Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಸ್ಟಾರ್ ನಟಿ ಯಾರು? ಯಶ್ ಜೊತೆ ನಟಿಸುತ್ತಿದ್ದಾರೆ

ಕಿಯಾರಾ ಅಡ್ವಾಣಿ ಅವರು ಯಶ್ ಅವರೊಂದಿಗೆ "ಟಾಕ್ಸಿಕ್" ಎಂಬ ಕನ್ನಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್‌ನಲ್ಲಿ ಯಶಸ್ವಿಯಾಗಿದ್ದ ಕಿಯಾರಾ, ತೆಲುಗು ಚಿತ್ರರಂಗದಲ್ಲೂ ಯಶಸ್ಸು ಕಂಡಿದ್ದಾರೆ. "ಭರತ್ ಅನೆ ನೇನು" ಮತ್ತು "ವಿನಯ ವಿಧೇಯ ರಾಮ" ಚಿತ್ರಗಳ ನಂತರ, "ಗೇಮ್ ಚೇಂಜರ್" ಚಿತ್ರದ ಮೂಲಕ ಮತ್ತಷ್ಟು ಜನಪ್ರಿಯರಾಗಿದ್ದಾರೆ. ಈಗ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ ಎಂಬುದು ವಿಶೇಷ.

ಈ ಫೋಟೋದಲ್ಲಿರುವ ಸ್ಟಾರ್ ನಟಿ ಯಾರು? ಯಶ್ ಜೊತೆ ನಟಿಸುತ್ತಿದ್ದಾರೆ
Kiara Advani (1)
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on: Jan 12, 2025 | 12:01 PM

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಾ ಇವೆ. ಸೋಶಿಯಲ್ ಮೀಡಿಯಾ ಬಳಕೆ ಹೆಚ್ಚಿದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಫೋಟೋಗಳ ಸಂಖ್ಯೆ ಕೂಡ ಹೆಚ್ಚಿದೆ. ಈಗ ನಟಿಯೊಬ್ಬರ ಫೋಟೋ ವೈರಲ್ ಆಗಿದೆ. ಅವರು ಆಕಸ್ಮಿಕವಾಗಿ ಸಿನಿಮಾಗೆ ಬಂದರು. ವೃತ್ತಿಬದುಕಿನ ಆರಂಭದಲ್ಲಿ ಸ್ಟಾರ್ ಹೀರೋ ಚಿತ್ರಗಳಲ್ಲಿ ಅವಕಾಶ ಸಿಕ್ಕಿತ್ತು. ಆದರೆ ಸ್ಟಾರ್ ಸ್ಟೇಟಸ್ ಅಷ್ಟು ಬೇಗ ಬರಲಿಲ್ಲ. ಈಗ ಅವರ ಸಿನಿಮಾ ರಿಲೀಸ್ ಆಗಿ ಗಮನ ಸೆಳೆದಿದೆ. ಅವರು ಬೇರಾರೂ ಅಲ್ಲ ಕಿಯಾರಾ ಅಡ್ವಾಣಿ.

ಬಾಲಿವುಡ್ನಲ್ಲಿ ಕಿಯಾರಾ ನಟಿಸಿದ ಬೋಲ್ಡ್ ವೆಬ್ ಸೀರೀಸ್ ಸೂಪರ್ ಹಿಟ್ ಆಯಿತು. ತೆಲುಗಿನಲ್ಲೂ ಸತತ ಅವಕಾಶಗಳು ಬಂದಿವೆ. ಮಹೇಶ್ ಬಾಬು ಮತ್ತು ರಾಮ್ ಚರಣ್ ಅರಂತಹ ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಸಿಕ್ಕಿದೆ. ಆರು ವರ್ಷಗಳ ಹಿಂದೆ ಮೆಗಾ ಪವರ್ ಸ್ಟಾರ್ ಜೊತೆ ನಟಿಸಿದ್ದ ಈ ಮೋಹನಾಂಗಿಗೆ ಮತ್ತೊಮ್ಮೆ ಅವರ ಜೊತೆ ನಟಿಸುವ ಅವಕಾಶ ಸಿಕ್ಕಿದೆ. ‘ಗೇಮ್ ಚೇಂಜರ್’ ನಾಯಕಿ ಕಿಯಾರಾ ಅಡ್ವಾಣಿ ಗಮನ ಸೆಳೆದಿದ್ದಾರೆ. ಸಿನಿಮಾ ಬಿಡುಗಡೆಯಾಗಿ ಬ್ಲಾಕ್ ಬಸ್ಟರ್ ಟಾಕ್ ಆದ ಹಿನ್ನಲೆಯಲ್ಲಿ ಈ ಸುಂದರ ವ್ಯಕ್ತಿಯ ಬಾಲ್ಯದ ಫೋಟೋಗಳು ಮತ್ತು ವಿಡಿಯೋಗಳು ಈಗ ಸದ್ದು ಮಾಡುತ್ತಿವೆ.

ಇದನ್ನೂ ಓದಿ:ಕಿಯಾರಾ ಅಡ್ವಾಣಿ ಕೈಯಲ್ಲಿ ಗೇಮ್ ಚೇಂಜರ್, ಟಾಕ್ಸಿಕ್, ವಾರ್ 2

ಬಾಲಿವುಡ್ನಲ್ಲಿ ಸ್ಟಾರ್ ಹೀರೋಯಿನ್ ಆಗಿ ಹೊರಹೊಮ್ಮುತ್ತಿರುವ ಕಿಯಾರಾ ಅಡ್ವಾಣಿ ಟಾಲಿವುಡ್ಗೆ ಮಹೇಶ್ ಬಾಬು ನಟನೆಯ ‘ಭರತ್ ಅನೆ ನೇನು’ ಚಿತ್ರದ ಮೂಲಕ ಪರಿಚಯವಾಗಿದ್ದರು. ಮೊದಲ ಸಿನಿಮಾದಲ್ಲೇ ಪಕ್ಕದ ಮನೆಯ ಹುಡುಗಿಯಾಗಿ ಫೇಮಸ್ ಆದರು. ಆ ನಂತರ ರಾಮ್ ಚರಣ್ ಜೊತೆ ‘ವಿನಯ ವಿಧೇಯ ರಾಮ’ ಸಿನಿಮಾದಲ್ಲೂ ನಟಿಸಿದ್ದರು. ಚಿತ್ರ ನಿರಾಸೆ ಮೂಡಿಸಿದರೂ ರಾಮ್ ಚರಣ್ ಮತ್ತು ಕಿಯಾರಾ ಜೋಡಿಗೆ ಒಳ್ಳೆಯ ಹೆಸರು ಬಂತು. ‘ಗೇಮ್ ಚೇಂಜರ್’ ಚಿತ್ರದ ಮೂಲಕ ಅವರು ತೆಲುಗು ಪ್ರೇಕ್ಷಕರನ್ನು ಮತ್ತೆ ರಂಜಿಸಿದರು. ಅವರ ನಟನೆಗೆ ಅಂಕ ಸಿಕ್ಕಿದೆ. ಈಗ ಅವರು ಕನ್ನಡದಲ್ಲಿ ‘ಟಾಕ್ಸಿಕ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಯಶ್ ಹೀರೋ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು