ಈ ಚಿತ್ರವನ್ನು ಜನರ ಮುಂದೆ ಕನ್ನಡದಲ್ಲಿ ಇಡಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಆಪ್ತ ಸಚಿವರ ಜತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಕೂಡ ಈ ವಿಚಾರಕ್ಕೆ ಧ್ವನಿಗೂಡಿಸಿದ್ದಾರೆ. ‘ಈಗ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾ ಹಿಂದಿಯಲ್ಲಿ ಬಿಡುಗಡೆ ಆಗಿದೆ. ಈ ಚಿತ್ರ ಕನ್ನಡಕ್ಕೂ ಡಬ್​ ಆಗಿ ತೆರೆಕಾಣಬೇಕು. ಕನ್ನಡದಲ್ಲಿ ಬಂದರೆ ಹಿಂದಿ ಬಾರದವರಿಗೂ ಸಿನಿಮಾ ಅರ್ಥ ಆಗುತ್ತದೆ’ ಎಂದಿದ್ದಾರೆ ಅವರು.

ವಿವೇಕ್​ ಅಗ್ನಿಹೋತ್ರಿಗೆ ವೈ ಭದ್ರತೆ

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮಾಡಿದ್ದಕ್ಕಾಗಿ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರಿಗೆ ಕೆಲವು ಬೆದರಿಕೆ ಕರೆಗಳು ಬರುತ್ತಿವೆ. ಸೋಶಿಯಲ್​ ಮೀಡಿಯಾದಲ್ಲೂ ಅವರಿಗೆ ಬೆದರಿಕೆ ಹಾಕಲಾಗಿದೆ. ಹಾಗಾಗಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರದಿಂದ ತೀರ್ಮಾನಿಸಲಾಗಿದೆ. 7ರಿಂದ 8 ಜನ CRPF ಕಮಾಂಡೋಗಳು ವಿವೇಕ್​ ಅವರಿಗೆ ಭದ್ರತೆ ಒದಗಿಸಲಿದ್ದಾರೆ. ಸಿನಿಮಾದ ಬಿಡುಗಡೆಗೂ ಮುನ್ನವೇ ಅವರಿಗೆ ಅನೇಕರು ಕೊಲೆ ಬೆದರಿಗೆ ಹಾಕಿದ್ದರು. ಆ ಕಾರಣದಿಂದ ತಮ್ಮ ಸೋಶಿಯಲ್​ ಮೀಡಿಯಾ ಖಾತೆಯನ್ನು ಡಿಆ್ಯಕ್ಟೀವೇಟ್​​ ಮಾಡುವುದಾಗಿ ವಿವೇಕ್​ ಅಗ್ನಿಹೋತ್ರಿ ತಿಳಿಸಿದ್ದರು. ಸಿನಿಮಾ ಬಿಡುಗಡೆ ಆದ ಬಳಿಕ ಬೆದರಿಕೆ ಕರೆಗಳು ಹೆಚ್ಚಿವೆ ಎನ್ನಲಾಗಿದೆ.

ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್​ ಸಿನಿಮಾದಂತೆ ದಿ ಲಖಿಂಪುರ್​ ಫೈಲ್ಸ್​ ಸಿನಿಮಾವೂ ಬರಲಿ: ಎಸ್​ಪಿ ಮುಖ್ಯಸ್ಥ ಅಖಿಲೇಶ್​ ಯಾದವ್​

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡದವರು ದೇಶವಿರೋಧಿಗಳು; ವಿವಾದಾತ್ಮಕ ಹೇಳಿಕೆ ಕೊಟ್ಟ ಶಾಸಕ ರೇಣುಕಾಚಾರ್ಯ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್