Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ, ಚಿರಂಜೀವಿಗೆ ‘ಲಾಲ್ ಸಿಂಗ್ ಚಡ್ಡಾ’ ಸ್ಪೆಷಲ್ ಶೋ; ಸ್ಟಾರ್​ಗಳ ಪ್ರತಿಕ್ರಿಯೆ ನೋಡಿ ಕಣ್ಣೀರಿಟ್ಟ ಆಮಿರ್ ಖಾನ್

ನಾಗ ಚೈತನ್ಯ, ನಾಗಾರ್ಜುನ, ನಿರ್ದೇಶಕ ಎಸ್​.ಎಸ್.​ ರಾಜಮೌಳಿ, ಚಿರಂಜೀವಿ, ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಈ ಸ್ಪೆಷಲ್ ಶೋನಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಆಮಿರ್ ಖಾನ್ ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.

ರಾಜಮೌಳಿ, ಚಿರಂಜೀವಿಗೆ ‘ಲಾಲ್ ಸಿಂಗ್ ಚಡ್ಡಾ’ ಸ್ಪೆಷಲ್ ಶೋ; ಸ್ಟಾರ್​ಗಳ ಪ್ರತಿಕ್ರಿಯೆ ನೋಡಿ ಕಣ್ಣೀರಿಟ್ಟ ಆಮಿರ್ ಖಾನ್
ಆಮಿರ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 16, 2022 | 3:08 PM

ನಟ ಆಮಿರ್ ಖಾನ್ (Aamir Khan) ಅವರು ಬಾಲಿವುಡ್​ನಲ್ಲಿ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ಅವರು ಸಿನಿಮಾದಿಂದ ಸಿನಿಮಾಗೆ ಭಿನ್ನ ಪಾತ್ರಗಳ ಆಯ್ಕೆ ಮಾಡಿಕೊಳ್ಳುತ್ತಾರೆ. ಪ್ರತಿ ಚಿತ್ರಕ್ಕೆ ಸಾಕಷ್ಟು ಶ್ರಮ ಹಾಕುತ್ತಾರೆ. ಈಗ ಅವರ ನಟನೆಯ ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾ ತೆರೆಗೆ ಬರಲು ರೆಡಿ ಇದೆ. ಹಾಲಿವುಡ್​ನ ‘ಫಾರೆಸ್ಟ್ ಗಂಪ್’  (Forrest Gump) ಚಿತ್ರದ ರಿಮೇಕ್ ಇದಾಗಿದೆ. ತುಂಬಾನೇ ಇಷ್ಟಪಟ್ಟು ಆಮಿರ್ ಖಾನ್ ಅವರು ಈ ಚಿತ್ರವನ್ನು ರಿಮೇಕ್ ಮಾಡಿದ್ದಾರೆ. ಈಗ ಈ ಚಿತ್ರ ತೆರೆಗೆ ಬರುವುದಕ್ಕೂ ಮೊದಲು ಸೆಲೆಬ್ರಿಟಿಗಳಿಗೋಸ್ಕರ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಸ್ಟಾರ್​ಗಳು ನೀಡಿದ ಪ್ರತಿಕ್ರಿಯೆ ನೋಡಿ ಆಮಿರ್ ಖಾನ್ ಅತ್ತಿದ್ದಾರೆ.

‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ಟಾಲಿವುಡ್ ನಟ ನಾಗ ಚೈತನ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಆಮಿರ್ ಖಾನ್​ಗೂ ದಕ್ಷಿಣದ ಚಿತ್ರರಂಗಕ್ಕೂ ಇರುವ ನಂಟು ಮತ್ತಷ್ಟು ಗಟ್ಟಿ ಆಗಿದೆ. ನಾಗ ಚೈತನ್ಯ ಅವರ ‘ಲವ್ ಸ್ಟೋರಿ’ ಸಿನಿಮಾ ರಿಲೀಸ್​ಗೂ ಮೊದಲು ಆಯೋಜಿಸಿದ ಪ್ರೀ-ರಿಲೀಸ್ ಇವೆಂಟ್​ಗೆ ಆಮಿರ್ ಖಾನ್ ಮುಖ್ಯ ಅತಿಥಿ ಆಗಿ ಆಗಮಿಸಿದ್ದರು. ಈಗ ದಕ್ಷಿಣದ ಸ್ಟಾರ್​ಗಳಿಗೆ ಆಮಿರ್ ಖಾನ್ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ
Image
ಬಾಯ್​ಫ್ರೆಂಡ್​ ಜತೆ ಇರಾ ಖಾನ್​ ಬರ್ತ್​​ಡೇ ಆಚರಣೆ​; ಮತ್ತಷ್ಟು ಫೋಟೋ ಹಂಚಿಕೊಂಡ ಆಮಿರ್ ಮಗಳು  
Image
ನಟನೆಗೆ ವಿದಾಯ ಹೇಳಲು ಆಮಿರ್​ ಖಾನ್​ ನಿರ್ಧಾರ ಮಾಡಿದ್ದ ಸಂಗತಿ ಬಯಲು; ಮಾಜಿ ಪತ್ನಿ ಏನು ಹೇಳಿದ್ರು?
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​

ನಾಗ ಚೈತನ್ಯ, ನಾಗಾರ್ಜುನ, ನಿರ್ದೇಶಕ ಎಸ್​.ಎಸ್.​ ರಾಜಮೌಳಿ, ಚಿರಂಜೀವಿ, ‘ಪುಷ್ಪ’ ನಿರ್ದೇಶಕ ಸುಕುಮಾರ್ ಅವರು ಈ ಸ್ಪೆಷಲ್ ಶೋನಲ್ಲಿ ಪಾಲ್ಗೊಂಡಿದ್ದರು. ಈ ಸಿನಿಮಾ ನೋಡಿದ ನಂತರದಲ್ಲಿ ಚಿರಂಜೀವಿ ಅವರು ಆಮಿರ್ ಖಾನ್ ಅವರನ್ನು ತಬ್ಬಿಕೊಂಡಿದ್ದಾರೆ. ಈ ವೇಳೆ ಆಮಿರ್ ಖಾನ್ ಸಂತೋಷದಿಂದ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಮಗಳಿ​ಗೆ ನಿರಂತರವಾಗಿ ಕಾಡುತ್ತಿದೆ ಈ ಸಮಸ್ಯೆ; ಹೊರ ಬರಲು ದಾರಿ ಕಾಣದೆ ಒದ್ದಾಡುತ್ತಿದ್ದಾರೆ ಇರಾ

‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದ ಕೆಲಸ ಆರಂಭಗೊಂಡು ಹಲವು ವರ್ಷಗಳೇ ಕಳೆದಿವೆ. ಕೊವಿಡ್ ಕಾರಣದಿಂದ ಸಿನಿಮಾ ರಿಲೀಸ್ ದಿನಾಂಕ ಸಾಕಷ್ಟು ಬಾರಿ ಮುಂದೂಡಲ್ಪಟ್ಟಿದೆ. ಈಗ ಆಗಸ್ಟ್​ 11ರಂದು ಈ ಚಿತ್ರ ಬಿಡುಗಡೆ ಆಗುತ್ತಿದೆ. ಕರೀನಾ ಕಪೂರ್ ಅವರು ಈ ಚಿತ್ರಕ್ಕೆ ನಾಯಕಿ. ಇದೇ ದಿನ ಅಕ್ಷಯ್ ಕುಮಾರ್ ನಟನೆಯ ‘ರಕ್ಷಾ ಬಂಧನ್’ ಸಿನಿಮಾ ತೆರೆಗೆ ಬರುತ್ತಿದೆ. ಹೀಗಾಗಿ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಕ್ಲ್ಯಾಶ್ ಏರ್ಪಡುತ್ತಿದೆ.

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ