AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​: ಲತಾ ಮಂಗೇಶ್ಕರ್​ ನೋಡಲು ಮನೆಯವರಿಗೂ ಅನುಮತಿ ಇಲ್ಲ; ಖ್ಯಾತ ಗಾಯಕಿಯ ಹೆಲ್ತ್​ ಅಪ್​ಡೇಟ್​​

Lata Mangeshkar Health Update: ‘ಕೊವಿಡ್​ ಆದಕಾರಣ ಅಕ್ಕನನ್ನು ನೋಡಲು ನಮಗೆ ಅನುಮತಿ ಸಿಕ್ಕಿಲ್ಲ. ವೈದ್ಯರು ಮತ್ತು ನರ್ಸ್​ಗಳು ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ’ ಎಂದು ಲತಾ ಮಂಗೇಶ್ಕರ್​ ಸಹೋದರಿ ಉಷಾ ಮಂಗೇಶ್ಕರ್​ ಮಾಹಿತಿ ನೀಡಿದ್ದಾರೆ.

ಕೊವಿಡ್​: ಲತಾ ಮಂಗೇಶ್ಕರ್​ ನೋಡಲು ಮನೆಯವರಿಗೂ ಅನುಮತಿ ಇಲ್ಲ; ಖ್ಯಾತ ಗಾಯಕಿಯ ಹೆಲ್ತ್​ ಅಪ್​ಡೇಟ್​​
ಲತಾ ಮಂಗೇಶ್ಕರ್
TV9 Web
| Edited By: |

Updated on: Jan 12, 2022 | 8:43 AM

Share

ದೇಶದೆಲ್ಲೆಡೆ ಕೊರೊನಾ ವೈರಸ್​ ಹಾವಳಿ ಹೆಚ್ಚುತ್ತಿದೆ. ಒಮಿಕ್ರಾನ್​ (Omicron) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣ ಆಗಿದೆ. ಅನೇಕ ಸೆಲೆಬ್ರಿಟಿಗಳಿಗೂ ಕೊವಿಡ್​ ಪಾಸಿಟಿವ್​ ಆಗುತ್ತಿದೆ. ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar)​ ಅವರಿಗೆ ಕೊರೊನಾ ವೈರಸ್​ ತಗುಲಿದ್ದು, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಹೆಲ್ತ್​ ಅಪ್​ಡೇಟ್​ (Lata Mangeshkar Health Update) ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ಲತಾ ಮಂಗೇಶ್ಕರ್​ ಅವರಿಗೆ ಈಗ 92 ವರ್ಷ ವಯಸ್ಸು. ಹಾಗಾಗಿ ಆತಂಕ ಮನೆ ಮಾಡಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಅವರನ್ನು ನೋಡಲು ಕುಟುಂಬದವರಿಗೂ ಅನುಮತಿ ನೀಡಿಲ್ಲ ಎಂಬ ಮಾಹಿತಿ ಕೇಳಿಬಂದಿದೆ.

ಲತಾ ಮಂಗೇಶ್ಕರ್​ ಅವರಿಗೆ ಕೊವಿಡ್​ನ ಕೆಲವು ಲಕ್ಷಣಗಳು ಕಂಡುಬಂದಿವೆ. ಕಳೆದ ಎರಡು ದಿನಗಳಿಂದ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಲತಾ ಮಂಗೇಶ್ಕರ್​ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರಿಗೆ ವೈದ್ಯರು ತಿಳಿಸಿದ್ದಾರೆ. ಆದರೆ ಅವರನ್ನು ನೋಡಲು ಯಾರಿಗೂ ಅನುಮತಿ ನೀಡಿಲ್ಲ. ಅವರಿಗೆ 92 ವರ್ಷ ವಯಸ್ಸು ಆಗಿರುವ ಕಾರಣ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ.

‘ಅತ್ಯುತ್ತಮ ವೈದ್ಯರ ತಂಡ ಲತಾ ಮಂಗೇಶ್ಕರ್​ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರ ಫೈಟರ್​ ಮತ್ತು ವಿನ್ನರ್​. ಆ ರೀತಿಯಲ್ಲೇ ನಾವು ಅವರನ್ನು ನೋಡಿಕೊಂಡು ಬಂದಿರುವುದು. ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿರುವ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಲತಾ ಮಂಗೇಶ್ಕರ್​ ಕುಟುಂಬದವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಇದು ಕೊವಿಡ್​ ಆದಕಾರಣ ಅಕ್ಕನನ್ನು ನೋಡಲು ನಮಗೆ ಅನುಮತಿ ಸಿಕ್ಕಿಲ್ಲ. ವೈದ್ಯರು ಮತ್ತು ನರ್ಸ್​ಗಳು ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ. ಹೆಚ್ಚು ವಯಸ್ಸು ಆಗಿರುವ ಕಾರಣ ಇನ್ನಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗಬಹುದು ಅಂತ ವೈದ್ಯರು ಹೇಳಿದ್ದಾರೆ’ ಎಂದು ಲತಾ ಅವರ ಸಹೋದರಿ ಉಷಾ ಮಂಗೇಶ್ಕರ್​ ತಿಳಿಸಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ 70 ದಶಕಗಳ ಕಾಲ ಸಕ್ರಿಯರಾಗಿದ್ದವರು ಲತಾ ಮಂಗೇಶ್ಕರ್​. 13ನೇ ವಯಸ್ಸಿನಿಂದಲೇ ಅವರು ಗಾಯನ ಆರಂಭಿಸಿದ್ದರು. ಭಾರತ ರತ್ನ, ಪದ್ಮ ಭೂಷಣ, ಪದ್ಮ ವಿಭೂಷಣ, ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಸೇರಿದಂತೆ ನೂರಾರು ಗೌರವಗಳು ಅವರಿಗೆ ಸಂದಿವೆ. 30 ಸಾವಿರಕ್ಕೂ ಅದಿಕ ಹಾಡುಗಳಿಗೆ ಲತಾ ಧ್ವನಿ ಆಗಿದ್ದಾರೆ. ವಿಶ್ವಾದ್ಯಂತ ಅವರು ಅಭಿಮಾನಿಗಳನ್ನು ಹೊಂದಿದ್ದಾರೆ. ಲತಾ ಮಂಗೇಶ್ಕರ್​ ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ:

ಲತಾ ಮಂಗೇಶ್ಕರ್ ಫೇಮಸ್​ ಆಗುವುದಕ್ಕೂ ಮುನ್ನವೇ ಭವಿಷ್ಯ ನುಡಿದಿದ್ದರು ಪಾಕ್​ ಗಾಯಕಿ ನೂರ್​ ಜಹಾನ್

92ನೇ ವಸಂತಕ್ಕೆ ಕಾಲಿಟ್ಟ ‘ಭಾರತ ರತ್ನ’ ಲತಾ ಮಂಗೇಶ್ಕರ್; ಇಲ್ಲಿವೆ ಅಪರೂಪದ ಚಿತ್ರಗಳು

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?