AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ; ವೈದ್ಯರು ಹೇಳಿದ್ದೇನು? ಇಲ್ಲಿದೆ ಮಾಹಿತಿ

Lata Mangeshkar Health Update: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ತುಸು ಸುಧಾರಣೆಯಾಗಿದೆ. ಈ ಕುರಿತು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಪ್ರತಿತ್ ಸಮ್ದಾನಿ ಎಎನ್​ಐಗೆ ಮಾಹಿತಿ ನೀಡಿದ್ದಾರೆ.

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಸುಧಾರಣೆ; ವೈದ್ಯರು ಹೇಳಿದ್ದೇನು? ಇಲ್ಲಿದೆ ಮಾಹಿತಿ
ಲತಾ ಮಂಗೇಶ್ಕರ್​
TV9 Web
| Updated By: shivaprasad.hs|

Updated on: Jan 30, 2022 | 8:26 AM

Share

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರು ತುಸು ಚೇತರಿಸಿಕೊಂಡಿದ್ದಾರೆ ಎಂದು ಅವರ ಆರೋಗ್ಯ ಮೇಲ್ವಿಚಾರಣೆ ಮಾಡುತ್ತಿರುವ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ. ಸುದ್ದಿಸಂಸ್ಥೆ ಎಎನ್​ಐ ಜತೆ ಮಾತನಾಡಿದ ಅವರು, ‘ಲತಾ ಅವರ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆಯಾಗಿದೆ. ಎರಡು ದಿನಗಳ ಹಿಂದೆ ಅವರ ವೆಂಟಿಲೇಟರ್ ಸಂಪರ್ಕ ತೆಗೆಯಲಾಗಿತ್ತು. ಆದರೆ ಲತಾ ಅವರಿನ್ನೂ ಐಸಿಯುವಿನಲ್ಲೇ ಇದ್ದಾರೆ’ ಎಂದು ನುಡಿದಿದ್ದಾರೆ. ಜನವರಿಯ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ (Covid) ಪಾಸಿಟಿವ್ ಆಗಿತ್ತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. 92 ವರ್ಷದ ಲತಾ ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದ್ದು, ಯಾರೂ ತಪ್ಪು ಮಾಹಿತಿ ಅಥವಾ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಅವರ ವಕ್ತಾರರು ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಜತೆಗೆ ಗಾಯಕಿ ಹಾಗೂ ಅವರ ಕುಟುಂಬದ ಖಾಸಗಿತನಕ್ಕೆ ಭಂಗ ತರದಂತೆ ವಕ್ತಾರರು ಕೋರಿಕೊಂಡಿದ್ದರು.

ಎಎನ್​ಐ ಟ್ವೀಟ್ ಇಲ್ಲಿದೆ:

ಲತಾ ಅವರ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಾಗೂ ವದಂತಿಗಳು ಹರಿದಾಡಿದ್ದವು. ಇವುಗಳನ್ನು ಉಲ್ಲೇಖಿಸಿದ್ದ ವಕ್ತಾರರು, ಲತಾ ಅವರ ಖಾತೆಯಿಂದಲೇ ಈ ಹಿಂದೆ ಟ್ವೀಟ್ ಮಾಡಿದ್ದರು. ಲತಾ ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಅದರಲ್ಲಿ ತಿಳಿಸಲಾಗಿತ್ತು. ಜತೆಗೆ ಅವರ ಆರೋಗ್ಯ ಸುಧಾರಣೆಗೆ ಎಲ್ಲರೂ ಪ್ರಾರ್ಥಿಸೋಣ ಎಂದು ಮನವಿ ಮಾಡಲಾಗಿತ್ತು.

ಲತಾ ಅವರ ಆರೋಗ್ಯ ಸುಧಾರಣೆಗೆ ಅಭಿಮಾನಿಗಳು ದೇವರ ಮೊರೆಹೋಗಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಅವರ ಆರೋಗ್ಯ ಸುಧಾರಣೆಗೆ ನಿರಂತರವಾಗಿ ಹಾರೈಕೆ ನಡೆಯುತ್ತಿದೆ. ಕೆಲ ಸಮಯದ ಹಿಂದೆ ಲತಾ ಅವರ ಸಹೋದರಿ ಆಶಾ ಭೋಸ್ಲೆ ಮಾತನಾಡಿದ್ದರು. ಆರೋಗ್ಯ ಸುಧಾರಣೆಗೆ ಮನೆಯಲ್ಲಿ ದೇವರಪೂಜೆ ನಡೆಸಲಾಗುತ್ತಿರುವುದನ್ನು ಅವರು ತಿಳಿಸಿದ್ದರು. ಅಲ್ಲದೇ ಅಭಿಮಾನಿಗಳಲ್ಲಿ ಕೂಡ ಪ್ರಾರ್ಥಿಸಿ ಎಂದು ಕೋರಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಡಾ ಸೌಂದರ್ಯ ಕಾಫಿ ಕುಡಿಯುತ್ತಿದ್ದ ಸ್ಟಾಲ್​​​​ನವರಿಗೆ ಅವರು ಸತ್ತ ನಂತರವೇ ಯಡಿಯೂರಪ್ಪನವರ ಮೊಮ್ಮಗಳು ಅಂತ ಗೊತ್ತಾಗಿದ್ದು

ಉದಯೋನ್ಮುಖ ನಟಿಯ ಜತೆ ಹೃತಿಕ್​ ರೋಷನ್​ ಲವ್ವಿಡವ್ವಿ?​ ಲೀಕ್​ ಆಯ್ತು ಫೋಟೋ

ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ