Vivek Agnihotri: ‘ಪಠಾಣ್​ ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ’: ಕೆಆರ್​ಕೆ ಆರೋಪ

KRK | Pathaan Movie: ವಿವೇಕ್​ ಅಗ್ನಿಹೋತ್ರಿ ಅವರು ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಸ್ಕ್ರೀನ್​ ಶಾಟ್​ಗಳನ್ನು ಶೇರ್​ ಮಾಡಿಕೊಂಡಿದ್ದರು. ಅದರ ಕುರಿತು ಈಗ ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

Vivek Agnihotri: ‘ಪಠಾಣ್​ ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಪ್ರಚಾರ ಪಡೆಯುತ್ತಿದ್ದಾರೆ’: ಕೆಆರ್​ಕೆ ಆರೋಪ
ಕಮಾಲ್ ಆರ್. ಖಾನ್, ವಿವೇಕ್ ಅಗ್ನಿಹೋತ್ರಿ
Follow us
TV9 Web
| Updated By: ಮದನ್​ ಕುಮಾರ್​

Updated on:Jan 03, 2023 | 7:26 PM

ಬಾಲಿವುಡ್​ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ (Vivek Agnihotri) ಅವರು ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಬಾಲಿವುಡ್​ನಲ್ಲಿ ಅವರು ಕೆಲವರನ್ನು ಎದುರು ಹಾಕಿಕೊಂಡಿದ್ದಾರೆ. ಸಿದ್ಧಾಂತದ ಕಾರಣದಿಂದ ಒಂದು ವರ್ಗದ ನೆಟ್ಟಿಗರು ಅವರನ್ನು ವಿರೋಧಿಸುತ್ತಾರೆ. ಬಲಪಂಥೀಯ ವಿಚಾರಗಳನ್ನು ಅವರು ಹೆಚ್ಚು ಪ್ರತಿಪಾದಿಸುತ್ತಾರೆ ಎಂಬುದು ಹಲವರು ಅಭಿಪ್ರಾಯ. ಇದರ ನಡುವೆ ಕಾಂಟ್ರವರ್ಸಿ ನಿರ್ದೇಶಕ ಕಮ್​ ಸ್ವಯಂ ಘೋಷಿತ ವಿಮರ್ಶಕ ಕಮಾಲ್​ ಆರ್​. ಖಾನ್​ ಅವರು ಹೊಸ ಹೇಳಿಕೆ ನೀಡಿದ್ದಾರೆ. ಶಾರುಖ್​ ಖಾನ್​ ಅಭಿನಯದ ‘ಪಠಾಣ್​’ (Pathaan Movie) ಚಿತ್ರದ ವಿವಾದದಿಂದ ವಿವೇಕ್​ ಅಗ್ನಿಹೋತ್ರಿ ಅವರು ಪ್ರಚಾರ ಪಡೆಯುತ್ತಿದ್ದಾರೆ ಎಂದು ಕಮಾಲ್​ ಆರ್​. ಖಾನ್​ (Kamaal R Khan) ಆರೋಪಿಸಿದ್ದಾರೆ. ಈ ಬಗ್ಗೆ ವಿವೇಕ್​ ಅಗ್ನಿಹೋತ್ರಿ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರ ಜನಪ್ರಿಯತೆ ಹೆಚ್ಚಿತು. ಈಗ ಅವರು ‘ದಿ ವ್ಯಾಕ್ಸಿನ್​ ವಾರ್​’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಆ ಚಿತ್ರದ ಶೂಟಿಂಗ್​ ಇತ್ತೀಚೆಗಷ್ಟೇ ಶುರುವಾಗಿದೆ. ಆ ಸಿನಿಮಾದ ಕೆಲಸಗಳ ಜೊತೆಗೆ ಕೆಲವು ವಿವಾದಗಳ ಬಗ್ಗೆಯೂ ತಮ್ಮ ಅನಿಸಿಕೆ ಹಂಚಿಕೊಳ್ಳಲು ವಿವೇಕ್​ ಅಗ್ನಿಹೋತ್ರಿ ಸಮಯ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಇದನ್ನೂ ಓದಿ: KRK: ಲೈಂಗಿಕ ಕಿರುಕುಳ ಆರೋಪದಲ್ಲಿ ಕಮಾಲ್​ ಆರ್​. ಖಾನ್​ ಅರೆಸ್ಟ್​; ಒಂದೇ ವಾರದಲ್ಲಿ ಡಬಲ್​ ಸಂಕಟ

ಶಾರುಖ್​ ಖಾನ್​ ನಟನೆಯ ‘ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡು ಅಶ್ಲೀಲವಾಗಿದೆ ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ. ಈ ಬಗ್ಗೆ ಕೆಲವು ದಿನಗಳ ಹಿಂದೆ ವಿವೇಕ್​ ಅಗ್ನಿಹೋತ್ರಿ ಕೂಡ ಟ್ವೀಟ್​ ಮಾಡಿದ್ದರು. ಹಾಗಾಗಿ ಅವರ ವಿರುದ್ಧ ಶಾರುಖ್​ ಖಾನ್​ ಫ್ಯಾನ್ಸ್​ ಗರಂ ಆಗಿದ್ದಾರೆ. ಕೆಲವರಂತೂ ಜೀವ ಬೆದರಿಕೆ ಹಾಕಿದ್ದಾರೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾರೆ. ಅವರ ಸ್ಕ್ರೀನ್​ ಶಾಟ್​ಗಳನ್ನು ವಿವೇಕ್​ ಅಗ್ನಿಹೋತ್ರಿ ಅವರು ಇತ್ತೀಚೆಗೆ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದರು. ಅದರ ಕುರಿತು ಈಗ ಕಮಾಲ್​ ಆರ್​. ಖಾನ್​ ಟ್ವೀಟ್​ ಮಾಡಿದ್ದಾರೆ.

‘ನನ್ನ ಸ್ನೇಹಿತ ವಿವೇಕ್​ ಅಗ್ನಿಹೋತ್ರಿ ಅವರು ಪಠಾಣ್​ ಚಿತ್ರದ ವಿವಾದದಿಂದ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಕೆಲವರ ಮೆಸೇಜ್​ಗಳನ್ನು ಅವರು ಶೇರ್​ ಮಾಡುತ್ತಿದ್ದಾರೆ. ನನಗೂ ಪ್ರತಿದಿನ ಬೆದರಿಕೆ ಸಂದೇಶಗಳು ಬರುತ್ತವೆ. ಆದರೆ ನಾನು ಅದನ್ನು ಶೇರ್​ ಮಾಡಲ್ಲ. ಟ್ವಿಟರ್​ನಲ್ಲಿ ಮೆಸೇಜ್​ ಮಾಡಲು ವಿವೇಕ್​ ಯಾಕೆ ಅವಕಾಶ ನೀಡಬೇಕು’ ಎಂದು ಕಮಾಲ್​ ಆರ್​. ಖಾನ್​ ಟ್ವಿಟರ್​ನಲ್ಲಿ ಪ್ರಶ್ನಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:26 pm, Tue, 3 January 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ