AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ-ವಿಕ್ಕಿ ಮದುವೆಯ ಅತಿಥಿಗಳಿಗೆ ವೆಲ್​ಕಮ್ ನೋಟ್​; ಈ ಮೂಲಕ ಮುಖ್ಯ ವಿಚಾರ ತಿಳಿಸಿದ ಜೋಡಿ

Katrina Kaif Marriage: ವಿಕ್ಕಿ ಕೌಶಲ್​-ಕತ್ರಿನಾ ಕೈಫ್​ ಮದುವೆಯನ್ನು ಬಹಳ ಸೀಕ್ರೆಟ್​ ಆಗಿ ಮಾಡಲಾಗುತ್ತಿದೆ. ಮದುವೆಯ ಯಾವುದೇ ವಿವರಗಳು ಸೋಶಿಯಲ್​ ಮೀಡಿಯಾದಲ್ಲಿ ಲೀಕ್​ ಆಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

ಕತ್ರಿನಾ-ವಿಕ್ಕಿ ಮದುವೆಯ ಅತಿಥಿಗಳಿಗೆ ವೆಲ್​ಕಮ್ ನೋಟ್​; ಈ ಮೂಲಕ ಮುಖ್ಯ ವಿಚಾರ ತಿಳಿಸಿದ ಜೋಡಿ
ವಿಕ್ಕಿ ಕೌಶಲ್ - ಕತ್ರಿನಾ ಕೈಫ್
TV9 Web
| Edited By: |

Updated on: Dec 08, 2021 | 12:46 PM

Share

ಕತ್ರಿನಾ ಕೈಫ್ (Katrina Kaif)​ ಮತ್ತು ವಿಕ್ಕಿ ಕೌಶಲ್ (Vicky Kaushal)​ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಸ್ಟಾರ್​ ಜೋಡಿಯ ವಿವಾಹಕ್ಕೆ ಸಕಲ ಸಿದ್ಧತೆ ನಡೆದಿದೆ. ಬಾಲಿವುಡ್​ನ ಕೆಲವೇ ಕೆಲವು ಮಂದಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ವಿವಾಹಪೂರ್ವ ಕಾರ್ಯಗಳು ಆರಂಭ ಆಗಿದ್ದು, ಮದುವೆ ನಡೆಯುವ ಸ್ಥಳಕ್ಕೆ ಅತಿಥಿಗಳು ಆಗಮಿಸುತ್ತಿದ್ದಾರೆ. ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ರೆಸಾರ್ಟ್​ನಲ್ಲಿ ಈ ಮದುವೆ ನಡೆಯುತ್ತಿದೆ. ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್ ವಿವಾಹ (Katrina Kaif Vicky Kaushal Wedding) ಸಮಾರಂಭಕ್ಕೆ ಬಂದ ಅತಿಥಿಗಳನ್ನು ಸ್ವಾಗತಿಸಲು ​ಒಂದು ವೆಲ್​ಕಮ್​ ನೋಟ್​ ನೀಡಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಅದರ ಫೋಟೋ ವೈರಲ್​ ಆಗುತ್ತಿದೆ.

‘ಕಡೆಗೂ ನೀವು ಇಲ್ಲಿಗೆ ಬಂದು ತಲುಪಿದ್ದೀರಿ.. ಜೈಪುರದಿಂದ ರಣತಂಬೂರ್​ ತನಕ ನಿಮ್ಮ ಪ್ರಯಾಣ ಚೆನ್ನಾಗಿತ್ತೆಂದು ಭಾವಿಸುತ್ತೇವೆ. ನೀವು ಬರುವಷ್ಟರಲ್ಲಿ ನಾವು ನಿಮಗಾಗಿ ಸಿದ್ಧಪಡಿಸಿದ ಆಹಾರಗಳನ್ನು ಸ್ವೀಕರಿಸಿ’ ಎಂದು ಈ ವೆಲ್​ಕಮ್​ ನೋಟ್​ನಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲ, ಇದರ ಜೊತೆಗೆ ಮುಖ್ಯವಾದ ವಿಷಯವನ್ನು ಪ್ರಸ್ತಾಪಿಸಲಾಗಿದೆ. ಏನದು? ಫೋಟೋ, ವಿಡಿಯೋ ಸೆರೆಹಿಡಿಯಬಾರದು ಎಂಬ ಎಚ್ಚರಿಕೆ ಸಂದೇಶ!

ಹೌದು, ಈ ಮದುವೆಯನ್ನು ಬಹಳ ಸೀಕ್ರೆಟ್​ ಆಗಿ ಮಾಡಲಾಗುತ್ತಿದೆ. ಮದುವೆಯ ಯಾವುದೇ ವಿವರಗಳೂ ಸೋಶಿಯಲ್​ ಮೀಡಿಯಾದಲ್ಲಿ ಲೀಕ್​ ಆಗಬಾರದು ಎಂದು ಎಚ್ಚರಿಕೆ ವಹಿಸಲಾಗುತ್ತಿದೆ. ಹಾಗಾಗಿ ಮದುವೆ ಬಂದ ಅತಿಥಿಗಳಿಗೆ ಈ ಬಗ್ಗೆ ಮೊದಲೇ ತಿಳಿಸಲಾಗಿದೆ. ‘ನೀವೆಲ್ಲರೂ ನಿಮ್ಮ ಮೊಬೈಲ್​ ಫೋನ್​ಗಳನ್ನು ರೂಮ್​ನಲ್ಲಿಯೇ ಇಟ್ಟುಬರಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ. ಯಾವುದೇ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಬೇಡಿ. ನಿಮ್ಮೆಲ್ಲರನ್ನೂ ಭೇಟಿಯಾಗಲು ನಾವು ಕಾದಿದ್ದೇವೆ’ ಎಂದು ಈ ವೆಲ್​ಕಮ್​ ನೋಟ್​ನಲ್ಲಿ ಬರೆಯಲಾಗಿದೆ.

ಕತ್ರಿನಾ ಕೈಫ್​ ಮತ್ತು ವಿಕ್ಕಿ ಕೌಶಲ್​ ಮದುವೆ ಮಂಟಪದ ಬಗ್ಗೆ ಅಚ್ಚರಿಯ ಮಾಹಿತಿ ಹರಡಿದೆ. ಜಗಮಗಿಸುವ ಗಾಜಿನ ಮಂಟಪದಲ್ಲಿ ಕತ್ರಿನಾ ಮತ್ತು ವಿಕ್ಕಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇನ್ನೂ ವಿಶೇಷ ಏನೆಂದರೆ, ಮದುಮಗ ವಿಕ್ಕಿ ಕೌಶಲ್​ ಅವರು 7 ಬಿಳಿ ಕುದುರೆಗಳ ಜತೆಯಲ್ಲಿ ಈ ಮಂಟಪಕ್ಕೆ ಗ್ರ್ಯಾಂಡ್​ ಎಂಟ್ರಿ ನೀಡಲಿದ್ದಾರೆ ಎಂದು ವರದಿ ಆಗಿದೆ. ಈ ಸುದ್ದಿ ಕೇಳಿದ ಬಳಿಕ ಸ್ಟಾರ್ ಜೋಡಿಯ ಅಭಿಮಾನಿಗಳು ಕಣ್ಣರಳಿಸುತ್ತಿದ್ದಾರೆ.

ಮದುವೆ ನಡೆಯುವ ಹೋಟೆಲ್​ ಸುತ್ತಮುತ್ತ ಯಾವುದೇ ಡ್ರೋನ್​ಗಳು ಹಾರಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಒಂದು ವೇಳೆ ಡ್ರೋನ್​ ಕಂಡುಬಂದರೆ ಅದನ್ನು ಶೂಟ್​ ಮಾಡಿ ಹೊಡೆದುರುಳಿಸಲು ತೀರ್ಮಾನಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ:

ಕತ್ರಿನಾ-ವಿಕ್ಕಿ ಲವ್​ಸ್ಟೋರಿ ಶುರು ಆಗಲು ಕಾರಣ ಆದ ವ್ಯಕ್ತಿ ಯಾರು ಗೊತ್ತಾ? ಇಲ್ಲಿದೆ ಫುಲ್​ ವಿವರ

ಮದುವೆಯಲ್ಲಿ ಕತ್ರಿನಾ​ ಧರಿಸುವ ಬಟ್ಟೆ ಬಗ್ಗೆಯೂ ಗುಟ್ಟು; ಇಷ್ಟೆಲ್ಲ ರಹಸ್ಯ ಕಾಪಾಡುತ್ತಿರೋದು ಯಾಕೆ?

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್