AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಹತ್ಯೆಗೆ ಖರೀದಿ ಆಗಿತ್ತು 4 ಲಕ್ಷ ರೂಪಾಯಿ ಗನ್; ಹೊರಬಿತ್ತು ಶಾಕಿಂಗ್ ನ್ಯೂಸ್

ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣ ಇನ್ನೂ ಕೋರ್ಟ್​ನಲ್ಲಿದೆ. ಈ ಪ್ರಕರಣದಲ್ಲಿ ಹಗೆ ತೀರಿಸಿಕೊಳ್ಳಲು ಲಾರೆನ್ಸ್ ಸಂಚು ರೂಪಿಸಿದ್ದ ಎನ್ನಲಾಗಿದೆ.

ಸಲ್ಮಾನ್ ಖಾನ್ ಹತ್ಯೆಗೆ ಖರೀದಿ ಆಗಿತ್ತು 4 ಲಕ್ಷ ರೂಪಾಯಿ ಗನ್; ಹೊರಬಿತ್ತು ಶಾಕಿಂಗ್ ನ್ಯೂಸ್
ಸಲ್ಮಾನ್ ಖಾನ್
TV9 Web
| Edited By: |

Updated on:Jul 12, 2022 | 10:10 PM

Share

ಗ್ಯಾಂಗ್​​ಸ್ಟರ್​ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಪೊಲೀಸರ ವಶದಲ್ಲಿದ್ದಾನೆ. ಪಂಜಾಬಿ ಸಿಂಗರ್ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡುವಲ್ಲಿ ಈತನ ಕೈವಾಡ ಇದೆ ಎಂದು ಹೇಳಲಾಗಿತ್ತು. ಈ ಕಾರಣಕ್ಕೆ ಲಾರೆನ್ಸ್ ವಿಚಾರಣೆ ಮಾಡಲಾಗುತ್ತಿದೆ. ಸಲ್ಮಾನ್ ಖಾನ್ (Salman Khan) ಅವರನ್ನು ಹತ್ಯೆ ಮಾಡಲು ಈತ ಸಂಚು ರೂಪಿಸಿದ ವಿಚಾರವನ್ನು ಬಿಚ್ಚಿಟ್ಟಿದ್ದಾನೆ. ಇದಕ್ಕಾಗಿ ಆತ 4 ಲಕ್ಷ ರೂಪಾಯಿ ಗನ್ ಕೂಡ ಖರೀದಿ ಮಾಡಿದ್ದ.

1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ಸಲ್ಮಾನ್​ ಖಾನ್​ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು. ಅವರು ಸಿನಿಮಾ ತಂಡದ ಕೆಲವರ ಜತೆ ಸಫಾರಿಗೆ ಹೋಗಿದ್ದರು. ಆ ಸಮಯದಲ್ಲಿ ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣ ಇನ್ನೂ ಕೋರ್ಟ್​ನಲ್ಲಿದೆ. ಈ ಪ್ರಕರಣದಲ್ಲಿ ಹಗೆ ತೀರಿಸಿಕೊಳ್ಳಲು ಲಾರೆನ್ಸ್ ಸಂಚು ರೂಪಿಸಿದ್ದ ಎನ್ನಲಾಗಿದೆ.

ಬಿಷ್ಣೋಯ್ ಸಮುದಾಯದವರು ಪ್ರಕೃತಿ ಆರಾಧಕರು. ವನ್ಯಜೀವಿ ಸಂರಕ್ಷಣೆಗಾಗಿ ಅವರು ಪ್ರಾಣವನ್ನು ಬೇಕಾದರೂ ನೀಡುತ್ತಾರೆ. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದರು.

ಇದನ್ನೂ ಓದಿ
Image
Salman Khan: ಸಲ್ಮಾನ್ ಖಾನ್ ಚಿತ್ರದಲ್ಲಿ 10 ನಾಯಕಿಯರು..!
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ

ಇದನ್ನೂ ಓದಿ: ಸಲ್ಮಾನ್ ಖಾನ್ ‘ಹಿಟ್​ ಆಂಡ್ ರನ್’ ಪ್ರಕರಣವನ್ನು ಹೋಲುವ ‘ಸೆಲ್ಮೋನ್ ಭಾಯಿ’ ಗೇಮ್​ಗೆ ಕೋರ್ಟ್ ತಡೆ; ಏನಿದು ಪ್ರಕರಣ?

2018ರಲ್ಲಿ ಸಲ್ಮಾನ್ ಖಾನ್ ಹತ್ಯೆ ಮಾಡುವಂತೆ ಸಂಪತ್ ನೆಹ್ರಾಗೆ ಲಾರೆನ್ಸ್ ಸೂಚನೆ ನೀಡಿದ್ದ. ಸಂಪತ್​ನನ್ನು ಮುಂಬೈಗೆ ಕಳುಹಿಸಲಾಗಿತ್ತು. ಸಲ್ಮಾನ್ ಖಾನ್ ಮನೆಯ ಸಮೀಪ ಸಂಪತ್ ಸಾಕಷ್ಟು ಸುತ್ತಾಟ ನಡೆಸಿದ್ದ. ಆತನ ಬಳಿ ಸಣ್ಣ ಗನ್ ಮಾತ್ರ ಇತ್ತು. ದೂರದಿಂದ ಈ ಗನ್​ನಲ್ಲಿ ಶೂಟ್​ ಮಾಡುವುದು ಅಸಾಧ್ಯವಾಗಿತ್ತು. ಹೀಗಾಗಿ, ದಿನೇಶ್ ದಗಾರ್ ಮೂಲಕ ನಾಲ್ಕು ಲಕ್ಷ ರೂಪಾಯಿ ಗನ್ ಖರೀದಿ ಮಾಡಲಾಗಿತ್ತು. ದಿನೇಶ್ ಬಂಧನದ ವೇಳೆ ಈ ಗನ್ ವಶಕ್ಕೆ ಪಡೆಯಲಾಯಿತು. ಇದನ್ನು ಸಲ್ಮಾನ್ ಖಾನ್ ಹತ್ಯೆ ಮಾಡಲೆಂದೇ ಖರೀದಿ ಮಾಡಲಾಗಿತ್ತು ಎಂಬ ವಿಚಾರ ಈಗ ಗೊತ್ತಾಗಿದೆ.

Published On - 9:45 pm, Tue, 12 July 22

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ