ಬಿಕಿನಿಯಲ್ಲಿ ಸಮುದ್ರಕ್ಕೆ ಜಿಗಿದು ಬರ್ತ್​ಡೇ ಆಚರಿಸಿಕೊಂಡ ನಟಿ ಕಿಯಾರಾ ಅಡ್ವಾಣಿ

Kiara Advani Birthday: ಬಿಕಿನಿ ಧರಿಸಿ ಕಿಯಾರಾ ಸಮುದ್ರಕ್ಕೆ ಜಿಗಿದಿದ್ದಾರೆ. ಸಿದ್ದಾರ್ಥ್  ಕೂಡ ಜೊತೆಗಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಬಿಕಿನಿಯಲ್ಲಿ ಸಮುದ್ರಕ್ಕೆ ಜಿಗಿದು ಬರ್ತ್​ಡೇ ಆಚರಿಸಿಕೊಂಡ ನಟಿ ಕಿಯಾರಾ ಅಡ್ವಾಣಿ
ಕಿಯಾರಾ-ಸಿದ್ದಾರ್ಥ್​
Follow us
ರಾಜೇಶ್ ದುಗ್ಗುಮನೆ
|

Updated on:Aug 01, 2023 | 7:46 AM

ನಟಿ ಕಿಯಾರಾ ಅಡ್ವಾಣಿ (Kiara Advani) ಅವರು ಜುಲೈ 31ರಂದು ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬಂದಿದೆ. ಮದುವೆ ಆದ ಬಳಿಕ ಸಿದ್ದಾರ್ಥ್ ಮಲ್ಹೋತ್ರಾ (Sidharth Malhotra) ಜೊತೆ ಅವರು ಆಚರಿಸಿಕೊಳ್ಳುತ್ತಿರುವ ಮೊದಲ ಬರ್ತ್​ಡೇ ಇದು. ಈ ಕಾರಣಕ್ಕೆ ಕಿಯಾರಾ ಅಡ್ವಾಣಿ ಅವರಿಗೆ ಈ ಬರ್ತ್​​ಡೇ ಸಾಕಷ್ಟು ವಿಶೇಷ ಎನಿಸಿಕೊಂಡಿದೆ. ಹೀಗಾಗಿ ಈ ದಂಪತಿ ವಿದೇಶಕ್ಕೆ ತೆರಳಿದ್ದಾರೆ. ಬಿಕಿನಿ ಧರಿಸಿ ಕಿಯಾರಾ ಸಮುದ್ರಕ್ಕೆ ಜಿಗಿದಿದ್ದಾರೆ. ಸಿದ್ದಾರ್ಥ್  ಕೂಡ ಜೊತೆಗಿದ್ದಾರೆ. ಈ ವಿಡಿಯೋನ ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡರು. ಈ ವೇಳೆ ಇವರ ಮಧ್ಯೆ ಪ್ರೀತಿ ಮೂಡಿತು ಎನ್ನಲಾಗಿದೆ. ನಂತರ ಇಬ್ಬರೂ ಹಲವು ವರ್ಷ ಡೇಟಿಂಗ್ ಮಾಡಿದರು. ಇಬ್ಬರ ಪ್ರೀತಿ ಮುರಿದು ಬಿದ್ದಿದೆ ಎಂಬ ಸುದ್ದಿಯೂ ಹರಿದಾಡಿತು. ಆದರೆ, ಆ ರೀತಿ ಆಗಿಲ್ಲ. ಇಬ್ಬರೂ ಅದ್ದೂರಿಯಾಗಿ ರಾಜಸ್ಥಾನದಲ್ಲಿ ಈ ವರ್ಷ ಮದುವೆ ಆದರು. ಪತಿಯ ಜೊತೆ ಮೊದಲ ಬರ್ತ್​ಡೇನ ಕಿಯಾರಾ ಭರ್ಜರಿಯಾಗಿ ಆಚರಿಸಿಕೊಂಡಿದ್ದಾರೆ.

ಬೋಟ್​ನ ಡೆಕ್​ ಮೇಲೆ ಕಿಯಾರಾ ಹಾಗೂ ಸಿದ್ದಾರ್ಥ್ ನಿಂತಿದ್ದಾರೆ. ಅಲ್ಲಿಂದ ಅವರು ಸಮುದ್ರಕ್ಕೆ ಹಾರಿದ್ದಾರೆ. ಈ ವೇಳೆ ಕಿಯಾರಾ ಬಿಕಿನಿ ಧರಿಸಿದ್ದರು. ಈ ವಿಡಿಯೋ ಕಮೆಂಟ್ ಬಾಕ್ಸ್​​ನಲ್ಲಿ ಶ್ರದ್ಧಾ ಕಪೂರ್, ಶಿಲ್ಪಾ ಶೆಟ್ಟಿ, ರಕುಲ್ ಪ್ರೀತ್ ಸಿಂಗ್ ಸೇರಿ ಅನೇಕ ಸೆಲೆಬ್ರಿಟಿಗಳು ಕಿಯಾರಾಗೆ ಬರ್ತ್​ಡೇ ವಿಶ್ ಮಾಡಿದ್ದಾರೆ. ಈ ವಿಡಿಯೋ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಕಿಯಾರಾ ಧರಿಸಿದ ಬಿಕಿನಿ ಬಗ್ಗೆ ಅನೇಕರು ಟೀಕೆ ಮಾಡಿದ್ದಾರೆ.

View this post on Instagram

A post shared by KIARA (@kiaraaliaadvani)

ಇದನ್ನೂ ಓದಿ: ಬದಲಾಗಿ ಹೋಯಿತು ಕಿಯಾರಾ ಅಡ್ವಾಣಿ ವೃತ್ತಿ ಬದುಕು; ದಕ್ಷಿಣದ ಸ್ಟಾರ್​ ಹೀರೋಗೆ ನಾಯಕಿ

2021ರ ಈಚೆಗೆ ಕಿಯಾರಾ ಬ್ಯಾಕ್ ಟು ಬ್ಯಾಕ್ ಗೆಲುವು ಕಾಣುತ್ತಿದ್ದಾರೆ. 2021ರಲ್ಲಿ ಬಂದ ‘ಶೇರ್ಷಾ’ ಸಿನಿಮಾ ಸೂಪರ್ ಹಿಟ್ ಆಯಿತು. ‘ಭೂಲ್​ ಭುಲಯ್ಯ 2’, ‘ಜುಗ್​ಜುಗ್​ ಜಿಯೋ’, ‘ಸತ್ಯ ಪ್ರೇಮ್​ ಕಿ ಕಥಾ’ ಸಿನಿಮಾಗಳು ಯಶಸ್ಸು ಕಂಡವು. ರಾಮ್​ ಚರಣ್ ನಟನೆಯ ‘ಗೇಮ್​ ಚೇಂಜರ್’ ಚಿತ್ರಕ್ಕೆ ಕಿಯಾರಾ ನಾಯಕಿ. ಈ ಚಿತ್ರಕ್ಕೆ ಶಂಕರ್ ನಿರ್ದೇಶನ ಇದೆ. ‘ಯೋಧ’ ಸಿನಿಮಾ ಕೆಲಸಗಳಲ್ಲಿ ಸಿದ್ದಾರ್ಥ್ ತೊಡಗಿಕೊಂಡಿದ್ದಾರೆ. ‘ಶೇರ್ಷಾ’ ಬಳಿಕ ಮತ್ತೊಮ್ಮೆ ಅವರು ಸೈನಿಕನ ಗೆಟಪ್​​ನಲ್ಲಿ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:10 am, Tue, 1 August 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್