AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರು, ಶಾಸಕರಿಗೆ ‘ದಿ ಕಾಶ್ಮೀರ್​ ಫೈಲ್ಸ್​’ ವಿಶೇಷ ಶೋ; ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಿದ ಸ್ಪೀಕರ್​ ಕಾಗೇರಿ

ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ಮಂಗಳವಾರ (ಮಾ.15) ಸಂಜೆ 6.45ಕ್ಕೆ ಸಚಿವರು, ಶಾಸಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನೋಡಲಿದ್ದಾರೆ. ವಿಧಾನಸಭೆ ಸಚಿವಾಲಯದಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.

ಸಚಿವರು, ಶಾಸಕರಿಗೆ ‘ದಿ ಕಾಶ್ಮೀರ್​ ಫೈಲ್ಸ್​’ ವಿಶೇಷ ಶೋ; ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಿದ ಸ್ಪೀಕರ್​ ಕಾಗೇರಿ
ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪೋಸ್ಟರ್​, ವಿಶ್ವೇಶ್ವರ ಹೆಗಡೆ ಕಾಗೇರಿ
TV9 Web
| Edited By: |

Updated on:Mar 14, 2022 | 2:36 PM

Share

ದೇಶದೆಲ್ಲಡೆ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾವನ್ನು ಕರ್ನಾಟಕದ ಸಚಿವರು, ಶಾಸಕರು ಕೂಡ ವೀಕ್ಷಣೆ ಮಾಡಲಿದ್ದಾರೆ. ಅದಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸದನದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಣೆ ಮಾಡಿದ್ದಾರೆ. ಮಂಗಳವಾರ (ಮಾ.15) ಸಂಜೆ 6.45ಕ್ಕೆ ಬೆಂಗಳೂರಿನ ಮಂತ್ರಿ ಮಾಲ್​ನಲ್ಲಿ ಸಚಿವರು, ಶಾಸಕರು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನೋಡಲಿದ್ದಾರೆ. ವಿಧಾನಸಭೆ ಸಚಿವಾಲಯದಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಸಿನಿಮಾ ನೋಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಅದಕ್ಕಾಗಿ ರಾಜ್ಯ ಸರ್ಕಾರಕ್ಕೆ ಸ್ಪೀಕರ್​ ಅಭಿನಂದನೆ ಸಲ್ಲಿಸಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ವಿಷಯವನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ವಿವೇಕ್​ ಅಗ್ನಿಹೋತ್ರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಅಭಿಷೇಕ್​ ಅಗರ್​ವಾಲ್​ ಬಂಡವಾಳ ಹೂಡಿದ್ದಾರೆ. ಮೂರು ದಿನಕ್ಕೆ ಈ ಸಿನಿಮಾ 31.6 ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರಕ್ಕೆ ಮೋದಿ ಮೆಚ್ಚುಗೆ: ಈ ಸಿನಿಮಾ ತಂಡ ಶನಿವಾರ (ಮಾ.12) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಆ ವೇಳೆ ಚಿತ್ರದ ಬಗ್ಗೆ ಮೋದಿ ಅವರಿಂದ ಮೆಚ್ಚುಗೆ ಮಾತುಗಳು ಕೇಳಿಬಂದವು ಎಂದು ಚಿತ್ರತಂಡದವರು ಸೋಶಿಯಲ್​ ಮೀಡಿಯಾದಲ್ಲಿ ಸಂಸತ ಹಂಚಿಕೊಂಡರು. ಆ ಬಳಿಕ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಕೌತುಕ ಹೆಚ್ಚಿತು. ಸದ್ಯ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿದೆ.

ಸಿನಿಮಾ ನೋಡಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಬೆಂಗಳೂರಿನಲ್ಲಿ ಭಾನುವಾರ (ಮಾ.13) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಿದರು. ಆ ಬಳಿಕ ಮಾತನಾಡಿದ ಅವರು ರಾಜ್ಯದ ಚಿತ್ರಮಂದಿರಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದರು. ಕಾಶ್ಮೀರಿ ಪಂಡಿತರ ಹತ್ಯಾಕಾಂಡಕ್ಕೆ ಸಂಬಂಧಿಸಿದ ಸಿನಿಮಾ ಇದಾದ್ದರಿಂದ ಪಕ್ಷದ ಸೂಚನೆ ಮೇರೆಗೆ ಬೊಮ್ಮಾಯಿ ಈ ಸಿನಿಮಾ ವೀಕ್ಷಿಸಿದ್ದಾರೆ. ‘ಈ ಚಿತ್ರ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವುದನ್ನ ತೋರಿಸಿದ್ದಾರೆ. ಉಗ್ರರ ಕೈಲಿ ಸಿಕ್ಕು ಅದೆಷ್ಟೋ ಜನ ಪ್ರಾಣ ಬಿಟ್ಟಿದ್ದಾರೆ. ಹೀಗಾಗಿಯೇ ಅಲ್ಲಿ ಆರ್ಟಿಕಲ್ 370 ಅನ್ನು ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿತು. ಇದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಪ್ರತಿಯೊಬ್ಬ ಭಾರತೀಯರು ಈ ಸಿನಿಮಾವನ್ನ ನೋಡಬೇಕು’ ಎಂದು ಅವರು ಹೇಳಿದರು.

ಅಪಪ್ರಚಾರ ಬೇಡ: ರಿಷಿಕುಮಾರ ಸ್ವಾಮಿ ಈ ಸಿನಿಮಾ ಬಗ್ಗೆ ಹಾಸನದಲ್ಲಿ ರಿಷಿಕುಮಾರ ಸ್ವಾಮಿ ಹೇಳಿಕೆ ನೀಡಿದ್ದಾರೆ. ‘ಈ ಚಿತ್ರ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದೆ. 35 ವರ್ಷಗಳ ಹಿಂದೆ ನಡೆದ ಭೀಕರ ದಾಳಿಯನ್ನು ಚಿತ್ರಿಸಿದೆ. ಅಲ್ಲಿನ ಹಿಂದುಗಳ ಮೇಲೆ ನಡೆದ ದೌರ್ಜನ್ಯವನ್ನು ಬಿಡಿಸಿಟ್ಟಿದ್ದಾರೆ. ಕೆಲವು ಅಪ್ಪಟ ಕನ್ನಡಿಗರು ಈ ಸಿನಿಮಾ ನೋಡಬೇಡಿ ಅಂತಿದಾರೆ. ಬೇಕಿದ್ದರೆ ಈ ಸಿನಿಮಾ ಡಬ್ ಮಾಡುವಂತೆ ಕೇಳಿಕೊಳ್ಳಲಿ. ಅದುಬಿಟ್ಟು ಅಪಪ್ರಚಾರ ಬೇಡ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರೇ.. ಇದನ್ನ ನಿಮ್ಮ ಸಹೋದರರಿಗೆ ತೋರಿಸಿ. ಮಾತು ಮಾತಿಗೆ ಬ್ರದರ್ಸ್ ಅಂತೀರಲ್ಲ ಅವರನ್ನ ಥಿಯೇಟರ್​ಗೆ ಕರೆದೊಯ್ದು ತೋರಿಸಿ. ಕರ್ನಾಟಕ ರಾಜ್ಯ ಸರ್ಕಾರ ಈ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಿದೆ. ಕೇವಲ ಟ್ಯಾಕ್ಸ್ ಫ್ರೀ ಮಾಡಿದರೆ ಆಗಲ್ಲ. ಹಳ್ಳಿ-ಹಳ್ಳಿ ಜನರು ನೋಡುವಂತೆ ಮಾಡಿ’ ಎಂದು ರಿಷಿಕುಮಾರ ಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ:

The Kashmir Files Review: ಕಾಶ್ಮೀರದ ಭಯಾನಕ ಇತಿಹಾಸ ಮರೆಯಬಾರದು; ಮರುಕಳಿಸಲೂಬಾರದು

The Kashmir Files: ಎಲ್ಲೆಡೆ ಹೌಸ್​ಫುಲ್ ಪ್ರದರ್ಶನ ಕಾಣುತ್ತಿರುವ ‘ದಿ ಕಾಶ್ಮೀರ್ ಫೈಲ್ಸ್’; ಚಿತ್ರದ ಕಲೆಕ್ಷನ್ ಎಷ್ಟು ಗೊತ್ತಾ?

Published On - 1:56 pm, Mon, 14 March 22