ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ ಅಕ್ಷಯ್​ ಕುಮಾರ್​

ಆಗಸ್ಟ್​ 9ರಂದು ಅಕ್ಷಯ್​ ಕುಮಾರ್​ ಅಭಿನಯದ ‘ಖೇಲ್​ ಖೇಲ್​ ಮೇ’ ಚಿತ್ರ ತೆರೆಕಾಣಲಿದೆ. ಈ ಹಿನ್ನೆಲೆಯಲ್ಲಿ ಅವರು ಮುಂಬೈನ ಹಾಜಿ ಅಲಿ ದರ್ಗಾಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ದರ್ಗಾದ ನವೀಕರಣ ಕಾರ್ಯ ನಡೆಯುತ್ತಿದೆ. ಹಾಗಾಗಿ ಅಕ್ಷಯ್​ ಕುಮಾರ್​ ಅವರು 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಹಾಜಿ ಅಲಿ ದರ್ಗಾ ನವೀಕರಣಕ್ಕೆ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ ಅಕ್ಷಯ್​ ಕುಮಾರ್​
ಹಾಜಿ ಅಲಿ ದರ್ಗಾದಲ್ಲಿ ಅಕ್ಷಯ್​ ಕುಮಾರ್​ ಪ್ರಾರ್ಥನೆ
Follow us
|

Updated on: Aug 08, 2024 | 7:39 PM

ನಟ ಅಕ್ಷಯ್​ ಕುಮಾರ್​ ಅವರು ಇಂದು (ಆಗಸ್ಟ್​ 8) ಮುಂಬೈನ ಹಾಜಿ ಅಲಿ ದರ್ಗಾಗೆ ಭೇಟಿ ನೀಡಿದ್ದಾರೆ. ಈ ವಿಚಾರ ಸಖತ್​ ಸುದ್ದಿ ಆಗಿದೆ. ಯಾಕೆಂದರೆ, ಅವರು ಈ ದುರ್ಗಾ ನವೀಕರಣಕ್ಕೆ ಬರೋಬ್ಬರಿ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಮೊದಲಿನಿಂದಲೂ ಕೂಡ ಅಕ್ಷಯ್​ ಕುಮಾರ್​ ಅವರು ಸಮಾಜಮುಖಿ ಕಾರ್ಯಗಳಿಗೆ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಾ ಬಂದಿದ್ದಾರೆ. ಸಿನಿಮಾಗಳು ಸತತವಾಗಿ ಸೋತಿದ್ದರೂ ಕೂಡ ಅವರ ಮನೋಭಾವದಲ್ಲಿ ಬದಲಾವಣೆ ಆಗಿಲ್ಲ. ಹಾಜಿ ಅಲಿ ದರ್ಗಾಗೆ ಕೋಟ್ಯಂತರ ರೂಪಾಯಿ ನೀಡಿದ್ದಕ್ಕೆ ಅನೇಕರು ಭೇಷ್​ ಎಂದಿದ್ದಾರೆ.

ಅಕ್ಷಯ್​ ಕುಮಾರ್​ ಅವರು ನೀಡಿರುವ 1.21 ಕೋಟಿ ರೂಪಾಯಿ ಹಣದ ಸಹಾಯದಿಂದ ಹಾಲಿ ಅರ್ಲಿ ದರ್ಗಾದ ನವೀಕರಣ ಮಾಡಲಾಗುವುದು. ಇಂದು (ಆ.8) ಅಕ್ಷಯ್​ ಕುಮಾರ್​ ಅವರು ತಮ್ಮ ಬ್ಯುಸಿ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ದರ್ಗಾಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಸ್ವರ್ಗದಲ್ಲಿರುವ ತಮ್ಮ ಪಾಲಕರ ಸಲುವಾಗಿ ಅವರು ದರ್ಗಾದಲ್ಲಿ ಪ್ರಾರ್ಥನೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್​’ ಬಿಟ್ಟುಕೊಡುವ ದಿನಾಂಕದಲ್ಲಿ ರಿಲೀಸ್​ ಆಗತ್ತಾ ಅಕ್ಷಯ್​ ಕುಮಾರ್​ ಸಿನಿಮಾ?

ಸಿನಿಮಾ ವಿಚಾರಕ್ಕೆ ಬರುವುದಾದರೆ, ಅಕ್ಷಯ್​ ಕುಮಾರ್​ ನಟನೆಯ ‘ಖೇಲ್​ ಖೇಲ್​ ಮೇ’ ಸಿನಿಮಾ ಆಗಸ್ಟ್​ 9ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾಗೆ ಮುದಾಸರ್​ ಅಜೀಜ್​ ನಿರ್ದೇಶನ ಮಾಡಿದ್ದಾರೆ. ಅಕ್ಷಯ್​ ಕುಮಾರ್​ ಜೊತೆ ಫರ್ದೀನ್​ ಖಾನ್​, ವಾಣಿ ಕಪೂರ್​, ತಾಪ್ಸಿ ಪನ್ನು, ಪ್ರಗ್ಯಾ ಜೈಸ್ವಾಲ್​ ಮುಂತಾದವರು ನಟಿಸಿದ್ದಾರೆ. ಈ ಚಿತ್ರದ ಜೊತೆ ಶ್ರದ್ಧಾ ಕಪೂರ್​ ನಟನೆಯ ‘ಸ್ತ್ರೀ 2’, ಜಾನ್​ ಅಬ್ರಾಹಂ ನಟನೆಯ ‘ವೇದಾ’ ಸಿನಿಮಾ ಕೂಡ ಪೈಪೋಟಿಗೆ ಇಳಿದಿವೆ. ಹಾಗಾಗಿ ಸ್ಪರ್ಧೆ ಜೋರಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಸರಿಯಾದ ಗೆಲುವು ಸಿಕ್ಕಿಲ್ಲ. ಸಿನಿಮಾಗಳ ಆಯ್ಕೆಯಲ್ಲಿ ಅವರು ಎಡವುತ್ತಿದ್ದಾರೆ ಎಂಬ ಅಭಿಪ್ರಾಯ ಹಲವರದ್ದು. ಅಲ್ಲದೇ, ಅವಸರದಲ್ಲಿ ಸಿನಿಮಾದ ಕೆಲಸಗಳನ್ನು ಮುಗಿಸುತ್ತಿರುವುದರಿಂದ ಗುಣಮಟ್ಟದ ಕಡೆಗೆ ಗಮನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅನೇಕರು ಟೀಕಿಸಿದ್ದಾರೆ. ಈ ಶುಕ್ರವಾರವಾದರೂ (ಆಗಸ್ಟ್​ 9) ಅಕ್ಷಯ್​ ಕುಮಾರ್​ ಅವರಿಗೆ ಗೆಲುವು ಸಿಗುತ್ತಾ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ