Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ಗೆ ಕೊಲೆ ಬೆದರಿಕೆ; ಕೇಸ್​ ದಾಖಲಿಸಿ ತನಿಖೆ ಆರಂಭಿಸಿದ ಮುಂಬೈ ಪೊಲೀಸರು

Vicky Kaushal | Death Threat: ಹಾಯಾಗಿ ಸಂಸಾರ ಮಾಡುತ್ತಿರುವ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಅವರಿಗೆ ಈಗ ಆತಂಕ ಎದುರಾಗಿದೆ. ಈ ದಂಪತಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆ.

Katrina Kaif: ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ಗೆ ಕೊಲೆ ಬೆದರಿಕೆ; ಕೇಸ್​ ದಾಖಲಿಸಿ ತನಿಖೆ ಆರಂಭಿಸಿದ ಮುಂಬೈ ಪೊಲೀಸರು
ಕತ್ರಿನಾ ಕೈಫ್, ವಿಕ್ಕಿ ಕೌಶಲ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 25, 2022 | 12:46 PM

ಹಿಂದಿ ಚಿತ್ರರಂಗದ ಕ್ಯೂಟ್​ ಜೋಡಿ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​ (Vicky Kaushal) ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆಯೊಡ್ಡಿದ್ದು, ಈ ಕುರಿತು ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸ್​ ದಾಖಲಿಸಿ, ತನಿಖೆ ಶುರುಮಾಡಲಾಗಿದೆ. ಕೊಲೆ ಬೆದರಿಕೆಯ ಸುದ್ದಿ ಕೇಳಿ ಕತ್ರಿನಾ ಕೈಫ್​ (Katrina Kaif) ಹಾಗೂ ವಿಕ್ಕಿ ಕೌಶಲ್​ ಅಭಿಮಾನಿಗಳಿಗೆ ಆತಂಕ ಆಗಿದೆ. ಅಲ್ಲದೇ, ಅವರ ಕುಟುಂಬದವರಿಗೆ ಚಿಂತೆ ಶುರುವಾಗಿದೆ. ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ನಂತರ ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕುವ ಪ್ರಕರಣ ಹೆಚ್ಚುತ್ತಿದೆ. ಇತೀಚೆಗೆ ನಟ ಸಲ್ಮಾನ್​ ಖಾನ್​, ನಟಿ ಸ್ವರಾ ಭಾಸ್ಕರ್​ ಮುಂತಾದವರಿಗೆ ಕೊಲೆ ಬೆದರಿಕೆ (Death Threat) ಹಾಕಿದ್ದು ಬೆಳಕಿಗೆ ಬಂದಿತ್ತು.

ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುವ ಸೆಲೆಬ್ರಿಟಿಗಳು ಸೋಶಿಯಲ್​ ಮೀಡಿಯಾ ಬಳಸುತ್ತಾರೆ. ಕತ್ರಿನಾ ಕೈಫ್​ ಕೂಡ ಇನ್​ಸ್ಟಾಗ್ರಾಮ್​ನಲ್ಲಿ ಸಕ್ರಿಯರಾಗಿರುತ್ತಾರೆ. ಕಿಡಿಗೇಡಿಗಳು ಇನ್​ಸ್ಟಾಗ್ರಾಮ್​ ಮೂಲಕವೇ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಆರೋಪಿಯು ಹಲವು ದಿನಗಳಿಂದ ಕತ್ರಿನಾ ಕೈಫ್​ ಅವರನ್ನು ಫಾಲೋ ಮಾಡುತ್ತಿದ್ದಾನೆ ಎಂದು ಕೂಡ ಪೊಲೀಸರು ಹೇಳಿದ್ದಾರೆ. ಯಾವ ಕಾರಣಕ್ಕಾಗಿ ಈ ದಂಪತಿಯನ್ನು ಟಾರ್ಗೆಟ್​ ಮಾಡಲಾಗಿದೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಪರಸ್ಪರ ಪ್ರೀತಿಸುತ್ತಿದ್ದ ವಿಚಾರವನ್ನು ಬಹಳ ದಿನಗಳವರೆಗೆ ಮುಚ್ಚಿಟ್ಟಿದ್ದರು. 2021ರ ಡಿಸೆಂಬರ್​ನಲ್ಲಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಹಲವು ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈ ನಡುವೆ ಕೊಲೆ ಬೆದರಿಕೆಯ ಬಂದಿರುವುದು ಆತಂಕಕ್ಕೆ ಕಾರಣ ಆಗಿದೆ.

ಇದನ್ನೂ ಓದಿ
Image
Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
Image
ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ
Image
‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ
Image
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸಿದ ನಟ ಸಿದ್ಧಾರ್ಥ್​ಗೆ ಕೊಲೆ ಬೆದರಿಕೆ  

ಈ ಘಟನೆ ಬಗ್ಗೆ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಅವರ ಹಿಂದೆ ಬಿದ್ದಿರುವ ಅಪರಿಚಿತ ವ್ಯಕ್ತಿಗಳು ಯಾರು? ಸಿಧು ಮೂಸೆ ವಾಲಾ ಹಂತಕರಿಗೂ ಈ ಪ್ರಕರಣಕ್ಕೂ ಏನಾದರೂ ಸಂಬಂಧ ಇದೆಯಾ ಎಂಬ ಪ್ರಶ್ನೆ ಮೂಡಿದೆ. ತನಿಖೆ ಬಳಿಕ ಇದಕ್ಕೆ ಉತ್ತರ ಸಿಗಲಿದೆ. ಕೂಡಲೇ ಈ ದಂಪತಿಗೆ ಮುಂಬೈ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ.

Published On - 12:33 pm, Mon, 25 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ