ಕರ್ನಾಟಕದ ಈ ಸ್ಥಳಕ್ಕೆ ಭೇಟಿ ಮಾಡಲು ಬಯಸಿದ್ದಾರೆ ಕಾರ್ತಿಕ್ ಆರ್ಯನ್

ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ ಆಗಿದೆ. ಇದು 1336ರಿಂದ 1565ರವರೆಗೆ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೂಲ ಹೆಸರು ಪಂಪಾ ಎಂದು ಇತ್ತು. ಆ ಬಳಿಕ ಇದರ ಹೆಸರನ್ನು ಬದಲಿಸಲಾಯಿತು.

ಕರ್ನಾಟಕದ ಈ ಸ್ಥಳಕ್ಕೆ ಭೇಟಿ ಮಾಡಲು ಬಯಸಿದ್ದಾರೆ ಕಾರ್ತಿಕ್ ಆರ್ಯನ್
ಕಾರ್ತಿಕ್ ಆರ್ಯನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Sep 24, 2024 | 8:36 AM

ಕಾರ್ತಿಕ್ ಆರ್ಯನ್ ಅವರು ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಈಗ ಅವರಿಗೆ ಬೇಡಿಕೆ ಸೃಷ್ಟಿ ಆಗುತ್ತಿದ್ದಾರೆ. ಈಗ ಕಾರ್ತಿಕ್ ಆರ್ಯನ್ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕರ್ನಾಟಕದ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಬಯಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ಕಾರ್ತಿಕ್ ಆರ್ಯನ್ ಅವರು ಸಂದರ್ಶನ ಒಂದರಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ನಿಮ್ಮ ಬಕೆಟ್​ ಲಿಸ್ಟ್​ನಲ್ಲಿ ಇರುವ ಸ್ಥಳ ಯಾವುದು ಎಂದು ಕೇಳಲಾಯಿತು. ಇದಕ್ಕೆ ಕಾರ್ತಿಕ್ ಆರ್ಯನ್ ಅವರು ನೇರವಾಗಿ ಉತ್ತರ ನೀಡಿದ್ದರು. ‘ನನಗೆ ಹಂಪಿ ಇಷ್ಟ. ಅಲ್ಲಿಗೆ ಒಮ್ಮೆ ತೆರಳಬೇಕು’ ಎಂದಿದ್ದರು ಅವರು.

ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ ಆಗಿದೆ. ಇದು 1336ರಿಂದ 1565ರವರೆಗೆ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೂಲ ಹೆಸರು ಪಂಪಾ ಎಂದು ಇತ್ತು. ಆ ಬಳಿಕ ಇದರ ಹೆಸರನ್ನು ಬದಲಿಸಲಾಯಿತು. ಈ ಸ್ಥಳಕ್ಕೆ ನಿತ್ಯ ಸಾಕಷ್ಟು ಜನರು ಬಂದು ಭೇಟಿ ಮಾಡುತ್ತಾರೆ. ಈ ಜಾಗವನ್ನು ಅನೇಕರು ಇಷ್ಟಪಡುತ್ತಾರೆ. ಬಾಲಿವುಡ್ ಹೀರೋಗಳಿಗೂ ಈ ಸ್ಥಳ ನೋಡಬೇಕು ಎನ್ನುವ ಆಸೆ ಇದೆ ಅನ್ನೋದು ವಿಶೇಷ.

ಕಾರ್ತಿಕ್ ಆರ್ಯನ್ ಅವರ ಬಗ್ಗೆ ಹೇಳಬೇಕು ಎಂದರೆ ಅವರು 2011ರ ‘ಪ್ಯಾರ್ ಕಾ ಪಂಚ್​ನಾಮಾ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ಮೂಲಕ ಅವರು ಗಮನ ಸೆಳೆದರು. ನಂತರ ಹಲವು ಸಿನಿಮಾಗಳನ್ನು ಅವರು ಮಾಡಿದರು. ‘ಸೋನು ಕಿ ಟಿಟ್ಟು ಕಿ ಸ್ವೀಟಿ’ ಚಿತ್ರದ ಮೂಲಕ ಅವರು ದೊಡ್ಡ ಮಟ್ಟದ ಹೆಸರು ಮಾಡಿದರು. 2022ರಲ್ಲಿ ರಿಲೀಸ್ ಆದ ‘ಭೂಲ್​ ಭುಲಯ್ಯ 2’ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿತು. ಅವರು ಹೀರೋ ಆಗಿ ಗಮನ ಸೆಳೆಯುತ್ತಿದ್ದಾರೆ.

ಇದನ್ನೂ ಓದಿ: ‘ನಾನು ರೂಲ್ಸ್​​ನ ಸೆಟ್​​ ಮಾಡ್ತೀನಿ’; ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಕಾರ್ತಿಕ್ ಮಹೇಶ್

ಕಾರ್ತಿಕ್ ಆರ್ಯನ್ ಅವರು ‘ಭೂಲ್​ ಬುಲಯ್ಯ 3’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ದೀಪಾವಳಿಗೆ ರಿಲೀಸ್ ಆಗಲಿದೆ ಎಂದು ಈ ಮೊದಲೇ ಘೋಷಣೆ ಆಗಿದೆ. ವಿದ್ಯಾ ಬಾಲನ್ ಶೋಗೆ ಕಂಬ್ಯಾಕ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:17 am, Tue, 24 September 24

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್