AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aamir Khan: ‘ನನಗೆ ಭಾರತ ಇಷ್ಟವಿಲ್ಲ ಅನ್ನೋದು ಸುಳ್ಳು, ನನ್ನ ಸಿನಿಮಾ ಬಹಿಷ್ಕಾರ ಮಾಡಬೇಡಿ ಪ್ಲೀಸ್​’: ಆಮಿರ್​ ಖಾನ್​

Laal Singh Chaddha: ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಆಗಸ್ಟ್​ 11ರಂದು ಬಿಡುಗಡೆ ಆಗುತ್ತಿದೆ. ಆದರೆ Boycott Lal Singh Chaddha ಎಂದು ಸೋಶಿಯಲ್​ ಮೀಡಿಯಾದಲ್ಲಿ ಆಮಿರ್​ ಖಾನ್​ ವಿರುದ್ಧ ಅಭಿಯಾನ ಮಾಡಲಾಗುತ್ತಿದೆ.

Aamir Khan: ‘ನನಗೆ ಭಾರತ ಇಷ್ಟವಿಲ್ಲ ಅನ್ನೋದು ಸುಳ್ಳು, ನನ್ನ ಸಿನಿಮಾ ಬಹಿಷ್ಕಾರ ಮಾಡಬೇಡಿ ಪ್ಲೀಸ್​’: ಆಮಿರ್​ ಖಾನ್​
ಆಮಿರ್ ಖಾನ್
TV9 Web
| Edited By: |

Updated on:Aug 02, 2022 | 9:39 AM

Share

ನಟ ಆಮಿರ್​ ಖಾನ್​ (Aamir Khan) ಅವರು ಏನೇ ಮಾಡಿದರೂ ಒಂದು ವರ್ಗದ ನೆಟ್ಟಿಗರು ತಕರಾರು ತೆಗೆಯುತ್ತಾರೆ. ಅವರ ಸಿನಿಮಾಗಳನ್ನು ಬಹಿಷ್ಕರಿಸಬೇಕು ಎಂದು ಅನೇಕರು ಒತ್ತಾಯ ಮಾಡುತ್ತಾರೆ. ಅದರ ಬಿಸಿ ಈಗಾಗಲೇ ಆಮಿರ್​ ಖಾನ್​ ಸಿನಿಮಾಗಳ ಮೇಲೆ ತಟ್ಟಿದೆ. 2018ರಲ್ಲಿ ತೆರೆಕಂಡ ‘ಥಗ್ಸ್​ ಆಫ್​ ಹಿಂದುಸ್ತಾನ್​’ ಸಿನಿಮಾ ಸೋಲುಂಡಿತು. ಈಗ ಅವರ ‘ಲಾಲ್​ ಸಿಂಗ್​ ಚಡ್ಡಾ’(Laal Singh Chaddha)  ಚಿತ್ರಕ್ಕೂ ಬಹಿಷ್ಕಾರದ ಭಯ ಕಾಡುತ್ತಿದೆ. ಈ ಸಂದರ್ಭದಲ್ಲಿ ಆಮಿರ್ ಖಾನ್​ ಅವರು ಜನರ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ‘ದಯವಿಟ್ಟು ನನ್ನ ಸಿನಿಮಾ ನೋಡಿ. ಪ್ಲೀಸ್​.. ಬಹಿಷ್ಕಾರ (Boycott) ಮಾಡಬೇಡಿ’ ಎಂದು ಅವರು ಹೇಳಿದ್ದಾರೆ. ಸಿನಿಮಾ ಪ್ರಚಾರದ ಸಲುವಾಗಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಆಮಿರ್​ ಖಾನ್​ ಈ ಮಾತು ಹಂಚಿಕೊಂಡಿದ್ದಾರೆ.

‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಆಗಸ್ಟ್​ 11ರಂದು ಬಿಡುಗಡೆ ಆಗುತ್ತಿದೆ. ವಿಶೇಷ ಗೆಟಪ್​ನಲ್ಲಿ ಆಮಿರ್ ಖಾನ್​ ಕಾಣಿಸಿಕೊಳ್ಳಲಿದ್ದಾರೆ. Boycott Lal Singh Chaddha ಎಂದು ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ಮಾಡಲಾಗುತ್ತಿದೆ. ಇದಕ್ಕೆಲ್ಲ ಕಾರಣ ಆಗಿರುವುದು ಆಮಿರ್​ ಖಾನ್​ ಅವರ ‘ಅಸಹಿಷ್ಣುತೆ’ ಹೇಳಿಕೆ. ಭಾರತದಲ್ಲಿ ಅಸಹಿಷ್ಣುತೆ ಹೆಚ್ಚಾಗಿದೆ ಎಂದು ಈ ಹಿಂದೆ ಅವರು ಹೇಳಿದ್ದನ್ನು ಜನರು ಈಗಲೂ ಮರೆತಿಲ್ಲ. ಹಾಗಾಗಿ ಅವರ ಸಿನಿಮಾಗಳನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಆಮಿರ್​ ಖಾನ್​ ಪ್ರತಿಕ್ರಿಯಿಸಿದ್ದಾರೆ.

‘ಅನಗತ್ಯವಾಗಿ ನನ್ನ ಬಗ್ಗೆ ದ್ವೇಷ ಹಬ್ಬಿಸುತ್ತಿರುವುದರಿಂದ ನನಗೆ ಬೇಸರ ಆಗುತ್ತದೆ. ನಾನು ಭಾರತವನ್ನು ಇಷ್ಟಪಡುವ ವ್ಯಕ್ತಿ ಅಲ್ಲ ಎಂದು ಕೆಲವರು ನಂಬಿದ್ದಾರೆ. ಆದರೆ ಅದು ನಿಜವಲ್ಲ. ಜನರು ಹಾಗೆ ಅಂದುಕೊಂಡಿರುವುದು ದುರದೃಷ್ಟಕರ. ದಯವಿಟ್ಟು ನನ್ನ ಸಿನಿಮಾಗಳನ್ನು ನೋಡಿ. ಬಹಿಷ್ಕಾರ ಮಾಡಬೇಡಿ’ ಎಂದು ಆಮಿರ್​ ಖಾನ್​ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ
Image
‘ಕೆಜಿಎಫ್ 2’ ಎದುರು ಬರದೆ ನಾವು ಬದುಕಿದೆವು; ಆಮಿರ್ ಖಾನ್​ಗೂ ಭಯ ಹುಟ್ಟಿಸಿದ್ದ ಯಶ್ ಚಿತ್ರದ ಅಬ್ಬರ
Image
ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?
Image
ಹಾಲಿವುಡ್​ನ ಚಾಕೊಲೇಟ್​ ತಂದು ಬಾಲಿವುಡ್​ನಲ್ಲಿ ಗೋಲ್​ಗಪ್ಪ ಮಾಡಿದ ಆಮಿರ್​ ಖಾನ್​; ಸಖತ್​ ಟ್ರೋಲ್​
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ

ಹಾಲಿವುಡ್​ನ ‘ಫಾರೆಸ್ಟ್​ ಗಂಪ್​’ ಚಿತ್ರದ ಹಿಂದಿ ರಿಮೇಕ್​ ಆಗಿ ‘ಲಾಲ್ ಸಿಂಗ್​ ಚಡ್ಡಾ’ ಮೂಡಿಬಂದಿದೆ. ಈ ಚಿತ್ರದಲ್ಲಿ ಆಮಿರ್ ಖಾನ್​ ಹಲವು ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ಜೋಡಿಯಾಗಿ ಕರೀನಾ ಕಪೂರ್ ನಟಿಸಿದ್ದಾರೆ. ಒಂದು ಅತಿಥಿ ಪಾತ್ರದಲ್ಲಿ ಟಾಲಿವುಡ್​ ನಟ ನಾಗ ಚೈತನ್ಯ ಅಭಿನಯಿಸಿದ್ದಾರೆ. ಅದ್ವೈತ್​ ಚಂದನ್​ ನಿರ್ದೇಶನ ಮಾಡಿದ್ದಾರೆ.

Published On - 7:34 am, Tue, 2 August 22

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್