ಆಸ್ಕರ್ ಎಂಟ್ರಿ ಬಳಿಕ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್ ರಾವ್​ ಮೊದಲ ಪ್ರತಿಕ್ರಿಯೆ ಏನು?

ಆಮಿರ್​ ಖಾನ್​ ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾಗೆ ಕಿರಣ್​ ರಾವ್​ ನಿರ್ದೇಶನ ಮಾಡಿದ್ದಾರೆ. ಭಾರತದಲ್ಲಿ ಹಲವರ ಮೆಚ್ಚುಗೆಗೆ ಪಾತ್ರವಾದ ಈ ಸಿನಿಮಾ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದೆ. 2025ನೇ ಸಾಲಿನ ಆಸ್ಕರ್​ ಪ್ರಶಸ್ತಿ (ಅಕಾಡೆಮಿ ಅವಾರ್ಡ್ಸ್​) ಸ್ಪರ್ಧೆಗೆ ಈ ಸಿನಿಮಾ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.

ಆಸ್ಕರ್ ಎಂಟ್ರಿ ಬಳಿಕ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್ ರಾವ್​ ಮೊದಲ ಪ್ರತಿಕ್ರಿಯೆ ಏನು?
‘ಲಾಪತಾ ಲೇಡೀಸ್​’ ಸಿನಿಮಾ ಪೋಸ್ಟರ್​, ಕಿರಣ್​ ರಾವ್​
Follow us
ಮದನ್​ ಕುಮಾರ್​
|

Updated on: Sep 23, 2024 | 3:15 PM

2025ರ ಸಾಲಿನ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ‘ಲಾಪತಾ ಲೇಡೀಸ್​’ ಸಿನಿಮಾ ಅಧಿಕೃತವಾಗಿ ಆಯ್ಕೆ ಆಗಿದೆ. ಈ ಸಿನಿಮಾಗೆ ನಿರ್ದೇಶಕಿ ಕಿರಣ್ ರಾವ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಆಮಿರ್​ ಖಾನ್​ ನಿರ್ಮಾಣ ಮಾಡಿದ್ದು, ಪ್ರೇಕ್ಷಕರಿಂ ಮೆಚ್ಚುಗೆ ಗಳಿಸಿದೆ. ಈ ವರ್ಷ ಮಾರ್ಚ್​ 1ರಂದು ತೆರೆಕಂಡ ಈ ಚಿತ್ರದಲ್ಲಿ ಸ್ಪರ್ಶ್​ ಶ್ರೀವಾಸ್ತವ್, ನಿತಾಂಶಿ ಗೋಯಲ್​, ಪ್ರತಿಭಾ ರಂಟಾ, ರವಿ ಕಿಶನ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಆಸ್ಕರ್​ ಸ್ಪರ್ಧೆಗೆ ಆಯ್ಕೆ ಆಗಿರುವುದಕ್ಕೆ ‘ಲಾಪತಾ ಲೇಡೀಸ್​’ ನಿರ್ದೇಶಕಿ ಕಿರಣ್​ ರಾವ್​ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಕಿರಣ್​ ರಾವ್​ ನಿರ್ದೇಶಿಸಿದ ಎರಡನೇ ಸಿನಿಮಾ ‘ಲಾಪತಾ ಲೇಡೀಸ್​’. ಅದಕ್ಕೂ ಮುನ್ನ ಅವರು ‘ಗೋಬಿ ಘಾಟ್’ ಸಿನಿಮಾವನ್ನು ನಿರ್ದೇಶಿಸಿದ್ದರು. ‘ಲಾಪತಾ ಲೇಡೀಸ್​’ ಸಿನಿಮಾಗೆ ಪ್ರೇಕ್ಷಕರು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಭೇಷ್​ ಎಂದಿದ್ದಾರೆ. ಈಗ ಆಸ್ಕರ್​ಗೂ ಆಯ್ಕೆ ಆಗಿರುವುದರಿಂದ ಚಿತ್ರತಂಡಕ್ಕೆ ಸಖತ್​ ಖುಷಿ ಆಗಿದೆ. ಈ ಹಿನ್ನೆಲೆಯಲ್ಲಿ ಅನೇಕರಿಗೆ ಕಿರಣ್ ರಾವ್​ ಧನ್ಯವಾದ ಸಲ್ಲಿಸಿದ್ದಾರೆ.

‘ನಮ್ಮ ಸಿನಿಮಾ ಆಸ್ಕರ್​ ಸ್ಪರ್ಧೆಗೆ ಆಯ್ಕೆ ಆಗಿರುವುದು ಇಡೀ ತಂಡದ ಪರಿಶ್ರಮ ಮತ್ತು ಪ್ಯಾಷನ್​ಗೆ ಸಾಕ್ಷಿಯಾಗಿದೆ. ಸಿನಿಮಾ ಎಂಬುದು ಯಾವಾಗಲೂ ಹೃದಯಗಳನ್ನು ಬೆಸೆಯುವ, ಅರ್ಥಪೂರ್ಣ ಸಂವಹನ ನೆಡೆಸುವ ಹಾಗೂ ಗಡಿಗಳನ್ನು ಮೀರುವ ಮಾಧ್ಯಮವಾಗಿದೆ. ಭಾರತೀಯರಿಗೆ ಇಷ್ಟ ಆದ ರೀತಿಯೇ ಜಗತ್ತಿನಾದ್ಯಂತ ಇರುವ ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟ ಆಗಲಿದೆ ಅಂತ ನಾನು ನಂಬಿದ್ದೇನೆ’ ಎಂದಿದ್ದಾರೆ ಕಿರಣ್​ ರಾವ್​.

‘ಲಾಪತಾ ಲೇಡೀಸ್​ ಸಿನಿಮಾ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಮತ್ತು ಆಯ್ಕೆ ಸಮಿತಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ವರ್ಷದ ಹಲವು ಅತ್ಯುತ್ತಮ ಸಿನಿಮಾಗಳ ನಡುವೆ ನಮ್ಮ ಸಿನಿಮಾ ಆಯ್ಕೆ ಆಗಿದ್ದು ಅತ್ಯಂತ ಹೆಮ್ಮೆಯ ವಿಷಯ. ಉಳಿದ ಸಿನಿಮಾಗಳು ಕೂಡ ಅಷ್ಟೇ ಸಮರ್ಥವಾಗಿವೆ’ ಎಂದು ಕಿರಣ್ ರಾವ್​ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Laapataa Ladies Review: ಈ ಕಾಲಕ್ಕೆ ಬೇಕಾದ ಮಹತ್ವಪೂರ್ಣ ಸಿನಿಮಾ ‘ಲಾಪತಾ ಲೇಡೀಸ್’

‘ನಮಗೆ ಬೆಂಬಲ ನೀಡಿದ ಆಮಿರ್​ ಖಾನ್​ ಪ್ರೊಡಕ್ಷನ್ಸ್ ಮತ್ತು ಜಿಯೋ ಸ್ಟುಡಿಯೋಸ್​ ಸಂಸ್ಥೆಗಳಿಗೆ ಧನ್ಯವಾದಗಳು. ಪ್ರತಿಭಾವಂತ ತಂತ್ರಜ್ಞರ ಜೊತೆ ಕೆಲಸ ಮಾಡಿದ್ದು ನಮ್ಮ ಪಾಲಿನ ಹಿರಿಮೆ. ಈ ಸಿನಿಮಾ ನಿರ್ಮಾಣವಾಗಲು ಕಾರಣರಾದ ಎಲ್ಲ ಕಲಾವಿದರು ಮತ್ತು ತಂತ್ರಜ್ಞರ ತಂಡಕ್ಕೆ ಕೂಡ ನಾನು ಧನ್ಯವಾದ ತಿಳಿಸುತ್ತೇನೆ. ಇದು ಮರೆಯಲಾಗದ ಜರ್ನಿ ಆಗಿತ್ತು’ ಎಂದು ಕಿರಣ್ ರಾವ್​ ಹೇಳಿದ್ದಾರೆ. ಅಲ್ಲದೇ, ಸಿನಿಮಾಗೆ ಪ್ರೀತಿ ಮತ್ತು ಬೆಂಬಲ ತೋರಿದ ಪ್ರೇಕ್ಷಕರಿಗೂ ಅವರು ಧನ್ಯವಾದ ಅರ್ಪಿಸಿದ್ದಾರೆ. ‘ನೆಟ್​ಫ್ಲಿಕ್ಸ್​’ ಒಟಿಟಿಯಲ್ಲಿ ಈ ಸಿನಿಮಾ ಲಭ್ಯವಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Daily Devotional: ಮಾಂಗಲ್ಯ ಸರ ತುಂಡಾದರೆ ಏನು ಮಾಡಬೇಕು? ವಿಡಿಯೋ ನೋಡಿ
Weekly horoscope: ಡಿಸೆಂಬರ್ 30 ರಿಂದ ಜನವರಿ 5ರವರೆಗಿನ ವಾರ ಭವಿಷ್ಯ
Weekly horoscope: ಡಿಸೆಂಬರ್ 30 ರಿಂದ ಜನವರಿ 5ರವರೆಗಿನ ವಾರ ಭವಿಷ್ಯ