AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಆಗುತ್ತಿರುವ ‘ಟಾಕ್ಸಿಕ್’ ನಟಿ ಕಿಯಾರಾ ಅಡ್ವಾಣಿ; ಶುಭ ಶುಕ್ರವಾರ ಗುಡ್ ನ್ಯೂಸ್

ನಟಿ ಕಿಯಾರಾ ಅಡ್ವಾಣಿ ಅವರು ಪ್ರೆಗ್ನೆಂಟ್ ಆಗಿದ್ದಾರೆ. ತಾಯಿ ಆಗುತ್ತಿರುವ ವಿಷಯವನ್ನು ಖುಷಿಯಿಂದ ಪೋಸ್ಟ್ ಮಾಡಿದ್ದಾರೆ. ಈ ಸುದ್ದಿ ತಿಳಿದು ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ದಂಪತಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ‘ಟಾಕ್ಸಿಕ್’, ‘ಡಾನ್ 3’ ಮುಂತಾದ ಸಿನಿಮಾಗಳಲ್ಲಿ ಕಿಯಾರಾ ಅಡ್ವಾನಿ ಅವರು ನಟಿಸುತ್ತಿದ್ದಾರೆ.

ತಾಯಿ ಆಗುತ್ತಿರುವ ‘ಟಾಕ್ಸಿಕ್’ ನಟಿ ಕಿಯಾರಾ ಅಡ್ವಾಣಿ; ಶುಭ ಶುಕ್ರವಾರ ಗುಡ್ ನ್ಯೂಸ್
Kiara Advani
ಮದನ್​ ಕುಮಾರ್​
|

Updated on: Feb 28, 2025 | 3:23 PM

Share

ಪ್ರಖ್ಯಾತ ನಟಿ ಕಿಯಾರಾ ಅಡ್ವಾನಿ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶುಕ್ರವಾರ (ಫೆಬ್ರವರಿ 28) ಅವರು ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ದಂಪತಿ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಸೋಶಿಯ್ ಮೀಡಿಯಾದಲ್ಲಿ ಪುಟ್ಟ ಮಗುವಿನ ಸಾಕ್ಸ್ ಫೋಟೋ ಪೋಸ್ಟ್ ಮಾಡುವ ಮೂಲಕ ಈ ದಂಪತಿ ಶುಭ ಸಮಾಚಾರ ತಿಳಿಸಿದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಪರಸ್ಪರ ಪ್ರೀತಿಸಿ ಮದುವೆ ಆದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಬದುಕಿನಲ್ಲಿ ಈಗ ಹೊಸ ಅಧ್ಯಾಯ ಆರಂಭ ಆಗುತ್ತಿದೆ.

‘ನಮ್ಮ ಬದುಕಿನ ಅತಿ ಶ್ರೇಷ್ಠವಾದ ಉಡುಗೊರೆ ಶೀಘ್ರದಲ್ಲೇ ಸಿಗಲಿದೆ’ ಎಂದು ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಕಮೆಂಟ್ ಬಾಕ್ಸ್ ನಲ್ಲಿ ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್, ರಾಶಿ ಖನ್ನಾ, ಏಕ್ತಾ ಕಪೂರ್, ಮನೀಶ್ ಮಲ್ಹೋತ್ರಾ, ಮನೀಶ್ ಪೌಲ್, ಸೋನಾಕ್ಷಿ ಸಿನ್ಹಾ ಮುಂತಾದವರು ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ
Image
ಈ ಫೋಟೋದಲ್ಲಿರುವ ಸ್ಟಾರ್ ನಟಿ ಯಾರು? ಯಶ್ ಜೊತೆ ನಟಿಸುತ್ತಿದ್ದಾರೆ
Image
ಬಿಕಿನಿಯಲ್ಲಿ ಸಮುದ್ರಕ್ಕೆ ಜಿಗಿದು ಬರ್ತ್​ಡೇ ಆಚರಿಸಿಕೊಂಡ ನಟಿ ಕಿಯಾರಾ ಅಡ್ವಾಣಿ
Image
ಫೋಟೋದಲ್ಲಿರುವ ಈ ಸ್ಟಾರ್ ನಟಿ ಯಾರೆಂದು ಗುರುತಿಸುತ್ತೀರಾ?
View this post on Instagram

A post shared by KIARA (@kiaraaliaadvani)

2023ರ ಫೆಬ್ರವರಿ 7ರಂದು ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ಅವರು ಮದುವೆ ಆಗಿದ್ದರು. ಜೈಸಲ್ಮರ್ ಸೂರ್ಯಗಡ್ ಕೋಟೆಯಲ್ಲಿ ಅವರ ವಿವಾಹ ನೆರವೇರಿತ್ತು. ಕೇವಲ ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಹಸೆಮಣೆ ಏರಿದ್ದರು. ಬಳಿಕ ಮುಂಬೈನಲ್ಲಿ ಆರತಕ್ಷತೆ ಕಾರ್ಯಕ್ರಮ ಏರ್ಪಡಿಸಿದ್ದರು. ಈಗ ಕಿಯಾರಾ ಪ್ರೆಗ್ನೆಂಟ್ ಆಗಿದ್ದಾರೆ.

ಚಿತ್ರರಂಗದಲ್ಲಿ ಕಿಯಾರಾ ಅಡ್ವಾಣಿ ಅವರಿಗೆ ಸಖತ್ ಬೇಡಿಕೆ ಇದೆ. ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಅವರು ನಟಿಸಿ ಫೇಮಸ್ ಆಗಿದ್ದಾರೆ. ಹಲವು ಹಿಟ್ ಸಿನಿಮಾಗಳು ಅವರ ಖಾತೆಯಲ್ಲಿವೆ. ಈಗ ಯಶ್ ಜೊತೆ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆ ಮನೆ ಮಾಡಿದೆ.

ಇದನ್ನೂ ಓದಿ: ಕಿಯಾರಾ ಅಡ್ವಾಣಿ ಮೂಲ ಹೆಸರೇನು? ಸಲ್ಲು ಸೂಚನೆಯಿಂದ ಹೆಸರು ಬದಲಿಸಿಕೊಂಡಿದ್ದ ನಟಿ

ಪ್ರೆಗ್ನೆಂಟ್ ಆದ್ದರಿಂದ ಕಿಯಾರಾ ಅಡ್ವಾಣಿ ಅವರು ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಲಿದ್ದಾರೆ. ‘ಡಾನ್ 3’ ಸಿನಿಮಾ ಕೂಡ ಕಿಯಾರಾ ಅಡ್ವಾಣಿ ಕೈಯಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!