AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ಬೆನ್ನಲ್ಲೇ ಸಲ್ಮಾನ್ ಖಾನ್ ಜತೆಗಿನ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ ಸುದೀಪ್

2019ರಲ್ಲಿ ಸಲ್ಮಾನ್ ಖಾನ್ ನಟನೆಯ ‘ದಬಾಂಗ್ 3’ ಚಿತ್ರ ತೆರೆಗೆ ಬಂತು. ಈ ಸಿನಿಮಾದಲ್ಲಿ ಸುದೀಪ್​ ವಿಲನ್ ಪಾತ್ರ ಮಾಡಿದ್ದರು. ಚಿತ್ರದ ಶೂಟಿಂಗ್ ವೇಳೆ ಸಲ್ಮಾನ್ ಖಾನ್ ಹಾಗೂ ಸುದೀಪ್​ ನಡುವೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ.

‘ವಿಕ್ರಾಂತ್​ ರೋಣ’ ಬೆನ್ನಲ್ಲೇ ಸಲ್ಮಾನ್ ಖಾನ್ ಜತೆಗಿನ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ ಸುದೀಪ್
ಸುದೀಪ್-ಸಲ್ಮಾನ್
TV9 Web
| Edited By: |

Updated on:Jul 29, 2022 | 5:57 PM

Share

ಕಿಚ್ಚ ಸುದೀಪ್ (Kichcha Sudeep) ಅವರು ನಿರ್ದೇಶಕನಾಗಬೇಕು ಎಂದು ಕನಸು ಕಂಡವರು. ಆದರೆ, ಅವರು ಆಗಿದ್ದು ಹೀರೋ. ನಂತರ ಅವರು ಕನಸನ್ನು ನನಸು ಮಾಡಿಕೊಂಡರು. ‘ಮೈ ಆಟೋಗ್ರಾಫ್​’ ಚಿತ್ರದ ಮೂಲಕ ಸುದೀಪ್ (Sudeep)​ ನಿರ್ದೇಶಕರಾಗಿ ಬಡ್ತಿ ಪಡೆದರು. ನಂತರ ಹಲವು ಚಿತ್ರಗಳಿಗೆ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಕಿಚ್ಚ ನಿರ್ದೇಶನಕ್ಕೆ ಮರಳಬೇಕು ಎಂಬುದು ಅನೇಕರ ಕೋರಿಕೆ. ಈ ಬಗ್ಗೆ ಈಗ ಬಿಸಿಬಿಸಿ ಅಪ್​ಡೇಟ್ ಸಿಕ್ಕಿದೆ. ಸಲ್ಮಾನ್ ಖಾನ್ ಚಿತ್ರಕ್ಕೆ ಸುದೀಪ್ ಆ್ಯಕ್ಷನ್ ಕಟ್​ ಹೇಳಲಿದ್ದಾರೆ. ಈ ವಿಚಾರವನ್ನು ಸ್ವತಃ ಸುದೀಪ್ ಖಚಿತಪಡಿಸಿದ್ದಾರೆ.

2019ರಲ್ಲಿ ಸಲ್ಮಾನ್ ಖಾನ್ ನಟನೆಯ ‘ದಬಾಂಗ್ 3’ ಚಿತ್ರ ತೆರೆಗೆ ಬಂತು. ಈ ಸಿನಿಮಾದಲ್ಲಿ ಸುದೀಪ್​ ವಿಲನ್ ಪಾತ್ರ ಮಾಡಿದ್ದರು. ಚಿತ್ರದ ಶೂಟಿಂಗ್ ವೇಳೆ ಸಲ್ಮಾನ್ ಖಾನ್ ಹಾಗೂ ಸುದೀಪ್​ ನಡುವೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ. ಸುದೀಪ್​ಗೆ ಸಲ್ಮಾನ್​ ಖಾನ್ ಕಾರ್ ಗಿಫ್ಟ್​ ಮಾಡಿದ್ದರು. ಕಿಚ್ಚನ ಮೇಲೆ ಸಲ್ಲುಗೆ ಎಷ್ಟು ಪ್ರೀತಿ, ಗೌರವ ಇದೆ ಎಂಬುದಕ್ಕೆ ಇದೊಂದು ಸಣ್ಣ ಸಾಕ್ಷಿ ಅಷ್ಟೇ. ಸಲ್ಮಾನ್​ ಹಾಗೂ ಕಿಚ್ಚನ ನಡುವೆ ಹಲವು ಸಾಮ್ಯತೆಗಳು ಇರುವುದಕ್ಕೆ ಇಬ್ಬರೂ ಸಾಕಷ್ಟು ಕ್ಲೋಸ್ ಆಗಿದ್ದಾರೆ. ಕಥೆ ಓಕೆ ಆದರೆ ಸುದೀಪ್​ಗೆ ಸಲ್ಮಾನ್ ಖಾನ್ ಕಾಲ್​ಶೀಟ್ ಸಿಗಲಿದೆ.

ಸುದೀಪ್ ಅವರು ‘ವಿಕ್ರಾಂತ್ ರೋಣ’ ಗೆಲುವಿನ ಖುಷಿಯಲ್ಲಿದ್ದಾರೆ. ಈ ಚಿತ್ರದ ಬಗ್ಗೆ ಸುದೀಪ್ ಪಿಂಕ್​ವಿಲ್ಲಾ ವೆಬ್​ಸೈಟ್ ಜತೆ ಮಾತನಾಡುವಾಗ ಹೊಸ ವಿಚಾರ ರಿವೀಲ್ ಮಾಡಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರವನ್ನು ಹಿಂದಿಯಲ್ಲಿ ಸಲ್ಮಾನ್ ಪ್ರೆಸೆಂಟ್ ಮಾಡಿದ್ದಾರೆ. ಈ ಕಾರಣಕ್ಕೆ ಸಲ್ಲು ಜತೆ ಸಿನಿಮಾ ಯಾವಾಗ ಎಂಬ ಪ್ರಶ್ನೆ ಸುದೀಪ್​ಗೆ ಎದುರಾಗಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ.

ಇದನ್ನೂ ಓದಿ
Image
‘ವಿಕ್ರಾಂತ್​ ರೋಣ’ ಪ್ರೀ-ರಿಲೀಸ್​ ಇವೆಂಟ್​ನಲ್ಲಿ ಕತ್ರಿನಾ ಜಪ ಮಾಡಿದ ಸಲ್ಮಾನ್​ ಖಾನ್​; ಕಾರಣ ಏನು?
Image
Salman Khan: ‘ವಿಕ್ರಾಂತ್​ ರೋಣ’ ವೇದಿಕೆಯಲ್ಲಿ ಸುದೀಪ್​-ಸಲ್ಮಾನ್​​; ಕಿಚ್ಚನ ಜತೆಗಿನ ಬಾಂಧವ್ಯದ ಬಗ್ಗೆ ಸಲ್ಲು ಮಾತು
Image
Kichcha Sudeep: ಮುಂಬೈ, ಚೆನ್ನೈನಿಂದಲೂ ಸುದೀಪ್​ ಕಟೌಟ್​ಗೆ ಬಂತು ಬೇಡಿಕೆ; ಹೇಗಿದೆ ನೋಡಿ ‘ವಿಕ್ರಾಂತ್​ ರೋಣ’ ಕ್ರೇಜ್​
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​

‘ಕಳೆದ ವರ್ಷವೇ ಇದಕ್ಕೆ ಪ್ರಕ್ರಿಯೆ ಆರಂಭ ಆಗಿದೆ. ನೀವು ಇನ್ನೂ ಸ್ವಲ್ಪ ಸಮಯ ಇದಕ್ಕಾಗಿ ಕಾಯಬೇಕಾಗುತ್ತದೆ. ನಾನು ಅವರಿಗೆ ಕಥೆ ಹೇಳಬೇಕು. ಅವರು ಅದಕ್ಕೆ ಓಕೆ ಹೇಳಬೇಕು. ನಂತರ ಅವರು ಸೆಟ್​ಗೆ ಬರಬೇಕು. ನಾವು ಈ ಬಗ್ಗೆ ಚರ್ಚೆ ಮಾಡುತ್ತಲೇ ಇರುತ್ತೇವೆ. ಅವರು ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಇದ್ದಾರೆ. ಸರಿಯಾದ ಸಮಯಕ್ಕೆ ಎಲ್ಲವೂ ಆಗಲಿದೆ’ ಎಂದು ಸುದೀಪ್ ಅಸಲಿ ವಿಚಾರ ರಿವೀಲ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಕಿಚ್ಚ ಸುದೀಪ್​; ಇಲ್ಲಿವೆ ಫೋಟೋಗಳು

ಸಲ್ಮಾನ್ ಖಾನ್ ಅವರು ಎಲ್ಲಾ ಚಿತ್ರಗಳನ್ನು ಹಂಚಿಕೆ ಮಾಡಲು ಒಪ್ಪುವುದಿಲ್ಲ. ‘ವಿಕ್ರಾಂತ್ ರೋಣ’ ಚಿತ್ರವನ್ನು ಅವರು ಹಿಂದಿಯಲ್ಲಿ ಹಂಚಿಕೆ ಮಾಡಿದ್ದು ನಿಜಕ್ಕೂ ಖುಷಿಯ ವಿಚಾರ. ಈ ವಿಚಾರಕ್ಕೆ ಸಲ್ಲುಗೆ ಧನ್ಯವಾದ ಅರ್ಪಿಸಿದ್ದಾರೆ ಸುದೀಪ್.

Published On - 5:56 pm, Fri, 29 July 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು