AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕ್ಷಯ್ ಕುಮಾರ್ ನನ್ನ ಹಾಗೂ ಪ್ರಿಯಾಂಕಾನ ಅಣ್ಣನಂತೆ ರಕ್ಷಿಸಿದ್ರು ’

ನಟಿ ಲಾರಾ ದತ್ತಾ ಅವರು 'ಅಂದಾಜ್' ಚಿತ್ರದ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದಾಗ, ಅಕ್ಷಯ್ ಕುಮಾರ್ ಅವರಿಗೆ ಮತ್ತು ಪ್ರಿಯಾಂಕಾ ಚೋಪ್ರಾ ಅವರಿಗೆ ಹೇಗೆ ಮಾರ್ಗದರ್ಶನ ನೀಡಿದರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಅಕ್ಷಯ್ ನಮ್ಮ ಅಸಹಾಯಕತೆ ಅಥವಾ ಅನನುಭವದ ಲಾಭವನ್ನು ಎಂದಿಗೂ ಪಡೆಯಲಿಲ್ಲ, ಬದಲಿಗೆ ನಮ್ಮನ್ನು ಸುರಕ್ಷಿತವಾಗಿರಿಸಿದರು ಎಂದು ಲಾರಾ ಹೇಳಿದ್ದಾರೆ.

‘ಅಕ್ಷಯ್ ಕುಮಾರ್ ನನ್ನ ಹಾಗೂ ಪ್ರಿಯಾಂಕಾನ ಅಣ್ಣನಂತೆ ರಕ್ಷಿಸಿದ್ರು ’
ಅಕ್ಷಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 13, 2026 | 10:46 AM

Share

ನಟ ಅಕ್ಷಯ್ ಕುಮಾರ್ ಅವರು ಇಂದು ಸ್ಟಾರ್ ಹೀರೋ. ಅವರಿಗೆ ಭಾರತದಲ್ಲಿ ಮಾತ್ರವಲ್ಲದೆ ಭಾರತದ ಹೊರಗೆಯೂ ತುಂಬಾ ದೊಡ್ಡ ಅಭಿಮಾನಿ ಬಳಗ ಇದೆ. 2003ರ ವರ್ಷ ನಟನಿಗೆ ಮಾತ್ರವಲ್ಲದೆ ಚಿತ್ರರಂಗಕ್ಕೂ ಬಹಳ ವಿಶೇಷವಾಗಿತ್ತು. ಏಕೆಂದರೆ ಈ ವರ್ಷ, ನಟಿಯರಾದ ಲಾರಾ ದತ್ ಮತ್ತು ಪ್ರಿಯಾಂಕಾ ಚೋಪ್ರಾ ‘ಅಂದಾಜ್’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಇತ್ತೀಚಿನ ಸಂದರ್ಶನವೊಂದರಲ್ಲಿ, ಲಾರಾ ಅವರು ಅಕ್ಷಯ್ ಕುಮಾರ್ ಬಗ್ಗೆ ಮಾತನಾಡಿದ್ದಾರೆ.

‘ಪ್ರಿಯಾಂಕಾ ಮತ್ತು ನಾನು ಒಟ್ಟಿಗೆ ಚಿತ್ರರಂಗಕ್ಕೆ ಬಂದೆವು. ಆಗ ನಾವಿಬ್ಬರೂ ತುಂಬಾ ಚಿಕ್ಕವರಾಗಿದ್ದೆವು. ಆದರೆ ಕನಸು ದೊಡ್ಡದಾಗಿತ್ತು. ದರೆ ನಮಗೆ ಸರಿಯಾದ ಮಾರ್ಗವನ್ನು ತೋರಿಸಲು ಗಾಡ್‌ಫಾದರ್ ಇರಲಿಲ್ಲ. ಆದ್ದರಿಂದ ನಮ್ಮ ಲಾಭವನ್ನು ಪಡೆಯುವ ಬದಲು, ಅಕ್ಷಯ್ ಕುಮಾರ್ ನಮಗೆ ಅಣ್ಣನಂತೆ ದಾರಿ ತೋರಿಸಿದರು’ ಎಂದಿದ್ದಾರೆ ಲಾರಾ.

‘ನೀವು ಬಾಲಿವುಡ್‌ಗೆ ಹೊಸಬರಾದಾಗ, ನಿಮ್ಮನ್ನು ಸುರಕ್ಷಿತವಾಗಿರಿಸಿಕೊಳ್ಳುವುದು ತುಂಬಾ ಕಷ್ಟ. ಅಕ್ಷಯ್ ನಮ್ಮ ಅಸಹಾಯಕತೆ ಅಥವಾ ಅನನುಭವದ ಲಾಭವನ್ನು ಎಂದಿಗೂ ಪಡೆಯಲಿಲ್ಲ. ಇದಕ್ಕೆ ವಿರುದ್ಧವಾಗಿ, ನಮ್ಮ ಸುತ್ತಲಿನ ಪರಿಸರ ಸುರಕ್ಷಿತವಾಗಿರುವಂತೆ ಮತ್ತು ನಾವು ಯಾವುದೇ ರೀತಿಯಲ್ಲಿ ಶೋಷಣೆಗೆ ಒಳಗಾಗದಂತೆ ಅವರು ನೋಡಿಕೊಂಡರು’ ಎಂದು ಲಾರಾ ಅಕ್ಷಯ್ ಕುಮಾರ್ ಅವರನ್ನು ಹೊಗಳಿದರು.

ಲಾರಾ, ಅಕ್ಷಯ್ ಮತ್ತು ಪ್ರಿಯಾಂಕಾ ಬಗ್ಗೆ ಹೇಳುವುದಾದರೆ, ಈ ಮೂವರೂ ‘ಅಂದಾಜ್’ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಆ ಚಿತ್ರದಲ್ಲಿ ಲಾರಾ ಅವರು ಕಾಜಲ್ ಪಾತ್ರವನ್ನು ನಿರ್ವಹಿಸಿದರು ಮತ್ತು ಆ ಚಿತ್ರಕ್ಕಾಗಿ ನಟಿ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಸಹ ಗೆದ್ದರು.

ಇದನ್ನೂ ಓದಿ: ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್; ಹಿಗ್ಗಾಮುಗ್ಗಾ ಟ್ರೋಲ್

ಲಾರಾ ದತ್ತಾ ಬಗ್ಗೆ ಹೇಳುವುದಾದರೆ, ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದರು. ಈಗ ಅವರು ‘ರಾಮಾಯಣ’ ಮತ್ತು ‘ವೆಲ್ಕಮ್ ಟು ದಿ ಜಂಗಲ್’ ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲಾರಾ ಸಾಮಾಜಿಕ ಮಾಧ್ಯಮದಲ್ಲಿಯೂ ಯಾವಾಗಲೂ ಸಕ್ರಿಯರಾಗಿದ್ದಾರೆ. ನಟಿ ತನ್ನ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರಲು ಯಾವಾಗಲೂ ತನ್ನ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ