ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಪೂಜಾ ಫಲ? ಮಗುವಿನ ನಿರೀಕ್ಷೆಯಲ್ಲಿ ಕತ್ರೀನಾ

Katrina Kaif and Vicky Kaushal: ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕ್ಕಿ ಕೌಶಲ್ 2021 ರಲ್ಲಿ ವಿವಾಹವಾದರು. ಇದೀಗ ನಾಲ್ಕು ವರ್ಷಗಳ ಬಳಿಕ ಈ ಜೋಡಿ ಮಗುವಿನ ನಿರೀಕ್ಷೆಯಲ್ಲಿದೆ. ಕತ್ರಿನಾ ಕೈಫ್ ಗರ್ಭಿಣಿ ಆಗಿದ್ದಾರೆ ಎಂಬ ಸುದ್ದಿ ಕಳೆದ ಕೆಲ ವಾರಗಳಿಂದಲೂ ಹರಿದಾಡುತ್ತಿತ್ತು. ಇದೀಗ ಸುದ್ದಿಯನ್ನು ಖಾತ್ರಿಪಡಿಸಿದ್ದಾರೆ ಕತ್ರಿನಾ ಕೈಫ್.

ಕುಕ್ಕೆ ಸುಬ್ರಹ್ಮಣ್ಯದಲ್ಲಿನ ಪೂಜಾ ಫಲ? ಮಗುವಿನ ನಿರೀಕ್ಷೆಯಲ್ಲಿ ಕತ್ರೀನಾ
Katrina Vicky
Updated By: ರಾಜೇಶ್ ದುಗ್ಗುಮನೆ

Updated on: Sep 23, 2025 | 2:08 PM

ಬಾಲಿವುಡ್ ಸ್ಟಾರ್ ನಟಿ ಕತ್ರಿನಾ ಕೈಫ್ (Katrina Kaif) ಹಾಗೂ ನಟ ವಿಕ್ಕಿ ಕೌಶಲ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಟಿ ಕತ್ರಿನಾ ಕೈಫ್ ಗರ್ಭಿಣಿ ಎಂಬ ಸುದ್ದಿಗಳು ಕಳೆದ ಕೆಲ ವಾರಗಳಿಂದಲೂ ಹರಿದಾಡುತ್ತಿದ್ದವು. ಇದೀಗ ಸುದ್ದಿ ಖಾತ್ರಿ ಆಗಿದೆ. ಸ್ವತಃ ಕತ್ರಿನಾ ಕೈಫ್ ಅವರು ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಹಾಗೂ ವಿಕ್ಕಿ ಕೌಶಲ್ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ತಾವು ತಾಯಿ ಆಗಲಿರುವ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದಾರೆ.

ನಟ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು 2021 ರಲ್ಲಿ ವಿವಾಹವಾದರು. ಕತ್ರಿನಾ ಕೈಫ್, ವಿಕ್ಕಿ ಕೌಶಲ್​​ಗಿಂತಲೂ ಏಳು ವರ್ಷ ದೊಡ್ಡವರು. ವಯಸ್ಸಿನ ಅಂತರವನ್ನು ನಿರ್ಲಕ್ಷಿಸಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರುಗಳು ಮದುವೆಯಾದರು. ಮದುವೆಯಾಗಿ ನಾಲ್ಕು ವರ್ಷದ ಬಳಿಕ ಈಗ ಈ ದಂಪತಿ ಪೋಷಕರಾಗುತ್ತಿದ್ದಾರೆ. ನಟಿ ಕತ್ರಿನಾ ಕೈಫ್ ಕೆಲ ತಿಂಗಳ ಹಿಂದಷ್ಟೆ ಕರ್ನಾಟಕದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದರು. ಸಂತಾನ ಭಾಗ್ಯಕ್ಕಾಗಿ ಅವರು ವಿಶೇಷ ಪೂಜೆ ಮಾಡಿಸಿದ್ದರು ಎನ್ನಲಾಗಿತ್ತು. ಅದರಂತೆ ಈಗ ಕತ್ರಿನಾ ಕೈಫ್ ಗರ್ಭಿಣಿ ಆಗಿದ್ದು, ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ:ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ನಟಿ ಕತ್ರಿನಾ ಕೈಫ್

ತಮ್ಮ ಹಾಗೂ ಪತಿ ವಿಕ್ಕಿ ಕೌಶಲ್ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕತ್ರಿನಾ ಕೈಫ್, ‘ನಮ್ಮ ಜೀವನದ ಅತ್ಯುತ್ತಮ ಅಧ್ಯಾಯಯದ ಆರಂಭದಲ್ಲಿ ನಾವಿದ್ದೇವೆ. ಈ ಸಮಯದಲ್ಲಿ ನಮ್ಮ ಹೃದಯ ಪ್ರೀತಿ ಮತ್ತು ಕೃತಜ್ಞತೆಯಿಂದ ತುಂಬಿದೆ’ ಎಂದು ಕತ್ರಿನಾ ಬರೆದುಕೊಂಡಿದ್ದಾರೆ. ಕತ್ರಿನಾ ಅವರ ಇನ್​​ಸ್ಟಾಗ್ರಾಂ ಪೋಸ್ಟ್​​ಗೆ ನಟಿ ಮೃಣಾಲ್ ಠಾಕೂರ್, ನೇಹಾ ದೂಪಿಯಾ, ಹರ್ಷಿಕಾ ಪೂಣಚ್ಚ, ಸೋನಂ ಕಪೂರ್, ರಕುಲ್ ಪ್ರೀತ್ ಸಿಂಗ್, ಜಾನ್ಹವಿ ಕಪೂರ್ ಇನ್ನೂ ಹಲವಾರು ಸೆಲೆಬ್ರಿಟಿಗಳು ಶುಭ ಹಾರೈಸಿದ್ದಾರೆ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕತ್ರಿನಾ ಕೈಫ್ ಬಾಲಿವುಡ್​​ನ ಸ್ಟಾರ್ ನಟಿ ಆಗಿದ್ದವರು. 2021 ರಲ್ಲಿ ಮದುವೆ ಆದ ಬಳಿಕವೂ ನಟನೆ ಮುಂದುವರೆಸಿದ್ದರು. 2024 ರಲ್ಲಿ ವಿಜಯ್ ಸೇತುಪತಿ ಜೊತೆಗೆ ‘ಮೇರಿ ಕ್ರಿಸ್​​ಮಸ್’ ಕತ್ರಿನಾ ನಟಿಸಿದ ಕೊನೆಯ ಸಿನಿಮಾ ಆದರೆ ಅದಾದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದಿದ್ದಾರೆ. ಈಗ ಮಗುವಿನ ನಿರೀಕ್ಷೆಯಲ್ಲಿರುವ ಕತ್ರಿನಾ ಇನ್ನೂ ಸುಮಾರು ಒಂದೆರಡು ವರ್ಷ ಸಿನಿಮಾಗಳಿಂದ ದೂರವೇ ಇರಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:22 pm, Tue, 23 September 25