AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಸಿಂಗ್ ಫೆಸ್ಟಿವಲ್ ಫಿನಾಲೆಯಲ್ಲಿ ಕಿಚ್ಚ ಸುದೀಪ್ ಟೀಂ; ಇದ್ದಾರೆ ಇನ್ನೂ ಹಲವು ಸೆಲೆಬ್ರಿಟಿಗಳು

ಕಿಚ್ಚ ಸುದೀಪ್ ಅವರು ತಮ್ಮ ಕಿಚ್ಚಾಸ್ ಕಿಂಗ್ಸ್ ತಂಡದೊಂದಿಗೆ ಮುಂಬೈನಲ್ಲಿ ನಡೆಯುವ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) ಗ್ರ್ಯಾಂಡ್ ಫೈನಲ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಇದು ಮುಂಬೈನ ಮೊದಲ FIA-ಗ್ರೇಡ್ ಸ್ಟ್ರೀಟ್ ಸರ್ಕ್ಯೂಟ್ ಆಗಿದ್ದು, ಜಾನ್ ಅಬ್ರಹಾಂ, ಅರ್ಜುನ್ ಕಪೂರ್, ಸೌರವ್ ಗಾಂಗುಲಿ ಮುಂತಾದ ಸೆಲೆಬ್ರಿಟಿಗಳ ತಂಡಗಳು ಸಹ ಈ ರೇಸ್‌ನಲ್ಲಿ ಸ್ಪರ್ಧಿಸುತ್ತಿವೆ.

ರೇಸಿಂಗ್ ಫೆಸ್ಟಿವಲ್ ಫಿನಾಲೆಯಲ್ಲಿ ಕಿಚ್ಚ ಸುದೀಪ್ ಟೀಂ; ಇದ್ದಾರೆ ಇನ್ನೂ ಹಲವು ಸೆಲೆಬ್ರಿಟಿಗಳು
ನಾಗ ಚೈತನ್ಯ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Sep 20, 2025 | 11:36 AM

Share

ನಟ ಕಿಚ್ಚ ಸುದೀಪ್ (Kichcha Sudeep) ಅವರು ನಟನೆಯ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಕ್ರಿಕೆಟ್ ಎಂದರೆ ಅವರಿಗೆ ಬಲು ಇಷ್ಟ. ಇದರ ಜೊತೆಗೆ ಇತ್ತೀಚೆಗೆ ಅವರು ಕಾರ್ ರೇಸ್ ತಂಡದ ಮಾಲೀಕರಾಗಿದ್ದಾರೆ. ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ಮಾಲೀಕತ್ವ ಪಡೆದುಕೊಂಡಿದ್ದಾರೆ. ಈಗ ಸುದೀಪ್ ತಂಡ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) ಗ್ರ್ಯಾಂಡ್ ಫೈನಲ್​ನಲ್ಲಿ ಸ್ಪರ್ಧಿಸುತ್ತಿದೆ. ಇನ್ನೂ ಕೆಲವು ಸೆಲೆಬ್ರಿಟಿಗಳ ಟೀಂ ಈ ರೇಸ್​ನಲ್ಲಿ ಇದೆ.

ರೇಸ್ ಬಗ್ಗೆ ವಿವರ..

ಡಿಸೆಂಬರ್ ತಿಂಗಳಲ್ಲಿ ಮುಂಬೈನಲ್ಲಿ ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) ನಡೆಯಲಿದೆ. ಇದರ ಮೂಲಕ ಮುಂಬೈ ತನ್ನ ಮೊದಲ FIA-ಗ್ರೇಡ್ ಸ್ಟ್ರೀಟ್ ಸರ್ಕ್ಯೂಟ್‌ಗೆ ಆತಿಥ್ಯ ವಹಿಸಲಿದೆ. ಮುಂಬೈ ರಸ್ತೆಗಳು ಇದೇ ಮೊದಲ ಬಾರಿಗೆ ರೇಸ್​ಗೆ ಸಿದ್ಧವಾಗಿದೆ. ನವಿ ಮುಂಬೈನಲ್ಲಿ 3.753 ಕಿಮೀ ಉದ್ದದ ರಸ್ತೆ ರೇಸ್​​ಗೆ ಬಳಕೆ ಆಗುತ್ತಿದ್ದು, ಒಟ್ಟೂ, 14 ತಿರುವುಗಳಿವೆ. ಈ ರೇಸ್ ಐಕಾನಿಕ್ ಪಾಮ್ ಬೀಚ್ ರಸ್ತೆಯಿಂದ ಆರಂಭ ಆಗಲಿದೆ.  ಭಾರತ ಹಾಗೂ ಅಂತರರಾಷ್ಟ್ರೀಯ ರೇಸರ್‌ಗಳು ಇಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ.

ಖುಷಿ ವ್ಯಕ್ತಪಡಿಸಿದ ಸಿಎಂ ದೇವೇಂದ್ರ ಫಡ್ನವೀಸ್

ಈ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಖುಷಿ ವ್ಯಕ್ತಪಡಿಸಿದ್ದಾರೆ. ‘ನವೀ ಮುಂಬೈಗೆ ನಾವು ಭಾರತೀಯ ರೇಸಿಂಗ್ ಫೆಸ್ಟಿವಲ್ ತರಲು ಹೆಮ್ಮೆ ಇದೆ. ಇದು ಮಹಾರಾಷ್ಟ್ರದ ಮೋಟಾರ್ಸ್‌ಪೋರ್ಟ್ ಪಯಣದಲ್ಲಿ ಹೊಸ ಮೈಲಿಗಲ್ಲು. ಇದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ. ಈ ರೇಸ್ ಯುವ ರೇಸರ್‌ಗಳಿಗೆ ಮಾತ್ರವಲ್ಲ, ಇಂಜಿನಿಯರಿಂಗ್, ತಂತ್ರಜ್ಞಾನ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕ್ಷೇತ್ರದ ಪ್ರತಿಭೆಗಳಿಗೆ ಸಹ ವೇದಿಕೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಬಾಲಿವುಡ್ ಮಾಫಿಯಾ ಬಗ್ಗೆ ಮಾತನಾಡಿದ ತನುಶ್ರೀ ದತ್ತಾ
Image
ಪುನೀತ್ ಜೊತೆ ನಟಿಸಿದ ಅದಾ ಶರ್ಮಾ ನಿಜವಾದ ಹೆಸರೇನು ಗೊತ್ತಾ?
Image
ಬದಲಾಗೋದೇ ಇಲ್ಲ ಅಕ್ಷಯ್ ಅದೃಷ್ಟ; ಹೊಸ ಚಿತ್ರ, ಮತ್ತದೇ ಹೀನಾಯ ಕಲೆಕ್ಷನ್
Image
‘ಕಲ್ಕಿ’ ಚಿತ್ರದಿಂದ ಹೊರಬಂದು ಶಾರುಖ್ ಹೇಳಿಕೊಟ್ಟ ಪಾಠ ನೆನೆದ ದೀಪಿಕಾ

ಇದನ್ನೂ ಓದಿ: ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಹುಟ್ಟುಹಬ್ಬದ ದಿನ ಅಭಿಮಾನಿಗಳ ಮಾತು

ಹಲವು ಸೆಲೆಬ್ರಿಟಿಗಳ ಟೀಂ ಭಾಗಿ

RPPL ಈ ಮೊದಲು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಯಶಸ್ವಿ ಸ್ಟ್ರೀಟ್ ರೇಸ್‌ಗಳನ್ನು ಆಯೋಜಿಸಿತ್ತು. ಈಗ ಮುಂಬೈನಲ್ಲಿ ವಿಶ್ವಮಟ್ಟದ ಸ್ಪರ್ಧೆ ಆಯೋಜನೆ ಮಾಡುತ್ತಿದೆ. ಕಿಚ್ಚ ಸುದೀಪ್ ಜೊತೆ ಇನ್ನೂ ಕೆಲವು ಸೆಲೆಬ್ರಿಟಿಗಳ ತಂಡ ಇದರಲ್ಲಿ ಭಾಗಿ ಆಗಲಿದೆ. ಜಾನ್ ಅಬ್ರಹಾಂ ಒಡೆತನದ ‘ಗೋವಾ ಏಸಸ್ JA ರೇಸಿಂಗ್’, ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೀಮನ್ಸ್ ದೆಹಲಿ’, ಸೌರವ್ ಗಾಂಗೂಲಿ ಒಡೆತನದ ‘ಕೊಲ್ಕತಾ ರಾಯಲ್ ಟೈಗರ್ಸ್’, ನಾಗ ಚೈತನ್ಯ  ಅವರ ‘ಹೈದರಾಬಾದ್ ಬ್ಲಾಕ್‌ಬರ್ಡ್ಸ್’ ಹಾಗೂ ಡಾ. ಶ್ವೇತಾ ಸುಂದೀಪ್ ಆನಂದ್ ಅವರ ‘ಚೆನ್ನೈ ಟರ್ಬೋ ರೈಡರ್ಸ್’ ತಂಡಗಳು ಈ ರೇಸ್​​ನಲ್ಲಿ ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ