AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?

Katrina Kaif | Vicky Kaushal: ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಮದುವೆಗೆ ಈಗಾಗಲೇ ರಾಜಸ್ಥಾನದಲ್ಲಿ ತಯಾರಿ ನಡೆಯುತ್ತಿದೆ. ಹಾಗಿದ್ದರೂ ಕೂಡ ವಿಕ್ಕಿ ​ ಮತ್ತು ಕತ್ರಿನಾ ಕುಟುಂಬದವರು ಗುಟ್ಟು ಬಿಟ್ಟು ಕೊಡುತ್ತಿಲ್ಲ.

ಮದುವೆ ಬಳಿಕ ಹನಿಮೂನ್​ಗೆ ಹೋಗಲ್ಲ ಕತ್ರಿನಾ ಕೈಫ್​-ವಿಕ್ಕಿ ಕೌಶಲ್​; ಕಾರಣ ಏನು?
ವಿಕ್ಕಿ ಕೌಶಲ್, ಕತ್ರಿನಾ ಕೈಫ್
TV9 Web
| Edited By: |

Updated on: Nov 13, 2021 | 9:27 AM

Share

ಬಾಲಿವುಡ್​ ಕಲಾವಿದರಾದ ವಿಕ್ಕಿ ಕೌಶಲ್​ (Vicky Kaushal) ಮತ್ತು ಕತ್ರಿನಾ ಕೈಫ್ (Katrina Kaif)​ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಬಹಳ ದಿನಗಳಿಂದಲೂ ಕೇಳಿಬರುತ್ತಲೇ ಇದೆ. ಈಗ ಈ ಜೋಡಿ ತಮ್ಮ ರಿಲೇಷನ್​ಶಿಪ್​ ಅನ್ನು ಇನ್ನೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಶೀಘ್ರದಲ್ಲೇ ಈ ಸ್ಟಾರ್​ ಕಪಲ್​ ಮದುವೆ (Katrina Kaif – Vicky Kaushal Marriage) ನಡೆಯಲಿದೆ. ಇದೇ ವರ್ಷ ಡಿಸೆಂಬರ್​ನಲ್ಲಿ ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಹಸೆಮಣೆ ಏರುವುದು ಖಚಿತ ಎಂಬ ಮಾಹಿತಿ ಹರಿದಾಡುತ್ತಿದೆ. ಆ ಬಗ್ಗೆ ಇವರಿಬ್ಬರು ಎಲ್ಲಿಯೂ ಬಾಯಿ ಬಿಟ್ಟಿಲ್ಲ. ಆದರೆ ಬಲ್ಲ ಮೂಲಗಳಿಂದ ಬಿಸಿಬಿಸಿ ಸುದ್ದಿ ಕೇಳಿಬಂದಿದೆ. ರಾಜಸ್ಥಾನದಲ್ಲಿ ಈ ಸೆಲೆಬ್ರಿಟಿ ವಿವಾಹ ನಡೆಯಲಿದೆ. ಅಚ್ಚರಿ ಎಂದರೆ ಮದುವೆ ಬಳಿಕ ಹನಿಮೂನ್​ಗೆ (Honeymoon) ಹೋಗಬಾರದು ಎಂದು ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅದಕ್ಕೆ ಕಾರಣವೂ ಇದೆ.

ಈಗಾಗಲೇ ರಾಜಸ್ಥಾನದಲ್ಲಿ ಮದುವೆ ತಯಾರಿ ನಡೆಯುತ್ತಿದೆ. ಹಾಗಿದ್ದರೂ ಕೂಡ ವಿಕ್ಕಿ ಕೌಶಲ್​ ಮತ್ತು ಕತ್ರಿನಾ ಕೈಫ್​ ಕುಟುಂಬದವರು ಗುಟ್ಟು ಬಿಟ್ಟು ಕೊಡುತ್ತಿಲ್ಲ. ಮದುವೆಗಾಗಿ ಕತ್ರಿನಾ ಹಾಗೂ ವಿಕ್ಕಿ 30 ದಿನಗಳ ಕಾಲ ರಜೆ ಪಡೆಯಲಿದ್ದಾರೆ. ಸದ್ಯ ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಎಲ್ಲ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕಲಿದ್ದಾರೆ. ಒಪ್ಪಿಕೊಂಡಿರುವ ಕೆಲವು ಚಿತ್ರಗಳ ಕೆಲಸಗಳನ್ನು ಮುಂದೂಡಿದ್ದಾರೆ. ಒಂದೆರಡು ಜಾಹೀರಾತಿನ ಶೂಟಿಂಗ್​ನಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ.

ಮದುವೆ ಬಳಿಕ ಹನಿಮೂನ್​ಗೆ ತೆರಳಿದರೆ ಕನಿಷ್ಠ ಒಂದು ತಿಂಗಳು ಕಳೆಯುತ್ತದೆ. ಅದರಿಂದ ಈ ಮೊದಲೇ ಒಪ್ಪಿಕೊಂಡ ಸಿನಿಮಾ ಕೆಲಸಗಳಿಗೆ ತೊಂದರೆ ಆಗಲಿದೆ. ಹಾಗಾಗಿ ಹನಿಮೂನ್​ಗೆ ತೆರಳದಿರಲು ಈ ಜೋಡಿ ನಿರ್ಧರಿಸಿದೆ ಎಂಬ ಮಾತು ಕೇಳಿಬಂದಿದೆ. ವಿಕ್ಕಿ ಕೌಶಲ್​ ಕೈಯಲ್ಲಿ ಹಲವು ಸಿನಿಮಾಗಳಿವೆ. ‘ಟೈಗರ್​ 3’, ‘ಫೋನ್​ ಭೂತ್​’ ಮುಂತಾದ ಚಿತ್ರಗಳಲ್ಲಿ ಕತ್ರಿನಾ ನಟಿಸುತ್ತಿದ್ದಾರೆ. ಆ ಚಿತ್ರಗಳ ಕೆಲಸಕ್ಕೆ ತೊಂದರೆ ಆಗಬಾರದು ಎಂದು ಅವರು ಹನಿಮೂನ್​ ಪ್ಲ್ಯಾನ್​ ಕೈ ಬಿಟ್ಟಿದ್ದಾರೆ.

ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ರೀತಿಯೇ ಬಾಲಿವುಡ್​ನಲ್ಲಿ ಇನ್ನೊಂದು ಸ್ಟಾರ್​ ಜೋಡಿ ಎನಿಸಿಕೊಂಡಿರುವ ಆಲಿಯಾ ಭಟ್​ ಹಾಗೂ ರಣಬೀರ್​ ಕಪೂರ್​ ಸಹ ಶೀಘ್ರವೇ ಮದುವೆ ಆಗುತ್ತಾರೆ ಎಂಬ ಸುದ್ದಿ ಜೋರಾಗಿ ಹಬ್ಬಿದೆ. ಅವರು ಕೂಡ ಡಿಸೆಂಬರ್​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಾರೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಸಿನಿಮಾ ಕೆಲಸಗಳು ಹೆಚ್ಚಿರುವುದರಿಂದ 2022ರ ಏಪ್ರಿಲ್​ಗೆ ಮದುವೆ ದಿನಾಂಕ ಮುಂದೂಡಲಾಗಿದೆ ಎಂಬ ಮಾಹಿತಿ ಈಗ ಕೇಳಿಬಂದಿದೆ.​

ಇದನ್ನೂ ಓದಿ:

ಗುಟ್ಟಾಗಿ ನಡೆಯಿತು ಕತ್ರಿನಾ ಕೈಫ್​​-ವಿಕ್ಕಿ ಕೌಶಲ್​ ರೋಕಾ ಕಾರ್ಯಕ್ರಮ?; ಹಿಂದೂ ಹಬ್ಬದಂದು ಅಭಿಮಾನಿಗಳಿಗೆ ಸರ್​ಪ್ರೈಸ್​

2 ಬಾರಿ ಅಕ್ಷಯ್​ ಕುಮಾರ್​ ಕೆನ್ನೆಗೆ ಬಾರಿಸಿದ ಕತ್ರಿನಾ ಕೈಫ್​; ಇದನ್ನೆಲ್ಲ ಅಕ್ಕಿ ಸಹಿಸಿಕೊಂಡಿದ್ದೇಕೆ?

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?