AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್​ನಲ್ಲಿ ‘ಲಾಪತಾ ಲೇಡೀಸ್​’ ಪ್ರದರ್ಶನ; ಆಮಿರ್​ ಖಾನ್​, ಕಿರಣ್​ ರಾವ್​ಗೆ ಗೌರವ

ಆಮಿರ್​ ಖಾನ್​ ನಿರ್ಮಿಸಿ, ಕಿರಣ್ ರಾವ್​ ನಿರ್ದೇಶನ ಮಾಡಿದ ‘ಲಾಪತಾ ಲೇಡೀಸ್’ ಸಿನಿಮಾ ಈಗ ಸುಪ್ರೀಂ ಕೋರ್ಟ್​ ಗಮನವನ್ನು ಸೆಳೆದಿದೆ. ಜಡ್ಜ್​ಗಳಿಗಾಗಿ ಈ ಸಿನಿಮಾ ಪ್ರದರ್ಶನ ಮಾಡಲಾಗುತ್ತಿದೆ. ಅವರ ಕುಟುಂಬದವರು ಕೂಡ ಸಿನಿಮಾ ವೀಕ್ಷಿಸಲಿದ್ದಾರೆ. ಸುಪ್ರೀಂ ಕೋರ್ಟ್​ನಲ್ಲಿ ಆಯೋಜನೆಗೊಂಡ ಸಿನಿಮಾ ಪ್ರದರ್ಶನಕ್ಕೆ ಆಮಿರ್​ ಖಾನ್​ ಹಾಜರಾಗಿದ್ದಾರೆ.

ಸುಪ್ರೀಂ ಕೋರ್ಟ್​ನಲ್ಲಿ ‘ಲಾಪತಾ ಲೇಡೀಸ್​’ ಪ್ರದರ್ಶನ; ಆಮಿರ್​ ಖಾನ್​, ಕಿರಣ್​ ರಾವ್​ಗೆ ಗೌರವ
ಲಾಪತಾ ಲೇಡೀಸ್​, ಸುಪ್ರೀಂ ಕೋರ್ಟ್​, ಆಮಿರ್​ ಖಾನ್​
ಮದನ್​ ಕುಮಾರ್​
|

Updated on: Aug 09, 2024 | 4:24 PM

Share

ನಟ ಆಮಿರ್​ ಖಾನ್​ ಅವರು ನಿರ್ಮಾಪಕನಾಗಿ ಸಾಮಾಜಿಕ ಕಳಜಳಿ ಇರುವಂತಹ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಈ ವರ್ಷ ಅವರು ನಿರ್ಮಾಣ ಮಾಡಿದ ‘ಲಾಪತಾ ಲೇಡೀಸ್​’ ಸಿನಿಮಾ ಉತ್ತಮ ವಿಮರ್ಶೆ ಪಡೆದುಕೊಂಡಿತು. ಈ ಸಿನಿಮಾಗೆ ಆಮಿರ್​ ಖಾನ್​ ಅವರ ಮಾಜಿ ಪತ್ನಿ ಕಿರಣ್​ ರಾವ್​ ನಿರ್ದೇಶನ ಮಾಡಿದ್ದಾರೆ. ಹೊಸ ಕಲಾವಿದರು ಮುಖ್ಯಭೂಮಿಕೆ ನಿಭಾಯಿಸಿರುವ ‘ಲಾಪತಾ ಲೇಡೀಸ್​’ ಸಿನಿಮಾಗೆ ಈಗ ಇನ್ನೊಂದು ವಿಶೇಷ ಗೌರವ ಸಿಗುತ್ತಿದೆ. ಸುಪ್ರೀಂ ಕೋರ್ಟ್​ನಲ್ಲಿ ಇಂದು (ಆಗಸ್ಟ್​ 9) ಈ ಸಿನಿಮಾ ಪ್ರದರ್ಶನ ಕಾಣುತ್ತಿದೆ!

ಲಿಂಗ ಸಮಾನತೆ ಬಗ್ಗೆ ‘ಲಾಪತಾ ಲೇಡೀಸ್​’ ಸಿನಿಮಾದಲ್ಲಿ ಹೇಳಲಾಗಿದೆ. ವಿಮರ್ಶಕರು ಈ ಸಿನಿಮಾಗೆ ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಚಿತ್ರಮಂದಿರದಲ್ಲಿ ತೆರೆಕಂಡ ಬಳಿಕ ಒಟಿಟಿಯಲ್ಲಿ ಬಿಡುಗಡೆಯಾಗಿಯೂ ಈ ಸಿನಿಮಾ ಹೆಚ್ಚು ಜನರನ್ನು ತಲುಪಿತು. ಅನೇಕ ಸೆಲೆಬ್ರಿಟಿಗಳು ‘ಲಾಪತಾ ಲೇಡೀಸ್​’ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಈಗ ಸುಪ್ರೀಂ ಕೋರ್ಟ್​ನಲ್ಲಿ ಪ್ರದರ್ಶನ ಕಾಣುತ್ತಿರುವುದು ವಿಶೇಷ.

ಸುಪ್ರೀಂ ಕೋರ್ಟ್​ ಜಡ್ಜ್​ಗಳಿಗಾಗಿ, ಅವರ ಕುಟುಂಬದವರಿಗಾಗಿ, ಅಧಿಕಾರಿಗಳಿಗಾಗಿ ‘ಲಾಪತಾ ಲೇಡೀಸ್​’ ಸಿನಿಮಾವನ್ನು ಪ್ರದರ್ಶನ ಮಾಡಲಾಗುತ್ತಿದೆ. ಇದರಲ್ಲಿ ಆಮಿರ್ ಖಾನ್​ ಮತ್ತು ಕಿರಣ್​ ರಾವ್​ ಅವರು ಭಾಗಿ ಆಗಿದ್ದಾರೆ. ಸುಪ್ರೀಂ ಕೋರ್ಟ್​ನ 75ನೇ ವಾರ್ಷಿಕೋತ್ಸವದ ಸಲುವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ‘ಲಾಪತಾ ಲೇಡೀಸ್​’ ಸಿನಿಮಾ ಪ್ರದರ್ಶನ ಆಗುತ್ತಿದೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ ಒನ್​ ಆಯ್ತು ‘ಲಾಪತಾ ಲೇಡೀಸ್​’ ಸಿನಿಮಾ

ಶುಕ್ರವಾರ (ಆಗಸ್ಟ್ 9) ಸಂಜೆ 4.15ರಿಂದ 6.20ರ ತನಕ ಸುಪ್ರೀಂ ಕೋರ್ಟ್​ನ ಸಿ-ಬ್ಲಾಕ್​ ಆಡಿಟೋರಿಯಂನಲ್ಲಿ ‘ಲಾಪತಾ ಲೇಡೀಸ್​’ ಸಿನಿಮಾ ಪ್ರದರ್ಶನ ನಡೆಯುತ್ತಿದೆ. ಸಿನಿಮಾ ನೋಡಿದ ಬಳಿಕ ಜಡ್ಜ್​ಗಳು ಯಾವ ರೀತಿ ಅಭಿಪ್ರಾಯ ತಿಳಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಈ ಸಿನಿಮಾವನ್ನು ಆಯ್ಕೆ ಮಾಡಿದ್ದರಿಂದ ಆಮಿರ್​ ಖಾನ್, ಕಿರಣ್​ ರಾವ್​ ಅವರಿಗೆ ದೊಡ್ಡ ಗೌರವ ಸಿಕ್ಕಂತೆ ಆಗಿದೆ. ಈ ಸಿನಿಮಾದಲ್ಲಿ ನಿತಾಂಷಿ ಘೋಯಲ್​, ಸ್ಪರ್ಶ್​ ಶ್ರೀವಾಸ್ತವ್, ಪ್ರತಿಭಾ ರಂಟಾ, ರವಿ ಕಿಶನ್​, ಛಾಯಾ ಕದಂ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್