AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಯಾರಾ ಅಡ್ವಾಣಿ; ಖುಷಿ ವಿಷಯ ಹಂಚಿಕೊಂಡ ದಂಪತಿ

ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇಬ್ಬರೂ ಜಂಟಿಯಾಗಿ ಈ ವಿಷಯ ಹಂಚಿಕೊಂಡಿದ್ದು, ‘ಮತ್ತೊಮ್ಮೆ ಆಶೀರ್ವಾದ ಸಿಕ್ಕಿದೆ’ ಎಂದು ಬರೆದುಕೊಂಡಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಈ ಜೋಡಿಗೆ ಹೆಣ್ಣು ಮಗು ಜನಿಸಿತ್ತು.

Kiara Advani: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಯಾರಾ ಅಡ್ವಾಣಿ; ಖುಷಿ ವಿಷಯ ಹಂಚಿಕೊಂಡ ದಂಪತಿ
ಸಿದ್ದಾರ್ಥ್-ಕಿಯಾರಾ
ರಾಜೇಶ್ ಹೆಗಡೆ ದುಗ್ಗುಮನೆ
| Edited By: |

Updated on:Oct 07, 2026 | 12:02 PM

Share

ಮುಖ್ಯಾಂಶಗಳು

  •  ಬಾಲಿವುಡ್‌ನಲ್ಲಿ ಸಿಹಿ ಸುದ್ದಿ
  • ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕಿಯಾರಾ-ಸಿದ್ಧಾರ್ಥ್ ಜೋಡಿ
  • ಬಿಗ್ ಬಾಸ್ 20 ವೇದಿಕೆಯಲ್ಲಿ ಸಲ್ಮಾನ್ ಜೊತೆ ಮಾತಾಗಿದ್ದೇ ನಿಜವಾಯ್ತು

‘ಟಾಕ್ಸಿಕ್’ ಸಿನಿಮಾ ಮೂಲಕ ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾದ ನಟಿ ಕಿಯಾರಾ ಅಡ್ವಾಣಿ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ಮೊದಲ ಮಗಳು ಸರಾಯಾ ಆಗಮನದ ಬಳಿಕ, ಇದೀಗ ಅವರು ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿ ವಿಷಯವನ್ನು ಕಿಯಾರಾ ಹಾಗೂ ಅವರ ಪತಿ ಸಿದ್ಧಾರ್ಥ್ ಮಲ್ಹೋತ್ರಾ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇಂದು (ಅಕ್ಟೋಬರ್ 7) ಕಿಯಾರಾ ಅಡ್ವಾಣಿ ಹಾಗೂ ಸಿದ್ಧಾರ್ಥ್ ಮಲ್ಹೋತ್ರಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಳ್ಳುವ ಮೂಲಕ ಈ ಸಂತಸದ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಮಗುವಿನ ಸಾಕ್ಸ್ ಹಿಡಿದುಕೊಂಡಿರುವ ಕ್ಯೂಟ್ ಫೋಟೋ ಹಂಚಿಕೊಂಡ ಕಿಯಾರಾ, ‘ನಮಗೆ ಮತ್ತೊಮ್ಮೆ ಆಶೀರ್ವಾದ ಸಿಕ್ಕಿದೆ. ನಮ್ಮ ಹೃದಯ ಪ್ರೀತಿ ಮತ್ತು ಕೃತಜ್ಞತೆಯಿಂದ ತುಂಬಿವೆ’ ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಬಾಲಿವುಡ್ ಚಿತ್ರರಂಗದ ಪ್ರಮುಖರಾದ, ಕರಣ್ ಜೋಹರ್, ಭೂಮಿ ಪಡ್ನೇಕರ್ ಸೇರಿದಂತೆ ಹಲವು ಕಲಾವಿದರು ಹಾಗೂ ದಂಪತಿಯ ಅಭಿಮಾನಿಗಳು ಕಮೆಂಟ್ ಸೆಕ್ಷನ್‌ನಲ್ಲಿ ಅಭಿನಂದನೆಗಳು ಮತ್ತು ಪ್ರೀತಿಯ ಹೊಳೆಯನ್ನೇ ಹರಿಸಿದ್ದಾರೆ.

View this post on Instagram

A post shared by KIARA (@kiaraaliaadvani)

ಇತ್ತೀಚೆಗಷ್ಟೇ ‘ಬಿಗ್ ಬಾಸ್ 20’ ಶೋಗೆ ಭೇಟಿ ನೀಡಿದ್ದ ಸಿದ್ಧಾರ್ಥ್ ಮಲ್ಹೋತ್ರಾ, ತಂದೆಯಾದ ಅನುಭವದ ಕುರಿತು ಮಾತನಾಡುತ್ತಾ ‘ಇದು ನನ್ನ ಜೀವನದ ಅತ್ಯುತ್ತಮ ಪಾತ್ರ’ ಎಂದು ಭಾವನಾತ್ಮಕವಾಗಿ ಹೇಳಿಕೊಂಡಿದ್ದರು. ತಮ್ಮ 15 ತಿಂಗಳ ಮುದ್ದಾದ ಮಗಳು ಸರಾಯಾಳ ಬಗ್ಗೆಯೂ ಪ್ರೀತಿಯಿಂದ ನೆನಪಿಸಿಕೊಂಡಿದ್ದರು. ಈ ವೇಳೆ ನಿರೂಪಕ ಸಲ್ಮಾನ್ ಖಾನ್ ತಮಾಷೆಯಾಗಿ ‘ಶೀಘ್ರದಲ್ಲೇ ನಿಮಗೊಂದು ಮತ್ತೊಂದು ಮಗುವಾಗಲಿ’ ಎಂದು ಹಾರೈಸಿದ್ದರು.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾ ಕೊನೆಯದಾಗಿ ಗಳಿಸಿದ್ದೆಷ್ಟು? ಇಲ್ಲಿದೆ ಕಲೆಕ್ಷನ್ ವಿವರ

ಫೆಬ್ರವರಿ 2023ರಲ್ಲಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆದ ಅದ್ಧೂರಿ ಹಾಗೂ ಕೌಟುಂಬಿಕ ಸಮಾರಂಭದಲ್ಲಿ ಕಿಯಾರಾ ಮತ್ತು ಸಿದ್ಧಾರ್ಥ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಂತರ ಜುಲೈ 15, 2025ರಂದು ಈ ದಂಪತಿಗೆ ಹೆಣ್ಣು ಮಗು (ಸರಾಯಾ) ಜನಿಸಿತ್ತು. ಇದೀಗ ಮೊದಲ ಮಗಳಿಗೆ ಒಂದು ವರ್ಷ ತುಂಬಿದ ಕೆಲವೇ ತಿಂಗಳುಗಳಲ್ಲಿ ಮತ್ತೆ ತಂದೆ-ತಾಯಿಯಾಗುತ್ತಿರುವ ಖುಷಿಯಲ್ಲಿದ್ದಾರೆ ಈ ಸ್ಟಾರ್ ಜೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:53 am, Wed, 7 October 26

Follow Us
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಸ್ವಂತ ಹಣದಲ್ಲಿ ಹೆದ್ದಾರಿಯ ನೂರಾರು ಗುಂಡಿಗಳನ್ನು ಮುಚ್ಚಿದ ಯುವಕರಪಡೆ
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಮೈಸೂರು ದಸರಾ 2026: ಗಜಪಡೆ, ಅಶ್ವಪಡೆಗೆ ಸಿಡಿಮದ್ದು ತಾಲೀಮು
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
ಕೊಪ್ಪಳ: ತಾನೇ ನಲ್ಲಿ ತಿರುಗಿಸಿ ದಾಹ ಇಂಗಿಸಿಕೊಂಡ ಗೋಮಾತೆ!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
4 ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಂತ ವಂದೇ ಭಾರತ್ ಸೇರಿ 4 ರೈಲುಗಳು!
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
ಆಹಾರದಾಸೆಗೆ ಕಾರಿನ ಮೇಲೆ ಕಾಲಿಟ್ಟ ಕಾಡಾನೆ! ಪ್ರಯಾಣಿಕರು ಜಸ್ಟ್ ಮಿಸ್
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
‘ಸ್ತ್ರೀ ವ್ಯಾಮೋಹ ಇರುವ ಕಳ್ಳ ನಾಯಿ’; ಯಶಸ್ ವಿರುದ್ಧ ಮಿತಿಮೀರಿದ ಮಂಜು ಮಾತು
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಆಡಳಿತ: ಒಂದು ಅವಲೋಕನ
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!
ರಾಜ್ಯ ಸರ್ಕಾರಕ್ಕೆ 2000 ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್!