AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ಪೂಜೆಯ ಫಲ: ಪೋಷಕರಾದ ವಿಕ್ಕಿ ಕೌಶಲ್-ಕತ್ರಿನಾ ಕೈಫ್​​

Katrina Kaif-Vicky Kaushal:ಬಾಲಿವುಡ್​ ಸ್ಟಾರ್ ದಂಪತಿಗಳಾದ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್​​ ಪೋಷಕರಾಗಿದ್ದಾರೆ. ಕತ್ರಿನಾ ಕೈಫ್ ನವೆಂಬರ್ 07ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಇವರಿಗೆ ಮೊದಲ ಮಗು. ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು 2021 ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗಷ್ಟೆ ಕತ್ರಿನಾ ಕೈಫ್, ತಾವು ಗರ್ಭಿಣಿ ಆಗಿರುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಈ ಜೋಡಿಗೆ ಮುದ್ದಾದ ಗಂಡು ಮಗು ಜನಿಸಿದೆ.

ಕುಕ್ಕೆ ಸುಬ್ರಹ್ಮಣ್ಯ ಪೂಜೆಯ ಫಲ: ಪೋಷಕರಾದ ವಿಕ್ಕಿ ಕೌಶಲ್-ಕತ್ರಿನಾ ಕೈಫ್​​
Vicky Kaushal Kukke
ಮಂಜುನಾಥ ಸಿ.
|

Updated on:Nov 07, 2025 | 12:11 PM

Share

ಬಾಲಿವುಡ್​ (Bollywood) ಸ್ಟಾರ್ ದಂಪತಿಗಳಾದ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್​​ ಪೋಷಕರಾಗಿದ್ದಾರೆ. ಕತ್ರಿನಾ ಕೈಫ್ ನವೆಂಬರ್ 07ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಇವರಿಗೆ ಮೊದಲ ಮಗು. ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು 2021 ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗಷ್ಟೆ ಕತ್ರಿನಾ ಕೈಫ್, ತಾವು ಗರ್ಭಿಣಿ ಆಗಿರುವ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದೀಗ ಈ ಜೋಡಿಗೆ ಮುದ್ದಾದ ಗಂಡು ಮಗು ಜನಿಸಿದೆ.

ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರಿಗೆ ಮದುವೆಯಾದ ಕೆಲ ವರ್ಷ ಮಕ್ಕಳಾಗಿರಲಿಲ್ಲ. ಹೀಗಾಗಿ ಕತ್ರಿನಾ ಕೈಫ್ ತಿಂಗಳುಗಳ ಹಿಂದೆ ರಾಜ್ಯದ ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಗಳನ್ನು ಮಾಡಿಸಿದ್ದರು. ಸಂತಾನ ಪ್ರಾಪ್ತಿಗಾಗಿ ಬೇಡಿಕೊಂಡಿದ್ದರು. ಅದಾದ ಕೆಲವೇ ತಿಂಗಳಲ್ಲಿ ಕತ್ರಿನಾ ಕೈಫ್ ಅವರು ತಾವು ಗರ್ಭಿಣಿ ಆಗಿರುವ ಸಂಗತಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದರು. ಇದೀಗ ಈ ದಂಪತಿಗೆ ಗಂಡು ಮಗು ಜನಿಸಿದೆ.

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರುಗಳು ಕೆಲ ಸಮಯ ಪ್ರೀತಿಸಿ 2021 ರಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದರು. ಕತ್ರಿನಾ ಕೈಫ್, ವಯಸ್ಸಿನಲ್ಲಿ ಕತ್ರಿನಾಗಿಂತಲೂ ಹೆಚ್ಚಿದ್ದರೂ ಸಹ ಪರಸ್ಪರ ಪ್ರೀತಿಸಿ, ಕುಟುಂಬದವರ ಸಮ್ಮತಿ, ಆಶೀರ್ವಾದದೊಂದಿಗೆ ಈ ಜೋಡಿ ವಿವಾಹವಾದರು.

ಇದನ್ನೂ ಓದಿ:ಕತ್ರಿನಾ ಕೈಫ್ ರೀತಿ ಕಾಣುವ ನಟಿ ಝರೀನ್ ಖಾನ್​ಗೆ 9 ವರ್ಷ ಕಿರಿಯವನ ಮೇಲೆ ಲವ್

ಮದುವೆಯ ಬಳಿಕ ಕತ್ರಿನಾ ಕೈಫ್ ಸಿನಿಮಾಗಳಲ್ಲಿ ನಟಿಸುವುದನ್ನು ಕಡಿಮೆ ಮಾಡಿದ್ದಾರೆ. ಮದುವೆಯ ಬಳಿಕ ಕತ್ರಿನಾ ಕೇವಲ ಮೂರು ಸಿನಿಮಾಗಳಲ್ಲಿ ಮಾತ್ರವೇ ನಟಿಸಿದ್ದಾರೆ. ಆದರೆ ವಿಕ್ಕಿ ಕೌಶಲ್​​ಗೆ ಮದುವೆಯ ಬಳಿಕ ಅದೃಷ್ಟವೇ ಬದಲಾಗಿದೆ. ಪ್ರತಿಭಾನ್ವಿತ ಆದರೆ ಅವಕಾಶ ವಂಚಿತ ನಟರಂತೆ ಇದ್ದ ವಿಕ್ಕಿ ಕೌಶಲ್ ಈಗ ಬಾಲಿವುಡ್​ನ ಸ್ಟಾರ್ ನಟರುಗಳಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಅವರ ನಟನೆಯ ‘ಛಾವಾ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನೇ ಬರೆದಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ವಿಶೇಷ

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನಲ್ಲಿರುವ ಸುಬ್ರಹ್ಮಣ್ಯ ದೇವಾಲಯ ಹಲವು ಐತಿಹ್ಯಗಳನ್ನು ಹೊಂದಿರುವ ದೇವಾಲಯ. ಇಲ್ಲಿ ಈಶ್ವರನ ಪುತ್ರ ಷಣ್ಮುಖನನ್ನು ನಾಗಸ್ವರೂಪದಲ್ಲಿ ಸುಬ್ರಹ್ಮಣ್ಯ ಹೆಸರಿನಿಂದ ಆರಾಧಿಸಲಾಗುತ್ತದೆ. ಐದು ಸಾವಿರ ವರ್ಷಗಳ ಐತಿಹ್ಯ ಈ ದೇವಾಲಯಕ್ಕೆ ಇದೆ ಎನ್ನಲಾಗುತ್ತದೆ. ಇಲ್ಲಿ ಸರ್ಪ ಸಂಸ್ಕಾರ, ದೋಷ ಪರಿಹಾರಗಳಿಗಾಗಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:57 am, Fri, 7 November 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ