AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್’ ನಿರ್ದೇಶಕನ ಮೇಲೆ ಕತೆ ಕದ್ದ ಆರೋಪ: ಕರ್ನಾಟಕ ಹೈಕೋರ್ಟ್ ಹೇಳಿದ್ದೇನು?

Dhurandhar 2 movie: ‘ಧುರಂಧರ್ 2’ ಸಿನಿಮಾ ಅನ್ನು ಜನ ಮುಗಿಬಿದ್ದು ನೋಡುತ್ತಿದ್ದಾರೆ. ಸಿನಿಮಾ ನಿರ್ದೇಶಿಸಿರುವ ಆದಿತ್ಯ ಧರ್ ಈಗ ಭಾರತದ ಸ್ಟಾರ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಆದಿತ್ಯ ಧರ್ ಮೇಲೆ ನಿರ್ದೇಶಕರೊಬ್ಬರು ಕತೆ ಕದ್ದ ಆರೋಪವನ್ನು ಮಾಡಿದ್ದರು, ಅಲ್ಲದೆ, ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿ, ಸಿನಿಮಾಗಳ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡುವಂತೆ ಕೋರಿದ್ದರು.

‘ಧುರಂಧರ್’ ನಿರ್ದೇಶಕನ ಮೇಲೆ ಕತೆ ಕದ್ದ ಆರೋಪ: ಕರ್ನಾಟಕ ಹೈಕೋರ್ಟ್ ಹೇಳಿದ್ದೇನು?
Dhurandhar 2
ಮಂಜುನಾಥ ಸಿ.
|

Updated on: May 01, 2026 | 11:06 AM

Share

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳ ಒಟ್ಟು ಕಲೆಕ್ಷನ್ 3000 ಕೋಟಿಗಳನ್ನು ದಾಟಿದೆ. ಸಿನಿಮಾ ಅನ್ನು ಜನ ಮುಗಿಬಿದ್ದು ನೋಡುತ್ತಿದ್ದಾರೆ. ಸಿನಿಮಾ ನಿರ್ದೇಶಿಸಿರುವ ಆದಿತ್ಯ ಧರ್ ಈಗ ಭಾರತದ ಸ್ಟಾರ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಆದಿತ್ಯ ಧರ್ ಮೇಲೆ ನಿರ್ದೇಶಕರೊಬ್ಬರು ಕತೆ ಕದ್ದ ಆರೋಪವನ್ನು ಮಾಡಿದ್ದರು, ಅಲ್ಲದೆ, ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿ, ಸಿನಿಮಾಗಳ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡುವಂತೆ ಕೋರಿದ್ದರು.

ಕರ್ನಾಟಕದವರಾದ ಸಂತೋಶ್ ಕುಮಾರ್ ಎಂಬುವರು, ‘ಧುರಂಧರ್ 2’ ಸಿನಿಮಾ ಬಿಡುಗಡೆ ಆದ ಬಳಿಕ ನಿರ್ದೇಶಕ ಆದಿತ್ಯ ಧರ್ ವಿರುದ್ಧ ಕತೆ ಕದ್ದ ಆರೋಪ ಮಾಡಿದ್ದರು. ತಾವು ಈಗಾಗಲೇ ‘ಡಿ ಸಾಹೇಬ್’ ಹೆಸರಿನ ಕತೆಯನ್ನು ರಿಜಿಸ್ಟರ್ ಮಾಡಿಸಿದ್ದು, ‘ಧುರಂಧರ್ 2’ ಸಿನಿಮಾ ಕತೆ ಅದೇ ಕತೆಯನ್ನು ಕದ್ದು ಮಾಡಲಾಗಿದೆ ಎಂದು ಆರೋಪಿಸಿದ್ದರು. ತಾವು ಕತೆಯನ್ನು ಸ್ಕ್ರೀನ್ ರೈಟರ್ಸ್ ಅಸೋಸಿಯೇಷನ್​​ನಲ್ಲಿ ರಿಜಿಸ್ಟರ್ ಮಾಡಿಸಿರುವುದಾಗಿಯೂ ಅವರು ಹೇಳಿದ್ದರು.

ಕರ್ನಾಟಕ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದ್ದ ಸಂತೋಶ್ ಕುಮಾರ್, ಆದಿತ್ಯ ಧರ್ ಅವರು ತಮ್ಮ ಕತೆಯನ್ನು ಕದ್ದು ಸಿನಿಮಾ ಮಾಡಿದ್ದು, ಸಿನಿಮಾದ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡಬೇಕು ಎಂದು ಕೋರಿದ್ದರು. ಆದರೆ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸಿನಿಮಾದ ಪ್ರಮಾಣ ಪತ್ರವನ್ನು ರದ್ದು ಮಾಡಲು ನಿರಾಕರಿಸಿದರು.

ಇದನ್ನೂ ಓದಿ:‘ಧುರಂಧರ್ 2’ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾ ಇದೇ ನೋಡಿ

ಸಂತೋಶ್ ಕುಮಾರ್ ಅವರು ಆದಿತ್ಯ ಧರ್ ವಿರುದ್ಧ ಕೃತಿಚೌರ್ಯದ ಆರೋಪ ಮಾಡಿದ ಬಳಿಕ, ಆದಿತ್ಯ ಧರ್ ಅವರು ಸಂತೋಶ್​​ ವಿರುದ್ಧ ಬಾಂಬೆ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಇತ್ತೀಚೆಗಷ್ಟೆ ಬಾಂಬೆ ಹೈಕೋರ್ಟ್​​ನಲ್ಲಿ ನಡೆದಿದ್ದು, ಸಂತೋಶ್ ಕುಮಾರ್, ಆದಿತ್ಯ ಧರ್ ವಿರುದ್ಧ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ಸೂಚಿಸಿದೆ.

‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳನ್ನು ಆದಿತ್ಯ ಧರ್ ನಿರ್ದೇಶಿಸಿದ್ದು, ಭಾರತೀಯ ಸೈನಿಕನೊಬ್ಬ ಪಾಕಿಸ್ತಾನಕ್ಕೆ ಹೋಗಿ ಅಲ್ಲಿ ಉಗ್ರರನ್ನು ಮಟ್ಟ ಹಾಕುವ ಕತೆಯನ್ನು ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ರಣ್ವೀರ್ ಸಿಂಗ್ ನಾಯಕ, ಸಂಜಯ್ ದತ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಆರ್ ಮಾಧವನ್ ಇನ್ನೂ ಹಲವರು ಸಿನಿಮಾನಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್