Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದ ಕುರಿತು ಮಾಹಿತಿ ನೀಡಿದ ವಕ್ತಾರರು; ವದಂತಿಗಳಿಗೆ ಕಿವಿಗೊಡದಂತೆ ಮನವಿ

| Updated By: shivaprasad.hs

Updated on: Jan 22, 2022 | 12:22 PM

Lata Mangeshkar Health Update: ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವದಂಗಿಗಳಿಗೆ ಕಿವಿಗೊಡಬೇಡಿ ಎಂದು ಲತಾ ಅವರ ವಕ್ತಾರರು ಮನವಿ ಮಾಡಿದ್ದಾರೆ.

Lata Mangeshkar: ಲತಾ ಮಂಗೇಶ್ಕರ್ ಆರೋಗ್ಯದ ಕುರಿತು ಮಾಹಿತಿ ನೀಡಿದ ವಕ್ತಾರರು; ವದಂತಿಗಳಿಗೆ ಕಿವಿಗೊಡದಂತೆ ಮನವಿ
ಲತಾ ಮಂಗೇಶ್ಕರ್
Follow us on

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರು ಇನ್ನೂ ಐಸಿಯುವಿನಲ್ಲಿದ್ದು, ಚಿಕಿತ್ಸೆ ಮುಂದುವರೆಸಲಾಗುತ್ತಿದೆ ಎಂದು ಅವರ ವಕ್ತಾರರು ಮಾಹಿತಿ ನೀಡಿದ್ದಾರೆ. ಈ ತಿಂಗಳ ಆರಂಭದಲ್ಲಿ ಲತಾ ಮಂಗೇಶ್ಕರ್ ಅವರಿಗೆ ಕೊರೊನಾ (Covid) ಪಾಸಿಟಿವ್ ಆಗಿತ್ತು. ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿತ್ತು. 92 ವರ್ಷದ ಲತಾ ಅವರು ಇನ್ನೂ ಐಸಿಯುವಿನಲ್ಲೇ ಇದ್ದಾರೆ. ಚಿಕಿತ್ಸೆ ಮುಂದುವರೆಯುತ್ತಿದೆ. ಯಾರೂ ತಪ್ಪು ಮಾಹಿತಿ ಅಥವಾ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಅವರ ವಕ್ತಾರರು ಮನವಿ ಮಾಡಿದ್ದಾರೆ. ಜತೆಗೆ ಗಾಯಕಿ ಹಾಗೂ ಅವರ ಕುಟುಂಬದ ಖಾಸಗಿತನಕ್ಕೆ ಭಂಗ ತರದಂತೆ ವಕ್ತಾರರು ಕೋರಿಕೊಂಡಿದ್ದಾರೆ. ಪ್ರಸ್ತುತ ಲತಾ ಅವರು ಬ್ರೀಚ್ ಆಸ್ಪತ್ರೆಯ ವೈದ್ಯ ಡಾ.ಪ್ರತೀತ್ ಸಮ್ದಾನಿ ಅವರ ಆರೈಕೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ ಸುದ್ದಿಸಂಸ್ಥೆ ಎಎನ್​ಐ ಲತಾ ಮಂಗೇಶ್ಕರ್ ಅವರ ಆರೋಗ್ಯದ ಕುರಿತು ಮಾಹಿತಿ ಬಿಡುಗಡೆ ಮಾಡಿತ್ತು. ಅದರಲ್ಲಿ ಕುಟುಂಬಸ್ಥರು ಹಾಗೂ ವೈದ್ಯರ ಖಾಸಗಿತನ ಗೌರವಿಸುವಂತೆ ಮತ್ತು ಯಾವುದೇ ವದಂತಿಗಳನ್ನು ನಂಬದಂತೆ ತಿಳಿಸಿದ್ದನ್ನು ಉಲ್ಲೇಖಿಸಲಾಗಿತ್ತು. ಈ ವಾರದ ಆರಂಭದಲ್ಲಿ ಲತಾ ಅವರ ಆರೋಗ್ಯದ ಕುರಿತು ಸುಳ್ಳುಸುದ್ದಿಗಳು ಹರಿದಾಡಿದ್ದವು. ಅದನ್ನು ನಿರಾಕರಿಸಿದ್ದ ವಕ್ತಾರರು, ಲತಾ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಎಲ್ಲರೂ ಅವರ ಆರೋಗ್ಯಕ್ಕೆ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದರು.

ಕಳೆದ ವಾರ ವೈದ್ಯ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡುತ್ತಾ, 10-12 ದಿನ ಲತಾ ಅವರನ್ನು ನಿಗಾ ಘಟಕದಲ್ಲಿ ಇಡಲಾಗುವುದು ಎಂದು ತಿಳಿಸಿದ್ದರು. ಕೊರೊನಾ ಜತೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿದೆ ಎಂದು ಅವರು ಹೇಳಿದ್ದರು. ನೆಚ್ಚಿನ ಗಾಯಕಿಯ ಆರೋಗ್ಯ ಸುಧಾರಣೆಗೆ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಲತಾ ಅವರ ಮನೆಯಲ್ಲೂ ವಿಶೇಷ ಪೂಜೆಗಳು ನಡೆಯುತ್ತಿವೆ.

ಇದನ್ನೂ ಓದಿ:

ಸುನೀಲ್​ ಶೆಟ್ಟಿ ಮಕ್ಕಳ ಮದುವೆ ಬಗ್ಗೆ ಸುಳ್ಳು ಸುದ್ದಿ; ಗಾಸಿಪ್ ಹಬ್ಬಿಸಿದವರಿಗೆ ಕ್ಲಾಸ್​ ತೆಗೆದುಕೊಂಡ ಸ್ಟಾರ್​ ನಟ

ಪುನೀತ್​ ನಟನೆಯ ‘ಜೇಮ್ಸ್​’ ಶೂಟಿಂಗ್​ ಮುಕ್ತಾಯ; ರಿಲೀಸ್​ ಡೇಟ್​ ತಿಳಿಯಲು ಕಾದಿರುವ ಅಭಿಮಾನಿಗಳು