Kartik Aryan: ಕಾರ್ತಿಕ್ ಆರ್ಯನ್​​ಗೆ ‘ರಿಪ್ಲೇಸಿಂಗ್ ಸ್ಟಾರ್​’ ಪಟ್ಟ; ಪ್ರತಿಕ್ರಿಯಿಸಿದ ಸ್ಟಾರ್ ಹೀರೋ

ಕಾರ್ತಿಕ್ ಆರ್ಯನ್ ಅವರ ನಟನೆಯ ‘ಭೂಲ್​ ಭುಲಯ್ಯ 2’ ಸಿನಿಮಾ ಸೂಪರ್ ಹಿಟ್ ಆಯಿತು. ಈ ವರ್ಷ ಬಾಲಿವುಡ್​ನಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿದ ಬೆರಳೆಣಿಕೆ ಸಿನಿಮಾಗಳ ಪೈಕಿ ಇದು ಕೂಡ ಒಂದು. ಇದು ಕಾರ್ತಿಕ್​ ಪಾಲಿಗೆ ತುಂಬಾನೇ ವಿಶೇಷ.

Kartik Aryan: ಕಾರ್ತಿಕ್ ಆರ್ಯನ್​​ಗೆ ‘ರಿಪ್ಲೇಸಿಂಗ್ ಸ್ಟಾರ್​’ ಪಟ್ಟ; ಪ್ರತಿಕ್ರಿಯಿಸಿದ ಸ್ಟಾರ್ ಹೀರೋ
ಕಾರ್ತಿಕ್ ಆರ್ಯನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 28, 2022 | 7:37 AM

ನಟ ಕಾರ್ತಿಕ್ ಆರ್ಯನ್ (Kartik Aryan) ಅವರು ಯಾವುದೇ ಗಾಡ್​ ಫಾದರ್ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಅವರು ಈಗ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ನೀಡಿ ಬಾಲಿವುಡ್​ನಲ್ಲಿ(Bollywood)  ಭದ್ರವಾಗಿ ನೆಲೆಯೂರಿದ್ದಾರೆ. ಬಾಲಿವುಡ್​ನ ಪ್ರಭಾವಿ ಗ್ಯಾಂಗ್ ಕಾರ್ತಿಕ್ ಆರ್ಯನ್ ಅವರನ್ನು ಮಟ್ಟ ಹಾಕಲು ಪ್ಲ್ಯಾನ್ ರೂಪಿಸಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಆ ರೀತಿ ಆಗಿಲ್ಲ. ಕಾರ್ತಿಕ್ ಆರ್ಯನ್ ಅವರು ದಿನಕಳೆದಂತೆ ಮತ್ತಷ್ಟು ಶೈನ್ ಆಗುತ್ತಿದ್ದಾರೆ. ಕೆಲವರು ಅವರನ್ನು ‘ರಿಪ್ಲೇಸಿಂಗ್ ಸ್ಟಾರ್​’ ಎಂದು ಕರೆದಿದ್ದಾರೆ.

ಕಾರ್ತಿಕ್ ಆರ್ಯನ್ ಅವರ ನಟನೆಯ ‘ಭೂಲ್​ ಭುಲಯ್ಯ 2’ ಸಿನಿಮಾ ಸೂಪರ್ ಹಿಟ್ ಆಯಿತು. ಈ ವರ್ಷ ಬಾಲಿವುಡ್​ನಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿದ ಬೆರಳೆಣಿಕೆ ಸಿನಿಮಾಗಳ ಪೈಕಿ ಇದು ಕೂಡ ಒಂದು. ಇದು ಕಾರ್ತಿಕ್​ ಪಾಲಿಗೆ ತುಂಬಾನೇ ವಿಶೇಷ. ‘ಭೂಲ್​ ಭುಲಯ್ಯ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ನಟಿಸಿದ್ದರು. ‘ಭೂಲ್ ಭುಲಯ್ಯ 2’ ಚಿತ್ರದಲ್ಲಿ ಅಕ್ಷಯ್ ಜಾಗವನ್ನು ಕಾರ್ತಿಕ್ ಆರ್ಯನ್ ತುಂಬಿದ್ದರು. ‘ಹೇರಾ ಫೇರಿ 3’ ಚಿತ್ರದಲ್ಲಿ ಅಕ್ಷಯ್ ಬದಲು ಕಾರ್ತಿಕ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಕಾರ್ತಿಕ್ ಆರ್ಯನ್ ಬಗ್ಗೆ ಸಾಕಷ್ಟು ಮೀಮ್​ಗಳು ಹರಿದಾಡುತ್ತಿವೆ. ಅವರು ರಿಪ್ಲೇಸಿಂಗ್ ಸ್ಟಾರ್ ಎಂದು ಕೆಲವರು ಕೊಂಕು ತೆಗೆದಿದ್ದಾರೆ. ‘ಮಿಷನ್ ಇಂಪಾಸಿಬಲ್​’ ಚಿತ್ರದಲ್ಲಿ ಟಾಮ್ ಕ್ರೂಸ್ ಅವರ ಬದಲಿಗೆ ಕಾರ್ತಿಕ್ ಆರ್ಯನ್ ನಟಿಸಬಹುದು ಎನ್ನುವ ಮೀಮ್ ಇದೆ. ಈ ವಿಚಾರಕ್ಕೆ ಕಾರ್ತಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಅವರಿಗೆ ಈ ವಿಚಾರದಲ್ಲಿ ಬೇಸರ ಇಲ್ಲವಂತೆ.

ಇದನ್ನೂ ಓದಿ
Image
150 ಕೋಟಿ ರೂ. ಬಾಚಿದ ‘ಭೂಲ್​ ಭುಲಯ್ಯ 2’; ಬಾಲಿವುಡ್​ ಗುಂಪುಗಾರಿಕೆಗೆ ತಕ್ಕ ಉತ್ತರ ನೀಡಿದ ನಟ
Image
ಮೂರೇ ದಿನಕ್ಕೆ ಅರ್ಧಶತಕ ಬಾರಿಸಿದ ಕಾರ್ತಿಕ್ ಆರ್ಯನ್ ಸಿನಿಮಾ; ಬಾಲಿವುಡ್​ಗೆ ಸಿಕ್ತು ಹೊಸ ಬೂಸ್ಟ್​
Image
ವಿಮಾನ ನಿಲ್ದಾಣದಲ್ಲಿ ಕಾರ್ತಿಕ್​ ಆರ್ಯನ್​ಗೆ​ ದುಂಬಾಲುಬಿದ್ದ ಲೇಡಿ ಫ್ಯಾನ್ಸ್​; ವೈರಲ್​ ಆಯ್ತು ವಿಡಿಯೋ
Image
ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

ಇದನ್ನೂ ಓದಿ: ‘ಭೂಲ್ ಭುಲಯ್ಯ 2’ ಚಿತ್ರ ಗೆಲ್ಲಿಸಿದ ಕಾರ್ತಿಕ್ ಆರ್ಯನ್​ಗೆ ನಾಲ್ಕು ಕೋಟಿ ರೂಪಾಯಿ ಕಾರ್ ಗಿಫ್ಟ್​

‘ಹಲವರು ನನಗೆ ಅದನ್ನು (ಮೀಮ್) ಕಳುಹಿಸಿದ್ದರು. ನನಗೆ ಅದು ಫನ್ನಿ ಅನಿಸಿತು. ನಾನು ಅದನ್ನು ಎಂಜಾಯ್ ಮಾಡಿದೆ. ನಿರ್ಲಕ್ಷ್ಯಕ್ಕೆ ಒಳಗಾಗುವುದಕ್ಕಿಂತ ಇದು ಉತ್ತಮ. ನಾನು ಯಾವಾಗಲೂ ನಿರ್ಲಕ್ಷ್ಯಕ್ಕೆ ಒಳಗಾದೆ. ಆ ಬಗ್ಗೆ ನನಗೆ ಭಯ ಇತ್ತು. ಆದರೆ, ಈಗ ಅದು ಕಷ್ಟ. ನಾನು ಖುಷಿಯಿಂದ ಇದ್ದೇನೆ. ಆ ಭಯ ಇನ್ನೆಂದಿಗೂ ಬರುವುದಿಲ್ಲ. ಹಲವು ಘಟನೆಗಳು ನನ್ನ ಜೀವನದಲ್ಲಿ ನಡೆಯುತ್ತಿವೆ’ ಎಂದು ಖುಷಿ ವ್ಯಕ್ತಪಡಿಸಿದ್ದಾರೆ ಕಾರ್ತಿಕ್.

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್