KK Death Case: ಸಿಂಗರ್​ ಕೆಕೆ ಸಾವಿನಲ್ಲಿ ಮೂಡಿದೆ ಅನುಮಾನ; ಮುಖ, ತಲೆಯಲ್ಲಿ ಗಾಯದ ಗುರುತು? ಕೇಸ್​ ದಾಖಲು

Unnatural Death | Krishnakumar Kunnath: ಹೋಟೆಲ್​ನಲ್ಲಿ ಕೆಕೆ ಅವರ ಮೇಲೆ ಹಲ್ಲೆ ನಡೆಯಿತೇ? ಮುಖ ಮತ್ತು ತಲೆಯಲ್ಲಿ ಗಾಯದ ಗುರುತುಗಳು ಮೂಡಿದ್ದು ಯಾಕೆ? ಇಂಥ ಹಲವಾರು ಪ್ರಶ್ನೆಗಳು ಜನರ ಮನದಲ್ಲಿ ಮೂಡಿವೆ.

KK Death Case: ಸಿಂಗರ್​ ಕೆಕೆ ಸಾವಿನಲ್ಲಿ ಮೂಡಿದೆ ಅನುಮಾನ; ಮುಖ, ತಲೆಯಲ್ಲಿ ಗಾಯದ ಗುರುತು? ಕೇಸ್​ ದಾಖಲು
ಸಿಂಗರ್​ ಕೆಕೆ
Follow us
TV9 Web
| Updated By: ಮದನ್​ ಕುಮಾರ್​

Updated on:Jun 01, 2022 | 10:09 AM

ಹಲವಾರು ಸೂಪರ್​ ಹಿಟ್​ ಗೀತೆಗಳಿಗೆ ಧ್ವನಿ ನೀಡಿದ್ದ ಗಾಯಕ ಕೆಕೆ ಅವರ ನಿಧನದಿಂದ (KK Death) ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ನೋವಾಗಿದೆ. ಮಂಗಳವಾರ (ಮೇ 31) ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದಾಗ ಕೆಕೆ (ಕೃಷ್ಣಕುಮಾರ್​ ಕುನ್ನತ್​) ಅವರ ಆರೋಗ್ಯದಲ್ಲಿ ಸಮಸ್ಯೆ ಉಂಟಾಯಿತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವುದರೊಳಗೆ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎನ್ನಲಾಗಿದೆ. ಆದರೆ ಈಗ ಅವರ ಸಾವಿನ ಬಗ್ಗೆ ಕೆಲವು ಅನುಮಾನಗಳು ಮೂಡುತ್ತಿವೆ. ಹೃದಯಾಘಾತದಿಂದ ಕೆಕೆ (Krishnakumar Kunnath) ಅವರು ನಿಧನರಾದರು ಎಂದು ಪ್ರಾಥಮಿಕ ಮಾಹಿತಿ ಪ್ರಕಟ ಆಗಿದೆ. ಹಾಗಿದ್ದರೂ ಕೂಡ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸತ್ಯ ಏನೆಂಬುದು ಗೊತ್ತಾಗಬೇಕಿದೆ. ಆದರೆ ಕೆಕೆ ಅವರ ಮುಖ ಮತ್ತು ತಲೆಯಲ್ಲಿ ಗಾಯದ ಗುರುತುಗಳು ಇವೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಪೊಲೀಸರು ಅಸಹಜ ಸಾವು (Unnatural Death) ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಸಂಗೀತ ಕಾರ್ಯಕ್ರಮದ ವೇಳೆ ಕೆಕೆ ಅವರು ಹಲವು ಬಾರಿ ವೇದಿಕೆಯ ಹಿಂಭಾಗಕ್ಕೆ ತೆರಳಿದ್ದರು ಎಂಬ ಮಾಹಿತಿ ಕೂಡ ಕೇಳಿಬಂದಿದೆ.

ಗಾಯಕ ಕೆಕೆ ಅವರ ಸಾವಿನ ಸುತ್ತ ಈಗ ಅನುಮಾನಗಳು ಹುಟ್ಟಿಕೊಂಡಿವೆ. ಇಂದು (ಜೂನ್​ 1) ಕೋಲ್ಕತ್ತಾದ ಎಸ್​ಎಸ್​ಕೆಎಮ್​ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಕೆಕೆ ಅವರು ಉಳಿದುಕೊಂಡಿದ್ದ ಖಾಸಗಿ ಹೋಟೆಲ್​ನ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸಾವಿಗೆ ಅಸಲಿ ಕಾರಣ ಏನು ಎಂಬುದನ್ನು ತಿಳಿಯಲು ತನಿಖೆ ಆರಂಭ ಆಗಿದೆ. ಕಾರ್ಯಕ್ರಮದ ಆಯೋಜಕರು ಮತ್ತು ಹೋಟೆಲ್​ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.

ಸಂಗೀತ ಕಾರ್ಯಕ್ರಮದ ವೇದಿಕೆಯಲ್ಲಿ ಹಾಡುತ್ತಿದ್ದ ಕೆಕೆ ಅವರಿಗೆ ನಿಜಕ್ಕೂ ಆರೋಗ್ಯ ಸಮಸ್ಯೆ ಆಗಿತ್ತಾ? ಹೋಟೆಲ್​ನಲ್ಲಿ ಅವರ ಮೇಲೆ ಹಲ್ಲೆ ನಡೆಯಿತೇ? ಮುಖ ಮತ್ತು ತಲೆಯಲ್ಲಿ ಗಾಯದ ಗುರುತುಗಳು ಮೂಡಿದ್ದು ಯಾಕೆ? ಇಂಥ ಹಲವಾರು ಪ್ರಶ್ನೆಗಳು ಜನರ ಮನದಲ್ಲಿ ಮೂಡಿವೆ.

ಇದನ್ನೂ ಓದಿ
Image
KK Death News: ಗಾಯಕ ಕೆಕೆ ನಿಧನ; 1 ಕೋಟಿ ರೂ. ಕೊಟ್ಟರೂ ಅಂಥ ಸ್ಥಳದಲ್ಲಿ ಹಾಡುವುದಿಲ್ಲ ಎಂದಿದ್ದ ಸಿಂಗರ್​
Image
Singer KK Death: ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ನಂತರ 53 ವರ್ಷದ ಗಾಯಕ ಕೆಕೆ ಕುಸಿದು ಬಿದ್ದು ಸಾವು
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​
Image
Chalapathi Chowdary Death: ಹಿರಿಯ ನಟ ಕ್ಯಾಪ್ಟನ್​ ಚಲಪತಿ ಚೌದ್ರಿ ನಿಧನ

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕೆಕೆ ನಿಧನಕ್ಕೆ ಸಂಪಾತ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋಟ್ಯಂತರ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಕೆಕೆ ಅವರಿಗೆ 53 ವರ್ಷ ವಯಸ್ಸಾಗಿತ್ತು. ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಮೃತದೇಹವನ್ನು ಕುಟುಂಬದವರಿಗೆ ನೀಡಲಾಗುವುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:09 am, Wed, 1 June 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು