AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದೊಂದು ಕೆಲಸ ಮಾಡಿದರೆ ಸಲ್ಮಾನ್ ಖಾನ್ ಅನ್ನು ಕ್ಷಮಿಸುತ್ತೇನೆ: ಲಾರೆನ್ಸ್ ಬಿಷ್ಣೊಯಿ

Lawrence Bishnoi: ಲಾರೆನ್ಸ್ ಬಿಷ್ಣೋಯಿ, ಸಲ್ಮಾನ್ ಖಾನ್ ಅನ್ನು ಕೊಂದೇ ತೀರುವುದಾಗಿ ಶಪತ ಮಾಡಿದ್ದಾನೆ. ಆದರೆ ಸಲ್ಮಾನ್ ಖಾನ್ ಆ ಒಂದು ಕೆಲಸ ಮಾಡಿದರೆ ತಾನು ಸಲ್ಮಾನ್ ಅನ್ನು ಕೊಲ್ಲುವ ಪ್ರಯತ್ನ ನಿಲ್ಲಿಸಿಬಿಡುತ್ತೇನೆ ಎಂದು ಹೇಳಿದ್ದಾನೆ.

ಅದೊಂದು ಕೆಲಸ ಮಾಡಿದರೆ ಸಲ್ಮಾನ್ ಖಾನ್ ಅನ್ನು ಕ್ಷಮಿಸುತ್ತೇನೆ: ಲಾರೆನ್ಸ್ ಬಿಷ್ಣೊಯಿ
ಮಂಜುನಾಥ ಸಿ.
|

Updated on: Oct 17, 2024 | 5:21 PM

Share

ಸಲ್ಮಾನ್ ಖಾನ್​ ಆಪ್ತ, ಮಾಜಿ ಶಾಸಕ ಬಾಬಾ ಸಿದ್ಧಿಕಿಯನ್ನು ಕೆಲ ದಿನಗಳ ಹಿಂದಷ್ಟೆ ಮುಂಬೈನಲ್ಲಿ ಕೆಲ ಅಗಂತುಕರು ಹತ್ಯೆ ಮಾಡಿದ್ದಾರೆ. ಈ ಹತ್ಯೆಯ ಹಿಂದೆ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಇದ್ದಾನೆ ಎನ್ನಲಾಗಿದೆ. ಹತ್ಯೆಯ ಜವಾಬ್ದಾರಿ ಹೊತ್ತುಕೊಂಡಿರುವ ಲಾರೆನ್ಸ್ ಬಿಷ್ಣೋಯಿ ತಂಡ ಮುಂದಿನ ಗುರಿ ಸಲ್ಮಾನ್ ಖಾನ್ ಎಂದಿದೆ. 2008 ರಲ್ಲಿ ಮೊದಲ ಬಾರಿಗೆ ಲಾರೆನ್ಸ್ ಬಿಷ್ಣೋಯಿ, ತಾನು ಸಲ್ಮಾನ್ ಖಾನ್ ಅನ್ನು ಕೊಲ್ಲುವುದಾಗಿ ಹೇಳಿದ್ದ. ಅಂದಿನಿಂದ ಇಂದಿನ ವರೆಗೂ ಪ್ರಯತ್ನ ಮಾಡುತ್ತಲೇ ಇದ್ದಾನೆ. ಸಲ್ಮಾನ್ ಖಾನ್ ಅನ್ನು ಕೊಂದೇ ತೀರುತ್ತೇನೆ ಎಂದು ಲಾರೆನ್ಸ್ ಹೇಳಿಕೊಂಡಿದ್ದಾನೆ. ಆದರೆ ಸಲ್ಮಾನ್ ಖಾನ್ ತಾನು ಹೇಳಿದ ಒಂದು ಕೆಲಸ ಮಾಡಿದರೆ ಆತನನ್ನು ಜೀವಂತ ಬಿಡುವುದಾಗಿ ಹೇಳಿದ್ದಾನೆ.

ಕೆಲ ವರ್ಷಗಳ ಹಿಂದಿನಿಂದಲೂ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯಿ, ಜೈಲಿನ ಒಳಗಿನಿಂದಲೇ ವಿಡಿಯೋ ಕಾಲ್ ಮೂಲಕ ಎಬಿಪಿ ಚಾನೆಲ್​ಗೆ ಸಂದರ್ಶನ ನೀಡಿದ್ದ. ಆ ಸಮಯದಲ್ಲಿ ‘ಸಲ್ಮಾನ್ ಖಾನ್ ಅನ್ನು ಕೊಲ್ಲುವುದೇ ನನ್ನ ಜೀವನದ ಗುರಿ’ ಎಂದಿದ್ದ. ಅದೇ ಸಂದರ್ಶನದಲ್ಲಿ, ಸಂದರ್ಶಕ, ‘ಈ ರಕ್ತಪಾತ ಆಗದೆ ಇರಬೇಕೆಂದರೆ ಸಲ್ಮಾನ್ ಖಾನ್ ಏನು ಮಾಡಬೇಕು? ಹೇಗೆ ಸಲ್ಮಾನ್ ಖಾನ್ ಕ್ಷಮೆ ಕೇಳಬಹುದು?’ ಎಂದು ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ:‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಅದಕ್ಕೆ ಉತ್ತರಿಸಿದ್ದ ಲಾರೆನ್ಸ್ ಬಿಷ್ಣೋಯಿ, ‘ನಮ್ಮ ಬಿಷ್ಣೋಯಿಗಳ ದೇವಾಲಯ ಮುಕ್ತಿಧಾಮ ಮುಕಾಮ್ ರಾಜಸ್ಥಾನದ ಬಿಕಾನೆರ್ ಜಿಲ್ಲೆಯ ನೋಕಾ ತೆಹಶಿಲ್​ನಲ್ಲಿದೆ, ಅಲ್ಲಿಗೆ ಹೋಗಿ ಕ್ಷಮೆ ಕೇಳಿ ಬಿಡಲಿ ಸಾಕು. ನನ್ನಿಂದ ತಪ್ಪಾಗಿದೆ, ಆಗದೆಯೂ ಇರಬಹುದು ಆದರೆ ಆರೋಪ ಬಂದಿದೆ. ನನ್ನಿಂದ ಈ ಸಮುದಾಯದ ಮನೋಭಾವನೆಗೆ ಧಕ್ಕೆ ಬಂದಿದೆ ಹಾಗಾಗಿ ಕ್ಷಮೆ ಕೇಳುತ್ತೇನೆ ಎಂದು ಆ ದೇವಸ್ಥಾನದಲ್ಲಿ ನಿಂತು ಹೇಳಲಿ ಸಾಕು, ನಾನು ಆತನನ್ನು ಬಿಟ್ಟುಬಿಡುತ್ತೇನೆ. ಆತನನ್ನು ಕೊಲ್ಲುವ ಪ್ರಯತ್ನ ಮಾಡುವುದಿಲ್ಲ’ ಎಂದಿದ್ದ ಲಾರೆನ್ಸ್ ಬಿಷ್ಣೋಯಿ.

ಬಹುತೇಕರಿಗೆ ತಿಳಿದಿರುವಂತೆ ಸಲ್ಮಾನ್ ಖಾನ್ ಮೇಲೆ ಕೃಷ್ಣಮೃಗವನ್ನು ಕೊಂದ ಆರೋಪ ಇದೆ. ಕೃಷ್ಣಮೃಗ ಬಿಷ್ಣೋಯಿ ಸಮುದಾಯದ ಪಾಲಿಗೆ ದೇವರು. ತಮ್ಮ ದೇವರನ್ನು ಕೊಂದಿದ್ದಾರೆ ಎಂದು ಆರೋಪಿಸಿ ಬಿಷ್ಣೋಯ ಸಮುದಾಯಕ್ಕೆ ಸೇರಿದ ಪಾತಕಿ ಲಾರೆನ್ಸ್ ಬಿಷ್ಣೋಯಿ ಸಲ್ಮಾನ್ ಖಾನ್ ಅನ್ನು ಕೊಲ್ಲುವ ನಿರ್ಣಯ ಮಾಡಿದ್ದ. ಲಾರೆನ್ಸ್ ಬಿಷ್ಣೋಯಿ ಮೊದಲ ಬಾರಿಗೆ 2008 ರಲ್ಲಿ ಈ ಬಗ್ಗೆ ಮಾತನಾಡಿದ್ದ, ಅದಕ್ಕೂ ಮುಂಚೆ ಆತನ ಮೇಲೆ ಹಲವು ಕೊಲೆ, ಬೆದರಿಕೆ ಪ್ರಕರಣಗಳು ದಾಖಲಾಗಿದ್ದವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ