AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವು ನಟಿಸಿದ ಸಿನಿಮಾದ ಕ್ಲೈಮ್ಯಾಕ್ಸ್​ ನೋಡಿ ವಿಮಾನದಲ್ಲೇ ಅತ್ತ ಕಿಯಾರಾ ಅಡ್ವಾಣಿ

ಕಿಯಾರಾ ವಿಮಾನದಲ್ಲಿ ಸಾಗುವಾಗ ‘ಶೇರ್​ಷಾ’ ಸಿನಿಮಾ ನೋಡಿದ್ದಾರೆ ಎನ್ನಲಾಗಿದೆ. ವಿಡಿಯೋ ನೋಡುತ್ತಿದ್ದಂತೆ ಅವರು ಕಣ್ಣು ಒದ್ದೆಯಾಗಿದೆ.

ತಾವು ನಟಿಸಿದ ಸಿನಿಮಾದ ಕ್ಲೈಮ್ಯಾಕ್ಸ್​ ನೋಡಿ ವಿಮಾನದಲ್ಲೇ ಅತ್ತ ಕಿಯಾರಾ ಅಡ್ವಾಣಿ
ತಾವು ನಟಿಸಿದ ಸಿನಿಮಾದ ಕ್ಲೈಮ್ಯಾಕ್ಸ್​ ನೋಡಿ ವಿಮಾನದಲ್ಲೇ ಅತ್ತ ಕಿಯಾರಾ ಅಡ್ವಾಣಿ
TV9 Web
| Edited By: |

Updated on: Aug 20, 2021 | 7:17 PM

Share

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ಧಾರ್ಥ್​ ಮಲ್ಹೋತ್ರಾ ನಟನೆಯ ‘ಶೇರ್​ಷಾ’ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದೇಶಭಕ್ತಿ ಪ್ರಧಾನವುಳ್ಳ ಈ ಚಿತ್ರ ಆಗಸ್ಟ್ 12ರಂದು  ಅಮೇಜಾನ್​ ಪ್ರೈಮ್​ನಲ್ಲಿ ರಿಲೀಸ್​ ಆಗಿದೆ. ಈ ಸಿನಿಮಾ ಕ್ಲೈಮ್ಯಾಕ್​ ನೋಡಿ ಚಿತ್ರದ ನಾಯಕಿ ಕಿಯಾರಾ ಅತ್ತಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ಕ್ಯಾಪ್ಟನ್ ವಿಕ್ರಮ್ ಬತ್ರಾ ಜೀವನ ಆಧರಿಸಿ ‘ಶೇರ್​ಷಾ’ ಸಿದ್ಧಗೊಂಡಿದೆ. ಇದು ನೈಜ ಘಟನೆ ಆಧರಿಸಿ ಸಿದ್ಧಗೊಂಡಿರುವ ಸಿನಿಮಾ. ಹೀಗಾಗಿ, ನಿರ್ದೇಶಕರು ಸಾಕಷ್ಟು ಶ್ರಮವಹಿಸಿ ಸಿನಿಮಾ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರಿಗೆ ಕಣ್ಣಲ್ಲಿ ನೀರು ಬಂದಿದೆ. ಇದಕ್ಕೆ ಕಿಯಾರಾ ಕೂಡ ಹೊರತಾಗಿಲ್ಲ.

ಕಿಯಾರಾ ವಿಮಾನದಲ್ಲಿ ಸಾಗುವಾಗ ‘ಶೇರ್​ಷಾ’ ಸಿನಿಮಾ ನೋಡಿದ್ದಾರೆ ಎನ್ನಲಾಗಿದೆ. ವಿಡಿಯೋ ನೋಡುತ್ತಿದ್ದಂತೆಯೇ ಅವರ ಕಣ್ಣು ಒದ್ದೆಯಾಗಿದೆ. ಇದನ್ನು ಕಿಯಾರಾ ಫ್ಯಾನ್​ಪೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿವೆ.

ಡಿಂಪಲ್​ ಚೀಮಾ ಪಾತ್ರವನ್ನು ಕಿಯಾರಾ ಮಾಡಿದ್ದಾರೆ. ಕ್ಯಾಪ್ಟನ್​ ವಿಕ್ರಮ್​ ಅವರನ್ನು ಪ್ರೀತಿಸುವ ಡಿಂಪಲ್ ನಂತರ ಅವರನ್ನೇ ವರಿಸಬೇಕು ಎನ್ನುವ ಕನಸ ಕಂಡಿರುತ್ತಾರೆ. ಆದರೆ, ಅದು ಸಾಧ್ಯವಾಗುವುದೇ ಇಲ್ಲ. ಇಂದಿಗೂ ಡಿಂಪಲ್​ ಮದುವೆ ಆಗದೆ ಉಳಿದುಕೊಂಡಿದ್ದಾರೆ ಅನ್ನೋದು ವಿಶೇಷ. ಸದ್ಯ ಡಿಂಪಲ್​ ಚಂಡೀಗಢದ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.

ಕಿಯಾರಾ ಅಡ್ವಾಣಿ ಹಾಗೂ ಸಿದ್ಧಾರ್ಥ್​ ಮಲ್ಹೋತ್ರಾ ರಿಲೇಶನ್​ಶಿಪ್​ನಲ್ಲಿದ್ದಾರೆ ಎನ್ನುವ ಗುಸುಗುಸು ಬಾಲಿವುಡ್​ ಅಂಗಳದಲ್ಲಿ ಹರಿದಾಡಿತ್ತು. ಈ ವದಂತಿಯನ್ನು ನಂಬುವ ರೀತಿಯಲ್ಲಿ ಸಾಕಷ್ಟು ಘಟನೆಗಳು ನಡೆದವು. ಹೀಗಾಗಿ, ಅಭಿಮಾನಿಗಳು ಇಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ಭಾವಿಸಿದ್ದರು. ಇದಕ್ಕೆ ಕಿಯಾರಾ ಇತ್ತೀಚೆಗೆ ಸ್ಪಷ್ಟನೆ ನೀಡಿದ್ದರು. ಸಂದರ್ಶನವೊಂದರಲ್ಲಿ ಅವರಿಗೆ ಈ ವಿಚಾರದ ಬಗ್ಗೆ ಮತ್ತೆ ಪ್ರಶ್ನಿಸಲಾಯಿತು. ಇದಕ್ಕೆ ಕಿಯಾರಾ ಉತ್ತರ ನೀಡಿದ್ದಾರೆ. ನಾವಿಬ್ಬರೂ ಉತ್ತಮ ಗೆಳೆಯರಷ್ಟೇ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಸಿದ್ಧಾರ್ಥ್​ ಮಲ್ಹೋತ್ರಾ ಜತೆ ಲವ್ವಿಡವ್ವಿ? ಎಲ್ಲವನ್ನೂ ಹೇಳಿಕೊಂಡ ನಟಿ ಕಿಯಾರಾ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ