Kiara Advani Wedding: ಮದುವೆ ಬಳಿಕ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಸಿದ್ದಾರ್ಥ್​-ಕಿಯಾರಾ ಅಡ್ವಾಣಿ

Kiara Advani | Sidharth Malhotra: ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಮದುವೆಯ ಫೋಟೋಗಳು ವೈರಲ್​ ಆಗಿವೆ. ಚಿತ್ರರಂಗದ ಸ್ನೇಹಿತರಿಗಾಗಿ ಮುಂಬೈನಲ್ಲಿ ಈ ಜೋಡಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಿದೆ.

Kiara Advani Wedding: ಮದುವೆ ಬಳಿಕ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಸಿದ್ದಾರ್ಥ್​-ಕಿಯಾರಾ ಅಡ್ವಾಣಿ
ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ
Follow us
ಮದನ್​ ಕುಮಾರ್​
|

Updated on:Feb 08, 2023 | 7:26 PM

ನಟಿ ಕಿಯಾರಾ ಅಡ್ವಾಣಿ (Kiara Advani) ಹಾಗೂ ನಟ ಸಿದ್ದಾರ್ಥ್​ ಮಲ್ಹೋತ್ರಾ (Sidharth Malhotra) ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಫೆಬ್ರವರಿ 7ರಂದು ಅವರ ವಿವಾಹ ನೆರವೇರಿತು. ರಾಜಸ್ಥಾನದ ಜೈಸಲ್ಮೇರ್​ ಬಳಿಯ ಸೂರ್ಯಗಡ ಪ್ಯಾಲೇಸ್​ನಲ್ಲಿ ಅದ್ದೂರಿಯಾಗಿ ಮದುವೆ (Kiara Advani Sidharth Malhotra wedding) ನಡೆದಿದೆ. ಬಾಲಿವುಡ್​ನ ಕೆಲವೇ ಮಂದಿಗೆ ಮಾತ್ರ ವಿವಾಹವನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಮದುವೆ ಕಾರ್ಯಗಳು ಪೂರ್ಣಗೊಂಡ ಬಳಿಕ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಮುಂಬೈಗೆ ಹೊರಟಿದ್ದಾರೆ. ಈ ವೇಳೆ ಅವರು ಜೈಸಲ್ಮೇರ್ ​ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಮದುವೆ ನಂತರ ಮೊದಲ ಬಾರಿಗೆ ಜೋಡಿಯಾಗಿ ಬಂದ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು ಮುಗಿಬಿದ್ದರು.

ಕರಣ್​ ಜೋಹರ್​, ಶಾಹಿದ್​ ಕಪೂರ್​, ಮೀರಾ ರಜಪೂತ್​ ಸೇರಿದಂತೆ ಕೆಲವೇ ಕೆಲವು ಮಂದಿ ಮಾತ್ರ ಈ ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು. ತುಂಬ ಖಾಸಗಿಯಾಗಿ ಮದುವೆ ನಡೆದಿದೆ. ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರು ತಮ್ಮ ಲವ್​ ಸ್ಟೋರಿ ಮತ್ತು ಮದುವೆ ಕುರಿತಂತೆ ಇನ್ನೂ ಬಹಿರಂಗವಾಗಿ ಏನನ್ನೂ ಮಾತನಾಡಿಲ್ಲ. ಅವರ ಮಾತುಗಳಿಗಾಗಿ ಎಲ್ಲರೂ ಕಾದಿದ್ದಾರೆ.

ಇದನ್ನೂ ಓದಿ
Image
ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
Image
ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Image
Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ಇದನ್ನೂ ಓದಿ: ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ವಿವಾಹದ ಕ್ಷಣದ ಫೋಟೋ ವೈರಲ್

‘ಶೇರ್ಷಾ’ ಸಿನಿಮಾದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಜೋಡಿಯಾಗಿ ನಟಿಸಿದ್ದರು. ಇಬ್ಬರ ಕೆಮಿಸ್ಟ್ರಿ ಕಂಡು ಜನರು ಇಷ್ಟಪಟ್ಟರು. ರಿಯಲ್​ ಲೈಫ್​ನಲ್ಲಿಯೂ ಅವರು ಜೋಡಿ ಆಗಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇನ್ನೂ ಅನೇಕ ಸಿನಿಮಾಗಳಲ್ಲಿ ಇವರಿಬ್ಬರು ಜೊತೆಯಾಗಿ ನಟಿಸಲು ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

ಇದನ್ನೂ ಓದಿ: ಸಿದ್ದಾರ್ಥ್​ ಮಲ್ಹೋತ್ರ-ಕಿಯಾರಾ ಅಡ್ವಾಣಿ ಮಧ್ಯೆ ಇರೋ ವಯಸ್ಸಿನ ಅಂತರ ಇಷ್ಟೊಂದಾ?

ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ‘ಶೇರ್ಷಾ’ ಚಿತ್ರದಲ್ಲಿ ಅಭಿನಯಿಸುವಾಗ ಅವರಿಬ್ಬರ ನಡುವೆ ಆತ್ಮೀಯತೆ ಹೆಚ್ಚಿತು. ನಂತರ ಅವರು ಡೇಟಿಂಗ್​ ಮಾಡಲು ಆರಂಭಿಸಿದರು. ಅವರ ಬಗ್ಗೆ ಅನೇಕ ಗಾಸಿಪ್​ಗಳು ಹಬ್ಬಿದ್ದರೂ ಕೂಡ ಅದಕ್ಕೆ ಈ ಪ್ರೇಮಪಕ್ಷಿಗಳು ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಲಿಲ್ಲ. ತಮ್ಮ ಪಾಡಿಗೆ ತಾವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಮಧ್ಯೆ ಒಂದಷ್ಟು ದಿನ ಇವರ ನಡುವೆ ಬ್ರೇಕಪ್​ ಆಗಿದೆ ಎಂದು ಕೂಡ ಸುದ್ದಿ ಹಬ್ಬಿಸಲಾಗಿತ್ತು. ಆಗಲೂ ಅವರು ಕೂಲ್​ ಆಗಿದ್ದರು. ಈಗ ಮದುವೆ ಆಗುವ ಮೂಲಕ ಎಲ್ಲರಿಗೂ ಸರ್ಪ್ರೈಸ್​ ನೀಡಿದ್ದಾರೆ.

ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಮದುವೆಯ ಫೋಟೋಗಳು ವೈರಲ್​ ಆಗಿವೆ. ಚಿತ್ರರಂಗದ ಸ್ನೇಹಿತರಿಗಾಗಿ ಮುಂಬೈನಲ್ಲಿ ಈ ಜೋಡಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:26 pm, Wed, 8 February 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ