AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ಬಳಿಕ ಬಾಲಿವುಡ್ ನಟನ ಮನೆಗೂ ಬಂತು ಈ ಐಷಾರಾಮಿ ಕಾರು

ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ದಂಪತಿ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ಈಗ ಅವರು ಹೊಸ ಕಾರು ಖರೀದಿಸಿದ್ದಾರೆ. 1.22 ಕೋಟಿ ರೂಪಾಯಿ ಬೆಲೆ ಬಾಳುವ ಟೊಯೋಟಾ ವೆಲ್​ಫೈರ್ ಕಾರು ಅವರ ಮನೆಗೆ ಬಂದಿದೆ. ಸಖತ್ ಬ್ಯಸಿ ಆಗಿರುವ ಅವರಿಬ್ಬರು ಪ್ರತಿ ಸಿನಿಮಾಗೆ ಕೈ ತುಂಬ ಸಂಭಾವನೆ ಪಡೆಯುತ್ತಾರೆ.

ರಿಷಬ್ ಶೆಟ್ಟಿ ಬಳಿಕ ಬಾಲಿವುಡ್ ನಟನ ಮನೆಗೂ ಬಂತು ಈ ಐಷಾರಾಮಿ ಕಾರು
Kiara Advani, Sidharth Malhotra, Toyota Vellfire
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on:Apr 25, 2025 | 5:34 PM

Share

ನಟ ರಿಷಬ್ ಶೆಟ್ಟಿ ಅವರು ಕೆಲವೇ ದಿನಗಳ ಹಿಂದೆ ಟೊಯೋಟಾ ವೆಲ್​ಫೈರ್ (Toyota Vellfire) ಕಾರು ಖರೀದಿಸಿದ್ದರು. ಪತ್ನಿ ಮತ್ತು ಮಕ್ಕಳ ಜೊತೆ ಕಾರಿನ ಎದುರು ನಿಂತು ಅವರು ಪೋಸ್ ನೀಡಿದ್ದರು. ಕೋಟ್ಯಂತರ ರೂಪಾಯಿ ಬೆಲೆಬಾಳುವ ಈ ಕಾರಿನ ಬಗ್ಗೆ ಸೆಲೆಬ್ರಿಟಿಗಳಿಗೆ ಕ್ರೇಜ್ ಹೆಚ್ಚುತ್ತಿದೆ. ಸುದೀಪ್ ಮುಂತಾದ ನಟರ ಬಳಿ ಈ ಕಾರು ಇದೆ. ಈಗ ಬಾಲಿವುಡ್​ನ ಖ್ಯಾತ ನಟ ಸಿದ್ದಾರ್ಥ್ ಮಲ್ಹೋತ್ರಾ (Sidharth Malhotra) ಕೂಡ ಟೊಯೋಟಾ ವೆಲ್​ಫೈರ್ ಕಾರು ಖರೀದಿಸಿದ್ದಾರೆ. ಹೊಸ ಕಾರಿನ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗುತ್ತಿವೆ. ಸಿದ್ದಾರ್ಥ್ ಮತ್ತು ಕಿಯಾರಾ ಅಡ್ವಾಣಿ (Kiara Advani) ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಬಾಲಿವುಡ್​ನಲ್ಲಿ ಸಿದ್ದಾರ್ಥ್ ಮಲ್ಹೋತ್ರಾ ಅವರು ಸ್ಟಾರ್ ನಟನಾಗಿ ಮಿಂಚುತ್ತಿದ್ದಾರೆ. ಅವರ ಪತ್ನಿ ಕಿಯಾರಾ ಅಡ್ವಾಣಿ ಕೂಡ ಸಖತ್ ಬೇಡಿಕೆ ಹೊಂದಿದ್ದಾರೆ. ಈಗ ಕಿಯಾರಾ ಅವರು ತುಂಬು ಗರ್ಭಿಣಿ. ಹಾಗಾಗಿ ಸಿನಿಮಾ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ. ಪತ್ನಿಗಾಗಿ ಸಿದ್ದಾರ್ಥ್ ಮಲ್ಹೋತ್ರಾ ಅವರು ಟೊಯೋಟಾ ವೆಲ್ಫ್​ಫೈರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಸುದ್ದಿ ಆಗಿದೆ.

ಇದನ್ನೂ ಓದಿ
Image
ಟಾಕ್ಸಿಕ್ ಶೂಟಿಂಗ್ ನಡೆಯುವಾಗಲೇ ಪ್ರೆಗ್ನೆನ್ಸಿ ಘೋಷಿಸಿದ ಕಿಯಾರಾ; ಮುಂದೇನು?
Image
ತಾಯಿ ಆಗುತ್ತಿರುವ ‘ಟಾಕ್ಸಿಕ್’ ನಟಿ ಕಿಯಾರಾ ಅಡ್ವಾಣಿ; ಸಿಕ್ತು ಗುಡ್ ನ್ಯೂಸ್
Image
ಈ ಫೋಟೋದಲ್ಲಿರುವ ಸ್ಟಾರ್ ನಟಿ ಯಾರು? ಯಶ್ ಜೊತೆ ನಟಿಸುತ್ತಿದ್ದಾರೆ
Image
ಮದುವೆಯಲ್ಲಿ ಲೆಹೆಂಗಾ ತೊಟ್ಟ ಕಿಯಾರಾ ಅಡ್ವಾಣಿ ಎಷ್ಟೊಂದು ಕ್ಯೂಟ್​; ಇಲ್ಲಿವೆ ಫೋಟೋಸ್

ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಖರೀದಿಸಿರುವ ಟೊಯೋಟಾ ವೆಲ್​ಫೈರ್ ಕಾರಿನ ಬೆಲೆ 1.22 ಕೋಟಿ ರೂಪಾಯಿ. ಅಕ್ಷಯ್ ಕುಮಾರ್, ಅಜಯ್ ದೇವಗನ್, ಆಮಿರ್ ಖಾನ್, ಅನಿಲ್ ಕಪೂರ್, ಐಶ್ವರ್ಯಾ ರೈ ಬಚ್ಚನ್, ಕೃತಿ ಸನನ್, ಮೋಹನ್​ಲಾಲ್, ಫಹಾದ್ ಫಾಸಿಲ್ ಮುಂತಾದ ಸೆಲೆಬ್ರಿಟಿಗಳು ಕೂಡ ಟೊಯೋಟಾ ವೆಲ್​ಫೈರ್ ಕಾರು ಹೊಂದಿದ್ದಾರೆ.

ಸದ್ಯದಲ್ಲೇ ಕಿಯಾರಾ ಅಡ್ವಾಣಿ ಅವರು ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ನಡುವೆ ಸಿದ್ದಾರ್ಥ್ ಮತ್ತು ಕಿಯಾರಾ ಅವರು ಹೊಸ ಮನೆ ಹುಡುಕುತ್ತಿದ್ದಾರೆ ಕೂಡ. ಮಗು ಜನಿಸುವುದಕ್ಕೂ ಮುನ್ನವೇ ಅವರು ಬೇರೆ ಮನೆಗೆ ಶಿಫ್ಟ್ ಆಗುವ ಸಾಧ್ಯತೆ ಇದೆ. ಕನ್ನಡದ ‘ಟಾಕ್ಸಿಕ್’ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ಅವರು ನಟಿಸುತ್ತಿದ್ದಾರೆ. ಪ್ರೆಗ್ನೆಂಟ್ ಆದ ಬಳಿಕ ಅವರು ಬ್ರೇಕ್ ಪಡೆದಿದ್ದಾರೆ.

ಇದನ್ನೂ ಓದಿ: ಕಿಯಾರಾ ಜಾಗ ತುಂಬಲು ಬಂದ ಶರ್ವರಿ, ಭಾರಿ ದೊಡ್ಡ ಅವಕಾಶ

‘ವಾರ್ 2’ ಸಿನಿಮಾಗೂ ಕಿಯಾರಾ ಅಡ್ವಾಣಿ ಅವರು ನಾಯಕಿ ಆಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಡಾನ್ 3’ ಸಿನಿಮಾದಲ್ಲಿ ಕೂಡ ಕಿಯಾರಾ ನಟಿಸಬೇಕಿತ್ತು. ಆದರೆ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ಆ ಸಿನಿಮಾದಿಂದ ಹೊರಬಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:33 pm, Fri, 25 April 25

Follow Us
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ