Kriti Sanon: ‘ಆದಿಪುರುಷ್’ ಚಿತ್ರದ ಶೂಟಿಂಗ್ ಮುಗಿಸಿದ ಕೃತಿ; ನಿರ್ದೇಶಕ ಓಂ ರಾವುತ್ ಹೇಳಿದ್ದೇನು?

Prabhas: ಮುಂಬೈನಲ್ಲಿ ಬಹುನಿರೀಕ್ಷಿತ ‘ಆದಿಪುರುಷ್’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ನಡುವೆ ಚಿತ್ರತಂಡದಿಂದ ಮಹತ್ವದ ಅಪ್ಡೇಟ್ ಸಿಕ್ಕಿದೆ.

Kriti Sanon: ‘ಆದಿಪುರುಷ್’ ಚಿತ್ರದ ಶೂಟಿಂಗ್ ಮುಗಿಸಿದ ಕೃತಿ; ನಿರ್ದೇಶಕ ಓಂ ರಾವುತ್ ಹೇಳಿದ್ದೇನು?
ಪ್ರಭಾಸ್, ಕೃತಿ ಸನೋನ್
Follow us
TV9 Web
| Updated By: shivaprasad.hs

Updated on: Oct 17, 2021 | 6:38 PM

ಬಾಲಿವುಡ್​ನಲ್ಲಿ ಪ್ರಸ್ತುತ ಸಖತ್ ಬ್ಯುಸಿಯಿರುವ ನಟಿಯರ ಪೈಕಿ ಕೃತಿ ಸನೋನ್ ಕೂಡ ಒಬ್ಬರು. ಅವರು ದಕ್ಷಿಣ ಭಾರತದ ಚಿತ್ರಗಳ ಜೊತೆಗೆ ಬಾಲಿವುಡ್​ನಲ್ಲೂ ಸಖತ್ ಬ್ಯುಸಿಯಿದ್ದಾರೆ. ಇತ್ತೀಚೆಗೆ ಅವರು ಬಿಗ್ ಬಜೆಟ್ ಚಿತ್ರಗಳ ನಾಯಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಪ್ರಭಾಸ್ ನಟಿಸುತ್ತಿರುವ ಬಹುನಿರೀಕ್ಷಿತ ‘ಆದಿಪುರುಷ್’ ಚಿತ್ರದಲ್ಲಿ ನಾಯಕಿಯ ಪಾತ್ರದಲ್ಲಿ ಕೃತಿ ಬಣ್ಣ ಹಚ್ಚುತ್ತಿದ್ದಾರೆ. ರಾಮಾಯಣವನ್ನು ಆಧರಿಸಿದ ‘ಆದಿಪುರುಷ್’ ಈಗಾಗಲೇ ತನ್ನ ಪಾತ್ರವರ್ಗದಿಂದ ಗಮನ ಸೆಳೆದಿದೆ. ಪ್ರಭಾಸ್ ರಾಮನಾಗಿ ಕಾಣಿಸಿಕೊಳ್ಳುತ್ತಿದ್ದು, ಕೃತಿ, ಸೀತೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡದಿಂದ ಹೊಸ ಅಪ್ಡೇಟ್ ಸಿಕ್ಕಿದೆ.

ಪ್ರಭಾಸ್ ‘ಸಲಾರ್’ ಹಾಗೂ ‘ಆದಿಪುರುಷ್’ ಎರಡೂ ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿಯಿದ್ದಾರೆ. ಪ್ರಸ್ತುತ ಮುಂಬೈನಲ್ಲಿ ನಡೆಯುತ್ತಿರುವ ಆದಿಪುರುಷ್ ಚಿತ್ರೀರಣದಲ್ಲಿ ಅವರು ಭಾಗಿಯಾಗಿದ್ದು, ಚಿತ್ರೀಕರಣ ಭರದಿಂದ ಸಾಗುತ್ತಿದೆ. ನಾಯಕಿ ಕೃತಿ ಕೂಡ ಚಿತ್ರತಂಡವನ್ನು ಸೇರಿಕೊಂಡಿದ್ದರು. ಇತ್ತೀಚೆಗೆ ಚಿತ್ರತಂಡದಿಂದ ಬಂದಿರುವ ಮಾಹಿತಿತ ಪ್ರಕಾರ, ಜಾನಕಿಯ ಪಾತ್ರದ ಚಿತ್ರೀಕರಣ ಮುಗಿದಿದೆ. ಅರ್ಥಾತ್ ಕೃತಿ ಸನೋನ್ ಪಾತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ನಡೆಸಲಾಗಿದೆ.

ಚಿತ್ರದ ನಿರ್ದೇಶಕ ಓಂ ರಾವುತ್ ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಓಂ ರಾವುತ್ ಕೃತಿ ಅಭಿನಯವನ್ನೂ ಹಾಡಿ ಹೊಗಳಿದ್ದಾರೆ. ‘ಕೃತಿ, ನೀವು ಜಾನಕಿಯ ಪಾತ್ರವನ್ನು ನಿಭಾಯಿಸುವುದನ್ನು ನೋಡುವುದು ಮಾಯಕದಂತೆ ಭಾಸವಾಗುತ್ತದೆ. ನಿಮ್ಮ ಚಿತ್ರೀಕರಣ ಮುಗಿದಿದೆ ಎನ್ನುವುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಈ ಪಯಣ ಬಹಳ ಚೆನ್ನಾಗಿತ್ತು’ ಎಂದು ಓಂ ರಾವುತ್ ಬರೆದುಕೊಂಡಿದ್ದಾರೆ. ಇದರೊಂದಿಗೆ ಅವರು ಕೇಕ್ ಕಟ್ ಮಾಡುತ್ತಿರುವ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

ಓಂ ರಾವುತ್ ಹಂಚಿಕೊಂಡಿರುವ ಟ್ವೀಟ್ ಇಲ್ಲಿದೆ:

‘ಆದಿಪುರುಷ್’ ಚಿತ್ರದಲ್ಲಿ ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಸನ್ನಿ ಸಿಂಗ್ ಲಕ್ಷ್ಮಣನ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. ಬಿಗ್ ಬಜೆಟ್​ನಲ್ಲಿ ತಯಾರಾಗುತ್ತಿರುವ ಈ ಚಿತ್ರದ ಕುರಿತು ಚಿತ್ರಪ್ರೇಮಿಗಳಲ್ಲಿ ಬಹಳ ದೊಡ್ಡ ನಿರೀಕ್ಷೆ ಇದೆ.

ಇದನ್ನೂ ಓದಿ:

ಪ್ರಶಾಂತ್​ ನೀಲ್​ ಮತ್ತು ರಾಮ ಚರಣ್​ ಭೇಟಿಯ ಅಸಲಿಯತ್ತೇ ಬೇರೆ; ಕೊನೆಗೂ ಹೊರಬಿತ್ತು ಸತ್ಯ

ಕೋಲಾರ: ‘ಸಲಗ’ ಚಿತ್ರ ಯಶಸ್ವಿಯಾದ ಹಿನ್ನೆಲೆ; ಮಂಡಿಯೂರಿ ಮೆಟ್ಟಿಲು ಹತ್ತಿ ಹರಕೆ ತೀರಿಸಿದ ಅಭಿಮಾನಿಗಳು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ