‘ಕೋಟಿಗೊಬ್ಬ 3’ ಸಿನಿಮಾ ರಿಲೀಸ್ ವಿಳಂಬವಾದರೂ ಬಾಕ್ಸ್ ಆಫೀಸ್ನಲ್ಲಿ ಒಳ್ಳಯೆ ಕಲೆಕ್ಷನ್ ಮಾಡುತ್ತಿದೆ. ಅನೇಕ ಕಡೆಗಳಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಪರಿಣಾಮ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾಜ್ಯಾದ್ಯಂತ ನೂರಾರು ಚಿತ್ರಮಂದಿರಗಳಲ್ಲಿ ತೆರೆಕಂಡ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದೆ. ನಾಲ್ಕು ದಿನಕ್ಕೆ ಈ ಸಿನಿಮಾ ಕಲೆಕ್ಷನ್ ಕೇಳಿ ಬಾಲಿವುಡ್ ಮಂದಿಯೂ ಅಚ್ಚರಿ ಹೊರ ಹಾಕಿದ್ದಾರೆ.
‘ಕೋಟಿಗೊಬ್ಬ 3’ ಸಿನಿಮಾ ಅಕ್ಟೋಬರ್ 14ರಂದು ತೆರೆಗೆ ಬರಬೇಕಿತ್ತು. ಆದರೆ, ಇದಕ್ಕೆ ನಾನಾ ಅಡ್ಡಿಗಳು ಎದುರಾದವು. ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿತ್ತು. ಆದರೆ, ಇದರ ಹಿಂದೆ ಷಡ್ಯಂತರ ನಡೆದಿದೆ ಎಂದು ಆರೋಪಿಸಿತು. ಹೀಗಾಗಿ, ಅಕ್ಟೋಬರ್ 15ರಂದು ಸಿನಿಮಾ ತೆರೆಗೆ ಬಂತು. ಆದಾಗ್ಯೂ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಮಾಯಿ ಮಾಡಿದೆ.
ಮೊದಲ ದಿನ ‘ಕೋಟಿಗೊಬ್ಬ 3’ ಗಳಿಕೆ ಮಾಡಿದ್ದು ಬರೋಬ್ಬರಿ 12.5 ಕೋಟಿ ರೂಪಾಯಿ ಎನ್ನಲಾಗಿದೆ. ಈಗ ನಾಲ್ಕು ದಿನದ ಕಲೆಕ್ಷನ್ ಲೆಕ್ಕ ಸಿಕ್ಕಿದೆ. ಈ ಸಿನಿಮಾ ನಾಲ್ಕು ದಿನಕ್ಕೆ ಬರೋಬ್ಬರಿ 40.5 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಪೋಸ್ಟರ್ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿ ಸುದೀಪ್ ಕೂಡ ಸಂತಸಪಟ್ಟಿದ್ದಾರೆ.
ಈ ಸಿನಿಮಾದಲ್ಲಿ ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈಗ ಅವರು ‘ಕೋಟಿಗೊಬ್ಬ 3’ ಕಲೆಕ್ಷನ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಈ ಪ್ರಯಾಣದ ಭಾಗವಾಗಿರುವುದಕ್ಕೆ ಆಭಾರಿಯಾಗಿದ್ದೇನೆ. ಇದನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ಪ್ರೀತಿ ಹೀಗೆಯೇ ಬರುತ್ತಿರಲಿ’ ಎಂದು ಅವರು ಬರೆದುಕೊಂಡಿದ್ದಾರೆ. ಇದರ ಜತೆಗೆ ಬಾಕ್ಸ್ ಆಫೀಸ್ ಗಳಿಕೆ ಲೆಕ್ಕಾಚಾರವನ್ನೂ ನೀಡಿದ್ದಾರೆ.
Grateful to have been a part of this journey. Thank you to everyone who have contributed to making this a huge success. Keep the love coming. #gratitude #Kotigobba3Roars @KicchaSudeep @MadonnaSebast14 @shraddhadas43 #SurappaBabu #ShivaKarthik #ravishankar 🙏🏼❤️ pic.twitter.com/Vyh2Uw05GD
— Aftab Shivdasani 😷 (@AftabShivdasani) October 20, 2021
ಇದನ್ನೂ ಓದಿ: Kichcha Sudeep: ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದ ‘ಕೋಟಿಗೊಬ್ಬ 3’; ನಾಲ್ಕು ದಿನದ ಕಲೆಕ್ಷನ್ ಎಷ್ಟು ಗೊತ್ತಾ?