150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ

Bhool Bhulaiyaa 2 Box Office Collection: ‘ಭೂಲ್​ ಭುಲಯ್ಯ 2’ ಚಿತ್ರ ಜಯಭೇರಿ ಬಾರಿಸುತ್ತಿದೆ. ಆದಷ್ಟು ಬೇಗ ಈ ಸಿನಿಮಾ 200 ಕೋಟಿ ರೂಪಾಯಿ ಕ್ಲಬ್​ ಸೇರಲಿ ಎಂದು ಕಾರ್ತಿಕ್​ ಆರ್ಯನ್​ ಫ್ಯಾನ್ಸ್​ ಹಾರೈಸುತ್ತಿದ್ದಾರೆ.

150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ
ಕಾರ್ತಿಕ್ ಆರ್ಯನ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 05, 2022 | 4:18 PM

ನಟ ಕಾರ್ತಿಕ್​ ಆರ್ಯನ್ (Kartik Aaryan) ಅವರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಅವರು ಚಿತ್ರರಂಗಕ್ಕೆ ಬಂದು 10 ವರ್ಷ ಕಳೆದಿದೆ. ಈ ಒಂದು ದಶಕದಲ್ಲಿ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿರುವುದು ‘ಭೂಲ್​ ಭುಲಯ್ಯ 2’ (Bhool Bhulaiyaa 2) ಸಿನಿಮಾದಿಂದ. ಹೌದು, ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಮೋಡಿ ಮಾಡುತ್ತಿದೆ. ಬಿಡುಗಡೆಯಾಗಿ 16 ದಿನ ಕಳೆದಿದ್ದರೂ ಕೂಡ ಈ ಸಿನಿಮಾದ ಆರ್ಭಟ ಕಮ್ಮಿ ಆಗಿಲ್ಲ. 16ನೇ ದಿನವೂ 4.55 ಕೋಟಿ ರೂಪಾಯಿ ಕಲೆಕ್ಷನ್​ (Box Office Collection) ಮಾಡಿದೆ. ಆ ಮೂಲಕ ‘ಭೂಲ್​ ಭುಲಯ್ಯ 2’ ಚಿತ್ರದ ಒಟ್ಟಾರೆ ಗಳಿಕೆ 149.11 ಕೋಟಿ ರೂಪಾಯಿ ಆಗಿದೆ. ಇಂದು (ಜೂನ್​ 5) ಭಾನುವಾರ ಆದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿದ್ದಾರೆ. ಅದರ ಪರಿಣಾಮವಾಗಿ ಈ ಸಿನಿಮಾ 150 ಕೋಟಿ ರೂಪಾಯಿ ಕ್ಲಬ್​ ಸೇರಿದೆ. ಇದು ಕಾರ್ತಿಕ್​ ಆರ್ಯನ್​ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ.

ಬಾಲಿವುಡ್​ನ ಕೆಲವರು ಕಾರ್ತಿಕ್​ ಆರ್ಯನ್​ ವಿರುದ್ಧ ಸಂಚು ರೂಪಿಸಿದ್ದಾರೆ ಎಂಬ ಮಾತಿದೆ. ಕಾರ್ತಿಕ್​ ಆರ್ಯನ್​ಗೆ ಸಿಗಬೇಕಿದ್ದ ಹಲವು ಆಫರ್​ಗಳು ಹಿಂದಿ ಚಿತ್ರರಂಗದ ಕೆಲವು ಪ್ರಭಾವಿ ವ್ಯಕ್ತಿಗಳಿಂದಾಗಿ ತಪ್ಪಿ ಹೋಗಿವೆ. ಮೂವೀ ಮಾಫಿಯಾದವರ ಗುಂಪುಗಾರಿಕೆಯ ಕಾರಣದಿಂದ ಅವರನ್ನು ಸೈಡ್​ ಲೈನ್​ ಮಾಡಲಾಗಿದೆ. ದೊಡ್ಡ ದೊಡ್ಡ ಪ್ರೊಡಕ್ಷನ್​ ಹೌಸ್​ಗಳು ಕಾರ್ತಿಕ್​ ಆರ್ಯನ್​ಗೆ ಅವಕಾಶ ನೀಡುತ್ತಿಲ್ಲ ಎಂಬ ಮಾತಿದೆ. ಈ ಎಲ್ಲ ತಿರಸ್ಕಾರದ ನಡುವೆಯೂ ಕಾರ್ತಿಕ್​ ಆರ್ಯನ್​ ಅವರು ಗೆದ್ದು ತೋರಿಸಿದ್ದಾರೆ.

ಇದನ್ನೂ ಓದಿ
Image
ಮೂರೇ ದಿನಕ್ಕೆ ಅರ್ಧಶತಕ ಬಾರಿಸಿದ ಕಾರ್ತಿಕ್ ಆರ್ಯನ್ ಸಿನಿಮಾ; ಬಾಲಿವುಡ್​ಗೆ ಸಿಕ್ತು ಹೊಸ ಬೂಸ್ಟ್​
Image
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
Image
ಕಾರ್ತಿಕ್​ ಆರ್ಯನ್​ಗೆ ಬರುತ್ತಿಲ್ಲ ಸಿನಿಮಾ ಆಫರ್​; ಕರಣ್​ ಜೋಹರ್​ ಜತೆಗಿನ ವೈಷಮ್ಯವೇ ಮುಳುವಾಯ್ತಾ?
Image
ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಇದನ್ನೂ ಓದಿ: ರಸ್ತೆ ಬದಿಯ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ

‘ಭೂಲ್​ ಭುಲಯ್ಯ 2’ ಸಿನಿಮಾದ ಗೆಲುವು ತುಂಬ ವಿಶೇಷವಾಗಿದೆ. ಯಾಕೆಂದರೆ, ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಸಿನಿಮಾಗಳು ಸೂಕ್ತ ರೀತಿಯಲ್ಲಿ ಕಲೆಕ್ಷನ್​ ಮಾಡುತ್ತಿಲ್ಲ. ಅಂಥದ್ದರಲ್ಲಿ ಕಾರ್ತಿಕ್​ ಆರ್ಯನ್​ ನಟನೆಯ ಈ ಸಿನಿಮಾ 150 ಕೋಟಿ ರೂಪಾಯಿ ಕಮಾಯಿ ಮಾಡಿರುವುದು ಅಚ್ಚರಿಯೇ ಸರಿ. ಅಲ್ಲದೇ, ಈ ಚಿತ್ರಕ್ಕೆ ಅನೇಕರ ಪೈಪೋಟಿ ಇತ್ತು. ಕಂಗನಾ ನಟನೆಯ ‘ಧಾಕಡ್​’ ಚಿತ್ರದ ಎದುರು ‘ಭೂಲ್​ ಭುಲಯ್ಯ 2’ ರಿಲೀಸ್​ ಆಯಿತು. ಆ ಪೈಪೋಟಿಯನ್ನು ಕಾರ್ತಿಕ್​ ಆರ್ಯನ್​ ಸಿನಿಮಾ ಎದುರಿಸಿದೆ. ಅಲ್ಲದೇ, ಈ ವಾರ (ಜೂನ್​ 3) ಬಿಡುಗಡೆಯಾದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದ ಜೊತೆಗೂ ‘ಭೂಲ್​ ಭುಲಯ್ಯ 2’ ಚಿತ್ರ ಕಠಿಣ ಸ್ಪರ್ಧೆ ನೀಡುತ್ತಿದೆ.

ಆದಷ್ಟು ಬೇಗ ಈ ಸಿನಿಮಾ 200 ಕೋಟಿ ರೂಪಾಯಿ ಕ್ಲಬ್​ ಸೇರಲಿ ಎಂದು ಕಾರ್ತಿಕ್​ ಆರ್ಯನ್​ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಈ ಸಿನಿಮಾದ ಕಲೆಕ್ಷನ್​ ಬಗ್ಗೆ ಟ್ರೇಡ್​ ಅನಲಿಸ್ಟ್​ ತರಣ್​ ಆದರ್ಶ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:18 pm, Sun, 5 June 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ