Salman Khan: ಈದ್​ಗೆ ಸಲ್ಮಾನ್​ ಖಾನ್​ ಕಡೆಯಿಂದ ಮನರಂಜನೆಯ ರಸದೌತಣ; ಇಲ್ಲಿದೆ ನೋಡಿ ಸ್ಯಾಂಪಲ್​

Kisi Ka Bhai Kisi Ki Jaan Trailer: ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದ ಟ್ರೇಲರ್​ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಇದನ್ನು ಕಂಡು ಸಲ್ಮಾನ್​ ಖಾನ್​ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

Salman Khan: ಈದ್​ಗೆ ಸಲ್ಮಾನ್​ ಖಾನ್​ ಕಡೆಯಿಂದ ಮನರಂಜನೆಯ ರಸದೌತಣ; ಇಲ್ಲಿದೆ ನೋಡಿ ಸ್ಯಾಂಪಲ್​
ಸಲ್ಮಾನ್ ಖಾನ್
Follow us
ಮದನ್​ ಕುಮಾರ್​
|

Updated on:Apr 10, 2023 | 8:57 PM

ನಟ ಸಲ್ಮಾನ್​ ಖಾನ್​ (Salman Khan) ಅವರು ತಮ್ಮ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಲು ಬರುತ್ತಿದ್ದಾರೆ. ಈ ಬಾರಿಯ ಈದ್​ ಹಬ್ಬದ (Eid 2023) ಪ್ರಯುಕ್ತ ಅವರ ಹೊಸ ಸಿನಿಮಾ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ರಿಲೀಸ್​ ಆಗುತ್ತಿದೆ. ಈ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ನಟಿಸಿದ್ದಾರೆ. ಒಟ್ಟಾರೆ ಸಿನಿಮಾ ಹೇಗಿರಲಿದೆ ಎಂಬುದರ ಸ್ಯಾಂಪಲ್​ ತಿಳಿಸಲು ಈಗ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ರಿಲೀಸ್​ ಆದ ಕೆಲವೇ ನಿಮಿಷಗಳಲ್ಲಿ ಒಂದು ಮಿಲಿಯನ್​ಗಿಂತಲೂ ಹೆಚ್ಚು ವೀವ್ಸ್​ ಪಡೆದುಕೊಂಡಿದೆ ಈ ಟ್ರೇಲರ್​. ಆ ಮೂಲಕ ಚಿತ್ರದ ಬಗ್ಗೆ ಸಲ್ಮಾನ್​ ಖಾನ್​ ಅಭಿಮಾನಿಗಳಿಗೆ ಎಷ್ಟು ನಿರೀಕ್ಷೆ ಇದೆ ಎಂಬುದು ಗೊತ್ತಾಗಿದೆ. ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ಫರ್ಹಾದ್​ ಸಮ್ಜಿ ಅವರು ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್​ 21ರಂದು ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ತೆರೆಕಾಣಲಿದೆ.

ಸಲ್ಮಾನ್​ ಖಾನ್​ ನಟನೆಯ ಸಿನಿಮಾ ಎಂದರೆ ಖಂಡಿತವಾಗಿಯೂ ಮಾಸ್​ ಆಗಿರುತ್ತವೆ. ಅಲ್ಲಿ ಕಾಮಿಡಿ, ಆ್ಯಕ್ಷನ್​ ಇರಲೇಬೇಕು. ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲೂ ಈ ಅಂಶಗಳು ಮಿಸ್​ ಆಗುವುದಿಲ್ಲ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಜೊತೆಗೆ ಲವ್​ ಸ್ಟೋರಿ, ಫ್ಯಾಮಿಲಿ ಸೆಂಟಿಮೆಂಟ್​ ಕೂಡ ಗಮನ ಸೆಳೆಯಲಿದೆ. ಟ್ರೇಲರ್​ ನೋಡಿದ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಎಲ್ಲರಿಂದ ಪಾಸಿಟಿವ್​ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

]ಸಲ್ಮಾನ್​ ಖಾನ್​ ಪಂಚೆ ಧರಿಸಿ ಕುಣಿದಿದ್ದಕ್ಕೆ ಎದುರಾಯ್ತು ಕಿರಿಕ್​; ಸಿನಿಮಾ ಬ್ಯಾನ್​ ಮಾಡಲು ಒತ್ತಾಯ

‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ದಕ್ಷಿಣ ಭಾರತದ ಪ್ರೇಕ್ಷಕರನ್ನೂ ಸೆಳೆಯುವ ಪ್ರಯತ್ನ ಕೂಡ ಆಗಿದೆ. ತೆಲುಗಿನ ಸ್ಟಾರ್​ ನಟ ದಗ್ಗುಬಾಟಿ ವೆಂಕಟೇಶ್​ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜೊತೆಗೆ, ಜಗಪತಿ ಬಾಬು ಅವರು ಖಳನಾಯಕನಾಗಿ ಅಬ್ಬರಿಸಿದ್ದಾರೆ. ತೆಲುಗು ಹುಡುಗಿ ಪಾತ್ರದಲ್ಲಿ ಪೂಜಾ ಹೆಗ್ಡೆ ನಟಿಸಿದ್ದಾರೆ. ‘ಯೆಂಟಮ್ಮಾ..’ ಹಾಡಿನಲ್ಲಿ ರಾಮ್​ ಚರಣ್​ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಈ ಸಿನಿಮಾ ಹೈಪ್​ ಪಡೆದುಕೊಂಡಿದೆ.

ಬೇರೆ ನಟರ ಚಿತ್ರಗಳಲ್ಲಿ ಅತಿಥಿ ಪಾತ್ರ ಮಾಡುವ ಮೂಲಕ ಅಭಿಮಾನಿಗಳಿಗೆ ದೊಡ್ಡ ಪರದೆಯಲ್ಲಿ ದರ್ಶನ ನೀಡಿದ್ದು ಬಿಟ್ಟರೆ 2022ರಲ್ಲಿ ಸಲ್ಮಾನ್​ ಖಾನ್​ ಅವರು ಯಾವುದೇ ಸಿನಿಮಾ ರಿಲೀಸ್​ ಆಗಲಿಲ್ಲ. ಹಾಗಾಗಿ ಬಹುದಿನಗಳ ಬಳಿಕ ಅವರ ಸಿನಿಮಾ ತೆರೆ ಕಾಣುತ್ತಿರುವುದರಿಂದ ಅಭಿಮಾನಿಗಳ ಮನದಲ್ಲಿ ನಿರೀಕ್ಷೆಯ ಮಟ್ಟ ಹೆಚ್ಚಿದೆ. ಈ ಚಿತ್ರದಲ್ಲಿ ಹೀರೋ ಆಗಿ ನಟಿಸುವುದರ ಜೊತೆಗೆ ನಿರ್ಮಾಣವನ್ನೂ ಸಲ್ಮಾನ್​ ಖಾನ್​ ಅವರೇ ಮಾಡಿದ್ದಾರೆ. ಅವರ ಬ್ಯಾನರ್​ನಲ್ಲಿ ಸಖತ್​ ಅದ್ದೂರಿಯಾಗಿ ಈ ಚಿತ್ರ ಮೂಡಿಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:57 pm, Mon, 10 April 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್