AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ನಟಿ ಕಿಯಾರಾ ಅಡ್ವಾಣಿ ಮನೆಗೆ ಬಂದಳು ಮಹಾಲಕ್ಷ್ಮೀ; ದಂಪತಿಯಿಂದ ಗುಡ್ ನ್ಯೂಸ್

Kiara Advani: ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ದಂಪತಿಗಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 2023ರ ಫೆಬ್ರುವರಿಯಲ್ಲಿ ವಿವಾಹವಾದ ಈ ಜೋಡಿಗೆ ಇದು ಮೊದಲ ಮಗು. ಕಿಯಾರಾ ಅವರು ತಾವು ಪ್ರೆಗ್ನೆಂಟ್ ಎಂಬುದನ್ನ 2025ರ ಫೆಬ್ರುವರಿಯಲ್ಲಿ ಘೋಷಿಸಿದ್ದರು. ಬಾಲಿವುಡ್‌ನಲ್ಲಿ ಹಾಗೂ ಅಭಿಮಾನಿಗಳಲ್ಲಿ ಈ ಸುದ್ದಿ ಸಂತೋಷದ ಅಲೆಯನ್ನು ಸೃಷ್ಟಿಸಿದೆ.

‘ಟಾಕ್ಸಿಕ್’ ನಟಿ ಕಿಯಾರಾ ಅಡ್ವಾಣಿ ಮನೆಗೆ ಬಂದಳು ಮಹಾಲಕ್ಷ್ಮೀ; ದಂಪತಿಯಿಂದ ಗುಡ್ ನ್ಯೂಸ್
ಕಿಯಾರಾ-ಸಿದ್ದಾರ್ಥ್
ರಾಜೇಶ್ ದುಗ್ಗುಮನೆ
|

Updated on: Jul 16, 2025 | 7:21 AM

Share

ನಟಿ ಕಿಯಾರಾ ಅಡ್ವಾಣಿ (Kiara Advani) ಹಾಗೂ ಪತಿ ಸಿದ್ದಾರ್ಥ್ ಮಲ್ಹೋತ್ರಾ ಮನೆಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಈ ದಂಪತಿ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ. 2023ರ ಫೆಬ್ರವರಿ ತಿಂಗಳಲ್ಲಿ ಇವರು ವಿವಾಹ ಆಗಿದ್ದರು. ಮದುವೆಯಾದ ಸುಮಾರು ಎರಡೂವರೆ ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದಾರೆ. ಅನೇಕರು ‘ಬಾಲಿವುಡ್​ಗೆ ಹೊಸ ನಟಿ ಸಿಕ್ಕಳು’ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಅವರದ್ದು ಲವ್ ಮ್ಯಾರೇಜ್. ಇವರು ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಇಬ್ಬರಿಗೂ ಚಿತ್ರರಂಗದಲ್ಲಿ ಬೇಡಿಕೆ ಇದೆ. ಕಿಯಾರಾ ಅವರು ಕನ್ನಡದ ‘ಟಾಕ್ಸಿಕ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​ ದಾಸ್ ನಿರ್ದೇಶನ ಇದೆ. ಅವರು ಈ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಪ್ರೆಗ್ನೆನ್ಸಿಗೆ ಪ್ಲ್ಯಾನ್ ಮಾಡಿದ್ದರು. ಅವರು ತಮ್ಮ ಭಾಗದ ಶೂಟ್​ನ ಮುಗಿಸಿಕೊಟ್ಟಿದ್ದಾರೆ.

ಕಿಯಾರಾ ಅವರು 2025ರ ಫೆಬ್ರವರಿಯಲ್ಲಿ ತಾವು ಪ್ರೆಗ್ನೆಂಟ್ ಎಂಬ ವಿಚಾರ ಘೋಷಿಸಿದ್ದರು. ಈಗ ಕಿಯಾರಾಗೆ ಹೆಣ್ಣು ಮಗು ಜನಿಸಿದೆ. ಅವರಿಗೆ ಇಡೀ ಬಾಲಿವುಡ್ ಚಿತ್ರರಂಗ ಹಾಗೂ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ
Image
ಬರಲಿದೆ ‘ಪ್ಯಾಟೆ ಹುಡುಗೀರ್ ಹಳ್ಳಿ ಲೈಫು’; ಇಲ್ಲಿದೆ ಆಡಿಷನ್ ವಿವರ
Image
ಮುಂದಿನ ಮೂರು ವರ್ಷ ರಜನಿಕಾಂತ್ ಬ್ಯುಸಿ; ಮತ್ತೆ ಮೂರು ಸಿನಿಮಾ ಫೈನಲ್
Image
ಪಾತ್ರ ಕೊಡದ್ದಕ್ಕೆ ಸಿಟ್ಟು; ಯಶಸ್ಸು ಕೊಟ್ಟ ಬನ್ಸಾಲಿ ಮರೆತ ರಣವೀರ್ ಸಿಂಗ್
Image
ರಶ್ಮಿಕಾ ಸಿನಿಮಾ ಪ್ರಚಾರಕ್ಕೆ ಸಹಾಯ ಮಾಡಲಿದ್ದಾರೆ ಜೂ.ಎನ್​ಟಿಆರ್​-ಹೃತಿಕ್

ಕಿಯಾರಾ ಅಡ್ವಾಣಿ ಅವರಿಗೆ ಚಿತ್ರರಂಗದಲ್ಲಿ ಈಗಲೂ ಬೇಡಿಕೆ ಇದೆ. ಸದ್ಯ ಅವರು ಮಗು ಜನಿಸಿದ ಬಳಿಕ ಒಂದು ಗ್ಯಾಪ್ ಪಡೆಯಲಿದ್ದಾರೆ. ಜೂನಿಯರ್ ಎನ್​ಟಿಆರ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್ 2’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರ ಆಗಸ್ಟ್​ 14ರಂದು ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ:  ಬೇಬಿ ಬಂಪ್​ನೊಂದಿಗೆ ಮೆಟ್​ ಗಾಲಾ ರೆಡ್ ಕಾರ್ಪೆಟ್​ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ

ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದಲ್ಲೂ ಕಿಯಾರಾ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಆಗಿಲ್ಲ. ಅವರು ಪ್ರೆಗ್ನೆಂಟ್ ಎಂಬ ವಿಚಾರ ತಿಳಿದ ಬಳಿಕ ಯಶ್ ಅವರು ಬೆಂಗಳೂರಿನಲ್ಲಿದ್ದ ಶೂಟ್​ನ ಮುಂಬೈಗೆ ಸ್ಥಳಾಂತರಿಸಿದ್ದರು ಎಂದು ಈ ಮೊದಲು ವರದಿ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು